ರಾಜ್ಯದಲ್ಲೂ ಪ್ರಾದೇಶಿಕ ಪಕ್ಷ ಪ್ರಬಲವಾಗಲಿ

Team Udayavani, Nov 24, 2017, 12:27 PM IST

devegowda.jpg

ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷದ ಅಗತ್ಯತೆ ಜನರ ಅರಿವಿಗೂ ಬಂದಿದೆ. ಇದರ ಪರಿಣಾಮ ರಾಜ್ಯಾದ್ಯಂತ ಜೆಡಿಎಸ್‌ ಪರ ವಾತಾವರಣ ನಿರ್ಮಾಣವಾಗಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೆಗೌಡ ಹೇಳಿದರು.

ಗುರುವಾರ ಹೆಬ್ಟಾಳ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಕಚೇರಿ ಉದ್ಘಾಟಿಸಿ ಮಾತನಾಡಿ, ನೆರೆಯ ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಬಲವಾಗಿವೆ. ಈ ಕಾರಣದಿಂದಲೇ ಅಲ್ಲಿ ರಾಷ್ಟ್ರೀಯ ಪಕ್ಷಗಳು ಏನೂ ಮಾಡಲಾಗದೆ ಪ್ರಾದೇಶಿಕ ಪಕ್ಷಗಳ ಮೊರೆ ಹೋಗುತ್ತವೆ. ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯವಿದ್ದು, ಈ ಜನರು ಬಾರಿ ಜೆಡಿಎಸ್‌ಗೆ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ತಮಿಳುನಾಡಿನ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ನಿರ್ಣಾಯಕವಾಗಿರುವುದರಿಂದಲೇ ಪ್ರಧಾನಿ ಮೋದಿ ಡಿಎಂಕೆ ನಾಯಕ ಕರುಣಾನಿಧಿ ಅವರನ್ನು ರಾಜಕೀಯ ಹಿತಾಸಕ್ತಿಗಾಗಿ ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಾರೆ. ಅದೇ ರೀತಿ ನಮ್ಮ ರಾಜ್ಯದಲ್ಲಿಯೂ ಪ್ರಾದೇಶಿಕ ಪಕ್ಷಗಳಿಗೆ ಶಕ್ತಿ ನೀಡುವ ಮೂಲಕ ಕನ್ನಡಿಗರು ಸ್ವಾಭಿಮಾನ ತೋರಬೇಕಿದೆ ಎಂದರು.

9 ಟಿಎಂಸಿ ನೀರು: ತಾವು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿಗೆ ಕುಡಿವ ನೀರಿಗಾಗಿ ಕಾವೇರಿಯಿಂದ 9 ಟಿಎಂಸಿ ನೀರು ನೀಡುವಂತೆ ಕಡತ ಕಳುಹಿಸಲಾಗಿತ್ತು. ಇದಕ್ಕೆ ವಿರೋಧಿಸಿದ್ದ ತ.ನಾಡು ಕೇಂದ್ರದ ಮೇಲೆ ಒತ್ತಡ ತಂದು ನಿರ್ಧಾರವಾಗದಂತೆ ನೋಡಿಕೊಂಡಿತ್ತು. ನಂತರದಲ್ಲಿ ತಾವು ಪ್ರಧಾನ ಮಂತ್ರಿಯಾದಾಗ ಕುಡಿಯುವ ನೀರಿನ ಉದ್ದೇಶಕ್ಕಾಗಿ ಎಂದು ಮನವರಿಗೆ ಮಾಡಿಕೊಟ್ಟು ಬೆಂಗಳೂರಿಗೆ 9 ಟಿಎಂಸಿ ನೀರು ಬರುವಂತೆ ಮಾಡಲಾಗಿದೆ. ಪ್ರಾದೇಶಿಕ ಪಕ್ಷವಿದ್ದರೆ ಇಂತಹ ಕೆಲಸಗಳು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಸಾಧನೆ ಪುಸ್ತಕ: ದೇಶದ ಪ್ರಧಾನಿಯಾಗಿ ಹಾಗೂ ರಾಜ್ಯದ ಮುಖ್ಯಮಂತ್ರಿಯಾಗಿ ತಾವು ಮಾಡಿರುವ ಸಾಧನೆಗಳ ಕುರಿತು ಪುಸ್ತಕ ಸಿದ್ಧಪಡಿಸಲಾಗುತ್ತಿದ್ದು, ಡಿ.10ರಂದು ಬಿಡುಗಡೆಗೊಳ್ಳಲಿದೆ. ಆ ಪುಸ್ತಕದಲ್ಲಿ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ತಾವು ಕೈಗೊಂಡಿರುವ ಸಾಧನೆಗಳ ಮಾಹಿತಿಯಿದೆ. ಪಕ್ಷದ ಸಾಧನೆಗಳನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸುವ ಮೂಲಕ ಮತ್ತೆ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಬೇಕು ಎಂದು ಮನವಿ ಮಾಡಿದರು.

“ದಿಸ್‌ ಈಸ್‌ ನಾಟ್‌ ಎ ಗುಡ್‌ ಪಾಲಿಟಿಕ್ಸ್‌’: ನನಗೆ ಮಖ್ಯಮಂತ್ರಿ ಸ್ಥಾನ ತಪ್ಪಿಸಲಾಯಿತು ಎಂದು ಸಿಎಂ ಸಿದ್ದರಾಮಯ್ಯ ಪದೇಪದೆ ಹೇಳುತ್ತಿರುವುದಕ್ಕೆ ದೇವೇಗೌಡರು ತರಾಟೆಗೆ ತೆಗೆದುಕೊಂಡರು. “ನಮ್ಮದೇ ಪಕ್ಷದಲ್ಲಿದ್ದ ಆ ಮಹಾನುಭಾವ ಈಗ ಮುಖ್ಯಮಂತ್ರಿಯಾಗಿ ಹಳೆಯದನ್ನು ಮರೆತಿದ್ದಾರೆ.

ಆ ಸಂದರ್ಭದಲ್ಲಿ 38 ಲಿಂಗಾಯತ ಶಾಸಕರು ಗೆದ್ದಿದ್ದರಿಂದ ಜೆ.ಎಚ್‌ ಪಟೇಲ್‌ರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಯಿತು. ಆದರೆ, ಸಿದ್ದರಾಮಯ್ಯ ಕಡೆಯವರು ಕೇವಲ ಮೂವರು ಗೆದ್ದಿದ್ದರು. ಇದೆಲ್ಲ ಅವರಿಗೆ ಗೊತ್ತಿಲ್ಲವೇ? ಈಗ ಕಾಂಗ್ರೆಸ್‌ನಲ್ಲಿ ಅಧಿಕಾರ ಸಿಕ್ಕಿದೆ ಎಂದು ನಮ್ಮ ವಿರುದ್ಧ ಪ್ರಹಾರ ಮಾಡುತ್ತಿದ್ದಾರೆ. ದಿಸ್‌ ಈಸ್‌ ನಾಟ್‌ ಎ ಗುಡ್‌ ಪಾಲಿಟಿಕ್ಸ್‌ ಎಂದು ಟಾಂಗ್‌ ನೀಡಿದರು.

ಟಾಪ್ ನ್ಯೂಸ್

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.