22ರವರೆಗೆ ಹೆಸರು ಸೇರಿಸಲು ಅವಕಾಶ


Team Udayavani, Jan 13, 2018, 6:25 AM IST

State-Chief-Electoral-Offic.jpg

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ, ಪಟ್ಟಿಯಿಂದ ಹೆಸರು ತೆಗೆಯುವಿಕೆಗೆ ಜ.22 ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ ಈ ಹಿಂದೆ ಜ.12 ರವರೆಗೂ ಇದ್ದ ಗಡುವು ಹತ್ತು ದಿನ ವಿಸ್ತರಿಸಲಾಗಿದ್ದು, ಈ ಅವಧಿಯಲ್ಲಿ ರಾಜ್ಯದ ಎಲ್ಲ ಮತಗಟ್ಟೆಗಳ ವ್ಯಾಪ್ತಿಯಲ್ಲೂ ಅಧಿಕಾರಿಗಳು ಮನೆ ಮನೆಗೆ ತೆರಳಿ ಪರಿಷ್ಕರಣೆ ಕಾರ್ಯ ಕೈಗೊಳ್ಳಲಿದ್ದಾರೆ. ಫೆ.28 ಕ್ಕೆ ಮತದಾರರ ಅಂತಿಮ ಪಟ್ಟಿ ಪ್ರಕಟಗೊಳ್ಳಲಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್‌, ಕೇಂದ್ರ ಚುನಾವಣಾ ಆಯೋಗದ ಆದೇಶದ ಮೇರೆಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ಜ.22 ರವರೆಗೂ ದಿನಾಂಕ ವಿಸ್ತರಿಸಲಾಗಿದ್ದು, ಎಲ್ಲ ಮತಗಟ್ಟೆ ಅಧಿಕಾರಿಗಳು, ವಿಧಾನಸಭಾ ಕ್ಷೇತ್ರಾವಾರು ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳು  ಈ ಅವಧಿಯಲ್ಲಿ ಅಭಿಯಾನದ ಮೂಲಕ ಮತದಾರರ ಹೆಸರು ಸೇರ್ಪಡೆ, ವಿಳಾಸ ಬದಲಾವಣೆ, ರದ್ದುಪಡಿಸುವಿಕೆ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಲು ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರರಿಗೂ ಮೇಲುಸ್ತುವಾರಿ ವಹಿಸಲು ತಿಳಿಸಲಾಗಿದೆ ಎಂದು ಹೇಳಿದರು.

ರಾಜಕೀಯ ಪಕ್ಷಗಳು  ಈ ಕಾರ್ಯದಲ್ಲಿ ನಮಗೆ ಸಹಕಾರ ನೀಡಬೇಕು. ಈ ಹಿಂದೆ ಎರಡು ಬಾರಿ ಪರಿಷ್ಕರಣೆ ಗುಡುವು ವಿಸ್ತರಿಸಿದಾಗಲೂ ಮನವಿ ಮಾಡಿದ್ದೆವು. ಆದರೆ, ನಿರೀಕ್ಷಿತ ಸಹಕಾರ ಸಿಕ್ಕಿಲ್ಲ.  ಈ ಬಾರಿಯಾದರೂ ತಮ್ಮ ತಮ್ಮ ಮತಗಟ್ಟೆ ಏಜೆಂಟರು ಅಥವಾ ಮುಖಂಡರಿಗೆ  ಈ ಬಗ್ಗೆ ಸೂಚನೆ ನೀಡಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಪರಿಪೂರ್ಣವಾಗಲು ನೆರವಾಗಬೇಕು ಎಂದು ಕೋರಿದರು.

