![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 29, 2023, 2:15 PM IST
ಮಹದೇವಪುರ: ಕುಂದಲಹಳ್ಳಿ ಸುತ್ತಮುತ್ತ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದ್ದು, ರಾತ್ರಿ ವೇಳೆ ಚಿರತೆ ಓಡಾಟ ನಡೆಸಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ.
ಬ್ರೂಕ್ ಫೀಲ್ಡ್‌ನ ಎಇಸಿಎಸ್ ಲೇಔಟ್ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ರಾತ್ರಿ ವೇಳೆ ಕಾರಿಗೆ ಅಡ್ಡಲಾಗಿ ಚಿರತೆಯೊಂದು ಓಡಿದೆ ಎನ್ನಲಾಗುತ್ತಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಎಇಸಿಎಸ್ ಲೇಔಟ್‌ನ ಬ್ಲಾಕ್‌ನಲ್ಲಿ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಚಿರತೆ ಕಾಣಿಸಿಕೊಂಡ ಕಾರಣ ಸಾರ್ವಜನಿಕರು ಆತಂಕದಲ್ಲೇ ಓಡಾಡುವಂತಾಗಿದ್ದು, ರಾತ್ರಿ ಸಮಯ ಒಬ್ಬಂಟಿಯಾಗಿ ಓಡಾಡದಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಅರಣ್ಯಾಧಿಕಾರಿಗಳು ಚಿರತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.