ನ್ಯಾಯಮಂಡಳಿಗೆ ಪರಿಕ್ಕರ್ ಪತ್ರ ಬರೆಯಲಿ: ಸಿದ್ದರಾಮಯ್ಯ
Team Udayavani, Jan 2, 2018, 6:50 AM IST
ಬೆಂಗಳೂರು: ಮಹದಾಯಿ ವಿಚಾರದಲ್ಲಿ ತಮ್ಮೊಂದಿಗೆ ಮಾತುಕತೆ ನಡೆಸಲು ಇಷ್ಟ ಇಲ್ಲದಿದ್ದರೆ ಕರ್ನಾಟಕಕ್ಕೆ ನೀರು ಬಿಡಲು ಸಿದ್ದ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನ್ಯಾಯಮಂಡಳಿಗೆ ಪತ್ರ ಬರೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ವಿವಿ ಕುಲಸಚಿವ ಪ್ರೊ. ಬಿ.ಕೆ. ರವಿ ಅವರ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಡಿಸೆಂಬರ್ 15 ರೊಳಗೆ ಮಹದಾಯಿ ನೀರು ಹರಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದರು. ಹುಬ್ಬಳ್ಳಿ ಸಮಾವೇಶದಲ್ಲಿ ಗೋವಾ ಮುಖ್ಯಮಂತ್ರಿ ಬರೆದ ಪತ್ರವನ್ನೂ ಓದಿದರು. ಮರುದಿನವೇ ಗೋವಾ ಮುಖ್ಯಮಂತ್ರಿಗೆ ಪತ್ರ ಬರೆದು ಮಾತುಕತೆಗೆ ಸಿದ್ದ ಎಂದು ತಿಳಿಸಿದ್ದೇನೆ. ಆದರೆ, ಅವರಿಂದ ಯಾವುದೇ ಉತ್ತರ ಬರಲಿಲ್ಲ. ನಾನು ಬರೆದ ಎರಡು ಪತ್ರಗಳಿಗೂ ಉತ್ತರ ಸಿಕ್ಕಿಲ್ಲ. ಆದರೆ, ಗೋವಾ ಜಲ ಸಂಪನ್ಮೂಲ ಸಚಿವರು ಪರಿಕ್ಕರ್ ಮತ್ತು ಯಡಿಯೂರಪ್ಪ ನಾಟಕವಾಡಿದ್ದಾರೆ ಎಂದಿದ್ದಾರೆ. ಇದು ರಾಜಕೀಯ ಸ್ಟಂಟ್ ಎಂದು ಸಿಎಂ ತಿಳಿಸಿದ್ದಾರೆ.
ಈ ಮಧ್ಯೆ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್, ಪರಿಕ್ಕರ್ ಯಡಿಯೂರಪ್ಪಗೆ ಬರೆದ ಪತ್ರವನ್ನು ರಾಜ್ಯ ಸರ್ಕಾರ ನ್ಯಾಯಮಂಡಳಿ ಮುಂದೆ ಇಡಲಿ ಎಂದು ಹೇಳಿಕೆ ಕೊಟ್ಟಿದ್ದಾರೆ. ಇದಕ್ಕಿಂತ ನಗೆಪಾಟಲಿನ ವಿಚಾರ ಬೇರೊಂದಿಲ್ಲ. ಶೆಟ್ಟರ್ ವಕೀಲರಾಗಿದ್ದವರು. ಒಬ್ಬ ಮುಖ್ಯಮಂತ್ರಿ ಮತ್ತೂಬ್ಬ ಮುಖ್ಯಮಂತ್ರಿಗೆ ಪತ್ರ ಬರೆಯಬೇಕು. ಈ ವಿಚಾರವೂ ಶೆಟ್ಟರ್ ಅವರಿಗೆ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಎಷ್ಟು ಬಾರಿಯಾದರೂ ಕರ್ನಾಟಕಕ್ಕೆ ಬರಲಿ ಅವರು ಏನಾದರೂ ಹೇಳಿಕೊಳ್ಳಲಿ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಿ ಚಾರ್ಜ್‌ಶೀಟ್ ಬಿಡುಗಡೆ ಮಾಡುವಂತೆ ಅಮಿತ್ ಷಾ ಹೇಳಿದ್ದಾರೆ. ನನ್ನ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿದ್ದೂ ಆಯಿತು. ಹಾವಿಲ್ಲದೇ ಪುಂಗಿ ಊದುತ್ತಿದ್ದಾರೆ ಎಂದು ಸಿಎಂ ಕುಹಕವಾಡಿದರು.