ಆ ಕ್ಷೇತ್ರ ಅಥವಾ ಮತಗಟ್ಟೆ ವ್ಯಾಪ್ತಿಗೆ ಬಾರದವರು, ಬೋಗಸ್‌ ಮತದಾರರು, ಮೃತಪಟ್ಟವರು ಮತದಾರರ ಪಟ್ಟಿಯಲ್ಲಿ ಇರದಂತೆ ನೋಡಿಕೊಳ್ಳುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗೂ ಇದೆ. ಹೀಗಾಗಿ, ಮತ್ತೂಮ್ಮೆ ನಾವು ಸಭೆ ನಡೆಸಿ ಮನವಿ ಮಾಡಲಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ 56 ಸಾವಿರ ಮತಗಟ್ಟೆಗಳು ಬರಲಿದ್ದು ಆ ಎಲ್ಲೆಡೆ ನಮ್ಮ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.ರಾಜ್ಯದ ನಗರ ಮತ್ತು ಪಟ್ಟಣ ಹಾಗೂ ಗ್ರಾಮಾಂತರ ಭಾಗದಲ್ಲಿ ನಮಗೆ ದೂರುಗಳು ಕಡಿಮೆ ಆದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ದೂರುಗಳು ಹೆಚ್ಚಾಗಿವೆ. ಹೀಗಾಗಿ, ಬಿಬಿಎಂಪಿ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇವೆ. ಬೆಂಗಳೂರು ಒನ್‌ ಕೇಂದ್ರಗಳಲ್ಲೂ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಮತದಾರರ ವಿಳಾಸ ಬದಲಾವಣೆಗೆ ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ಅರ್ಜಿ ನಮೂನೆ 6 ರಲ್ಲಿ  ಪಾರ್ಟ್‌ 4 ಎಂಬಲ್ಲಿ ಹಿಂದಿನ ವಿಳಾಸದ ಮತದಾರರ ಕಾರ್ಡ್‌ ವಿವರ ಕೊಟ್ಟರೆ ಸಾಕು. ಕೆಲವೆಡೆ ಹಿಂದಿನ ವಿಳಾಸದ ಮತಗಟ್ಟೆ ಅಧಿಕಾರಿ ಬಳಿ ನಿರಾಕ್ಷೇಪಣಾ ಪತ್ರ ಪಡೆದು ಬನ್ನಿ ಎಂದು ಹೇಳುತ್ತಿರುವುದಾಗಿ ದೂರುಗಳು ಬಂದಿವೆ. ಆ ರೀತಿ ಮಾಡುವಂತಿಲ್ಲ. ಯಾವುದೇ ಮತಗಟ್ಟೆ ಅಧಿಕಾರಿ ಬಳಿ ಹೋದರೂ ಅರ್ಜಿ ನಮೂನೆಗಳು ಲಭ್ಯ ಇರಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು. ಉದ್ದೇಶಪೂರ್ವಕವಾಗಿ ಅಲೆದಾಡಿಸುವುದು,  ಅನಗತ್ಯ ಮಾಹಿತಿ ಕೇಳುವ ಬಗ್ಗೆ ದೂರು ಬಂದರೂ ಆಯೋಗ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ವಿಶೇಷ  ಆ್ಯಪ್‌
ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಹಾಗೂ ಮತಗಟ್ಟೆ ಮಾಹಿತಿ ಪಡೆಯಲು ವಿಶೇಷ ಆ್ಯಪ್‌ ಸಿದ್ಧಪಡಿಸಿದೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲೂ ಮಾಹಿತಿ ನೀಡಿದೆ. ದೂರವಾಣಿ ಸಂಖ್ಯೆ -9731979899ಗೆ  KAEPIC  (ಕ್ಯಾಪಿಟಲ್‌ ಲೆಟರ್)ಒಂದು ಸ್ಪೇಸ್‌ ಬಿಟ್ಟು ಮತದಾರರ ಎಪಿಕ್‌ ಸಂಖ್ಯೆ ನಮೂದಿಸಿ ಎಸ್‌ಎಂಎಸ್‌ ಸಂದೇಶ ಕಳುಹಿಸಿದರೂ ಸಂಪೂರ್ಣ ವಿವರ ಲಭ್ಯವಾಗಲಿದೆ.

ಬಾಂಗ್ಲಾ ವಲಸಿಗರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ ಎಂಬ ದೂರು ಬಂದಿದೆ. ಇದೀಗ ಪರಿಷ್ಕರಣಾ ಕಾರ್ಯ ನಡೆಯುತ್ತಿರುವುದರಿಂದ ಅಂತಹ ದೂರುಗಳಿದ್ದರೆ ಮತಗಟ್ಟೆ ಅಧಿಕಾರಿಗಳಿಗೆ ತಿಳಿಸಿ ತೆಗೆದುಹಾಕಬಹುದು. ನಮ್ಮ ಪ್ರಕಾರ ಮತದಾರರ ಪಟ್ಟಿಗೆ ಸೇರ್ಪಡೆಯಾಗುವುದು ಅಷ್ಟು ಸುಲಭವಲ್ಲ, ಬಾಂಗ್ಲಾ ವಲಸಿಗರಿಗೆ ವಿಳಾಸ ದೃಢೀಕರಣ ಸಿಗುವುದು ಕಷ್ಟ. ಆದರೂ  ಆ ಬಗ್ಗೆ ಗಮನ ಹರಿಸಲಾಗಿದೆ. ಉಳಿದಂತೆ ಭಾರತೀಯರಾಗಿದ್ದು ಇಲ್ಲೇ ಖಾಯಂ ವಾಸವಿದ್ದರೆ ಬೇರೆ ರಾಜ್ಯಗಳ ನಿವಾಸಿಗಳಿಗೂ ವಿಳಾಸ ದೃಢೀಕರಣ ಪಡೆದು ಪಟ್ಟಿಗೆ ಸೇರಿಸಲಾಗುವುದು.
– ಸಂಜೀವ್‌ಕುಮಾರ್‌, ರಾಜ್ಯ ಮುಖ್ಯ ಚುನಾವಣಾಧಿಕಾರಿ

ಟಾಪ್ ನ್ಯೂಸ್

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

liqer-wine

Udupi: ಮೆಹಂದಿ ಪಾರ್ಟಿ ಮದ್ಯ ವಿತರಣೆಗೂ ಅನುಮತಿ ಕಡ್ಡಾಯ

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Kundapura: ಅಂಬರ್‌ಗ್ರೀಸ್‌ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ

Kundapura: ಅಂಬರ್‌ಗ್ರೀಸ್‌ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.