ವೈದ್ಯ ಕ್ಷೇತ್ರಕ್ಕೆ ಹೆಚ್ಚು ಮಹಿಳೆಯರು ಬರಲಿ
Team Udayavani, Jul 1, 2019, 3:06 AM IST
ಬೆಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ಮತ್ತಷ್ಟು ಮಾತೃ ವಾತ್ಸಲ್ಯ ಕಾಣಬೇಕೆಂದರೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಬರಬೇಕು ಎಂದು ರಾಜ್ಯಪಾಲ ವಜುಭಾಯ್ ವಾಲಾ ಅಭಿಪ್ರಾಯ ಪಟ್ಟರು.
ಜೆಪಿ ನಗರದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಆಸ್ಟರ್ ಆರ್.ವಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಹೆಚ್ಚೆಚ್ಚು ವೈದ್ಯಕೀಯ ಕ್ಷೇತ್ರದಲ್ಲಿ ಕಾಣಿಸಿಕೊಂಡಾಗ ಆಸ್ಪತ್ರೆಗಳಲ್ಲಿ ಇಡೀ ವಾತಾವರಣ ಮಾತೃ ವಾತ್ಸಲ್ಯವಾಗಿ ರೂಪಾಂತರವಾಗುತ್ತದೆ ಎಂದು ಹೇಳಿದರು.
ಮಹಿಳೆಯರು ಈಗಾಗಲೇ ಸಶಕ್ತರಾಗಿದ್ದು, ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಕಾನೂನು ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡಿದ್ದು, ಕೃಷಿ ಪದವಿಯಲ್ಲಿ ಸಾಧನೆ ಮಾಡಿದ್ದಾರೆ. ಅವಕಾಶ ನೀಡಿದರೆ ಮಹಿಳೆಯರು ದೇಶವನ್ನು ಮತ್ತಷ್ಟು ಬೆಳಗಬಲ್ಲರು ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಐಟಿಬಿಟಿ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಸಿಲಿಕಾನ್ ಸಿಟಿ ಬೆಂಗಳೂರು, ಈಗ ವೈದ್ಯಕೀಯ ಹಬ್ ಆಗಿ ಬೆಳೆಯುತ್ತಿದೆ. ಉತ್ತಮ ಆರೋಗ್ಯ ಸೇವೆಗಳು ಇಲ್ಲಿ ದೊರಕುತ್ತಿದ್ದು ವಿದೇಶಿಯರಲ್ಲೂ ವಿಶ್ವಾಸ ಮೂಡಿಸಿದೆ.
ಇಡೀ ವಿಶ್ವ ಆರೋಗ್ಯದ ದೃಷ್ಟಿಯಿಂದ ಬೆಂಗಳೂರಿನತ್ತ ನೋಡುತ್ತಿದ್ದು, ಇಲ್ಲಿಯೂ ಅತ್ಯುತ್ತಮ ಸೇವೆಗಳ ಜತೆಗೆ ಉತ್ತಮ ವೈದ್ಯರಿದ್ದಾರೆ. ಹೀಗಾಗಿ ನಮ್ಮಲ್ಲಿರುವ ವೈದ್ಯಕೀಯ ಸೇವೆಯನ್ನು ಜನರು ಬಳಸಿಕೊಳ್ಳಬೇಕು ಎಂದರು.
ಆರೋಗ್ಯವೆ ಸಂಪತ್ತು: ಆರ್ಥಿಕವಾಗಿ ಸಬಲರಾಗಿರುವವರು ಭೂಮಿ ಮತ್ತು ಹಣವನ್ನು ಸಮಾಜ ಸೇವೆಗೆ ವಿನಿಯೋಗಿಸುವ ಕಡೆಗೆ ಆಲೋಚಿಸಬೇಕು. ನಮ್ಮ ಬಳಿ ಹಣ, ಕಾರು, ಬಂಗಲೆ, ಸಂಪತ್ತು ಇದ್ದರೂ, ಆರೋಗ್ಯವಿಲ್ಲದಿದ್ದರೆ ಎಲ್ಲವೂ ವ್ಯರ್ಥ. ಇದನ್ನು ಇಡೀ ಮನುಷ್ಯ ಸಂಕುಲ ಅರಿಯಬೇಕು ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಕೂಡ ಜನರ ಆರೋಗ್ಯ ಸೇವೆಗಾಗಿ ಹಲವು ಯೋಜನೆಗಳನ್ನು ರೂಪಿಸಿದೆ. ಇಂತಹ ಯೋಜನೆಗಳನ್ನು ಸದುಉಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಶಾಸಕಿ ಸೌಮ್ಯಾ ರೆಡ್ಡಿ, ಆಸ್ಟರ್ ಹೆಲ್ತ್ ಕೇರ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಆಜಾದ್ ಮೂಪೆನ್, ಆರ್.ವಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಪಾಂಡುರಂಗಶೆಟ್ಟಿ, ಪಾಲಿಕೆ ಸದಸ್ಯೆ ಮಾಲತಿ ಸೋಮಶೇಖರ್, ಆರ್.ವಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಎ.ವಿ.ಎಸ್.ಮೂರ್ತಿ, ಆಸ್ಟರ್ ಆಸ್ಪತ್ರೆಯ ಸಿಇಒ ಡಾ.ಹರೀಶ್ ಪಿಳೈ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.