ಬಿಜೆಪಿಯಲ್ಲಿ ಗುಂಪುಗಾರಿಕೆ ಶುರುವಾಗಿದೆ. ಯಡಿಯೂರಪ್ಪ ಅವರ ಪರಿವರ್ತನಾ ಯಾತ್ರೆಗೆ ಶೋಭಾ ಕರಂದ್ಲಾಜೆಯೇ ಹೋಗುತ್ತಿಲ್ಲ. ಹೋದ ಕಡೆಯಲ್ಲಾ ಯಡಿಯೂರಪ್ಪ ಅಭ್ಯರ್ಥಿಗಳ ಘೋಷಣೆ ಮಾಡುತ್ತಿದ್ದಾರೆ. ಈ ಸಂಬಂಧ ಪಕ್ಷದ ನಾಯಕರು ಅಮಿತ್ ಷಾಗೆ ದೂರು ನೀಡಿದ್ದಾರೆ. ಹೀಗಾಗಿ ಅಮಿತ್ ಷಾ ಅಭ್ಯರ್ಥಿಗಳನ್ನು ಯಾರೂ ಘೋಷಣೆ ಮಾಡುವಂತಿಲ್ಲ ಎಂದು ತಾಕೀತು ಮಾಡಿದ್ದಾರೆ. ಈ ಮೂಲಕ ಯಡಿಯೂರಪ್ಪ ಬಾಯಿಗೆ ಬೀಗ ಹಾಕಿದ್ದಾರೆ ಎಂದು ಹೇಳಿದರು.
ಹೋದ ಕಡೆಯಲ್ಲೆಲ್ಲಾ ಜನರು ಪ್ರಶ್ನೆ ಮಾಡುತ್ತಾರೆ ಎಂದು ಯಡಿಯೂರಪ್ಪ ಪರಿಕ್ಕರ್ ಅವರು ಬರೆದ ಪತ್ರ ಓದಿದ್ದಾರೆ.ಈ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದರು.
ಗೌಡರದು ರಾಜಕೀಯ ಹೇಳಿಕೆ: ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಕ್ಷದ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಮಾಜಿ ಪ್ರಧಾನಿ ದೇವೇಗೌಡ ಅವರ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಸರ್ಕಾರದ ಹಣ ಬಳಕೆ ಮಾಡಿದರೆ ಅದು ಹೇಗೆ ದುರುಪಯೋಗವಾಗುತ್ತದೆ ಎಂದು ಪ್ರಶ್ನಿಸಿದರು.
ಡಿನೋಟಿಫೀಕೇಶನ್ ಮಾಡಿಲ್ಲ: ಭೂಪಸಂದ್ರದಲ್ಲಿ ಡಿ ನೊಟಿಫೀಕೇಶನ್ ಮಾಡಿದ್ದೇನೆ ಎಂದು ಬಿಜೆಪಿಯವರು ದಾಖಲೆ ತೋರಿಸಲಿ, ಶಾಸಕ ವಸಂತ ಬಂಗೇರ ನೀಡಿರುವ ಮನವಿ ಮೇಲೆ ಪರಿಶೀಲಿಸಿ ಎಂದು ಬರೆದಿದ್ದೇನೆ ಅದನ್ನೇ ಡಿ ನೋಟಿಫೀಕೇಶನ್ ಎಂದು ಬಿಜೆಪಿಯವರು ಭಾವಿಸಿದ್ದಾರೆ. ಇಡೀ ಕಡತದಲ್ಲಿ ನನ್ನ ಸಹಿ ಇಲ್ಲ. ಸುಳ್ಳು ದೂರು ತೆಗೆದುಕೊಂಡು ಹೋದರೆ, ಯಾರು ತನಿಖೆಗೆ ಒಪ್ಪಿಗೆ ಸೂಚಿಸುತ್ತಾರೆ. ಯಡಿಯೂರಪ್ಪ ಅವಧಿಯಲ್ಲಿ ಬರೀ ಡಿ ನೊಟಿಫಿಕೇಶನ್ ಮಾಡಿದ್ದರಿಂದ ನಾನೂ ಅದನ್ನೇ ಮಾಡಿರಬಹುದೆಂದು ಊಹಿಸಿಕೊಂಡು ಬಿಜೆಪಿಯವರು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.