ನಗರದ ಅಕ್ರಮ ಕಟ್ಟಡಗಳಿಗೆ ಕಡಿವಾಣ
Team Udayavani, Nov 23, 2018, 11:30 AM IST
ಬೆಂಗಳೂರು: ರಾಜಧಾನಿಯಲ್ಲಿ ನಿಯಮ ಬಾಹಿರವಾಗಿ ತಲೆಯೆತ್ತುತ್ತಿರುವ ಕಟ್ಟಡಗಳಿಗೆ ನಿರ್ಮಾಣ ಹಂತದಲ್ಲಿಯೇ ಕಡಿವಾಣ ಹಾಕಲು ಬಿಬಿಎಂಪಿ ಚಿಂತಿಸಿದ್ದು, ನಿಯಮ ಉಲ್ಲಂ ಸಿದವರಿಗೆ ಮಾರ್ಗಸೂಚಿ ದರದ ಶೇ.10ರಷ್ಟು ದಂಡ ವಿಧಿಸಲು ಹಾಗೂ ನ್ಯಾಯಾಲಯದ ಮೊರೆ ಹೋದವರು ನಿವೇಶನ ಮೌಲ್ಯದ ಅರ್ಧದಷ್ಟು ಮೊತ್ತವನ್ನು ಠೇವಣಿ ಇಡಬೇಕೆಂಬ ನಿಯಮ ಜಾರಿಗೊಳಿಸುವಂತೆ ಸರ್ಕಾರವನ್ನು ಕೋರಿದೆ.
ಕಾನೂನು ಬಾಹಿರವಾಗಿ ನಿರ್ಮಾಣವಾಗುವ ಕಟ್ಟಡಗಳ ನಿರ್ಮಾಣ ಕಾರ್ಯ ತಡೆಯುವ ಅಧಿಕಾರ ಬಿಬಿಎಂಪಿಗೆ ಇಲ್ಲ. ಇದರಿಂದಾಗಿ ನಗರದಲ್ಲಿ ಕಟ್ಟಡ ನಿರ್ಮಾಣ ಬೈಲಾಗಳನ್ನು ಉಲ್ಲಂ ಸಿ ನಿರ್ಮಿಸುತ್ತಿರುವ ಕಟ್ಟಡಗಳಿಗೆ ಕಡಿವಾಣ ಹಾಕಲು ಪಾಲಿಕೆ ವಿಫಲವಾಗಿದೆ. ಆ ಹಿನ್ನೆಲೆಯಲ್ಲಿ ಕೆಎಂಸಿ ಕಾಯ್ದೆಯಲ್ಲಿನ ಕೆಲವು ಸೆಕ್ಷನ್‌ಗಳಿಗೆ ತಿದ್ದುಪಡಿ ತರುವಂತೆ ಪಾಲಿಕೆ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಎರಡು ವರ್ಷಗಳಿಂದೀಚೆಗೆ ನಿರ್ಮಾಣ ಹಂತದ ಕಟ್ಟಡಗಳು ಹಾಗೂ ನಿರ್ಮಾಣ ಕಾರ್ಯ ಪೂರ್ಣವಾಗಿದ್ದ ಕಟ್ಟಡಗಳು ಕುಸಿದು ಸಾವು-ನೋವು ಸಂಭವಿಸಿದ್ದು, ಬಹುತೇಕ ಪ್ರಕರಣಗಳಲ್ಲಿ ಕಟ್ಟಡ ನಿಯಮಗಳು ಉಲ್ಲಂಘನೆ ಅನಾಹುತಕ್ಕೆ ಕಾರಣವೆಂಬುದು ಬಯಲಾಗಿದೆ. ಹೀಗಾಗಿ ಅನಧಿಕೃತ ಕಟ್ಟಡಗಳನ್ನು ನಿಯಂತ್ರಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು.
ಆದರೆ, ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲು ಕೆಲವು ಸೆಕ್ಷನ್‌ಗಳಲ್ಲಿ ಗೊಂದಲಗಳಿದ್ದರಿಂದ ಅನಧಿಕೃತ ಕಟ್ಟಡಗಳು ಸಂಖ್ಯೆ ಹೆಚ್ಚುತ್ತಲೇ ಇವೆ. ಆ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಆಯುಕ್ತರು ಕೆಎಂಸಿ ಕಾಯ್ದೆಯಲ್ಲಿನ 8 ಸೆಕ್ಷನ್‌ಗಳನ್ನು ತಿದ್ದುಪಡಿ ಮಾಡುವಂತೆ ಕೋರಿದ್ದಾರೆ.
ತಿಂಗಳಲ್ಲಿ ಉಲ್ಲಂಘನೆ ತೆರವುಗೊಳಿಸಬೇಕು: ಆಯುಕ್ತರು ತಿದ್ದುಪಡಿ ಮಾಡಲು ಕಳುಹಿಸಿರುವ ಸೆಕ್ಷನ್‌ಗಳ ಪೈಕಿ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮಕೈಗೊಳ್ಳುವ ಕೆಎಂಸಿ ಕಾಯ್ದೆ 308, 321, 321 (1) ಮತ್ತು (3) ಸೆಕ್ಷನ್‌ಗಳನ್ನು ಬಲಗೊಳಿಸಲು ಪ್ರಸ್ತಾಪಿಸಲಾಗಿದೆ. ಅದರಂತೆ ಕಟ್ಟಡ ಮಾಲೀಕರು ನಿಯಮ ಉಲ್ಲಂ ಸಿರುವ ಬಗ್ಗೆ ಬಿಬಿಎಂಪಿ ನೋಟಿಸ್ ನೀಡಿದ 1 ತಿಂಗಳಲ್ಲಿ ಅದನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಮಾರ್ಗಸೂಚಿ ದರದ ಶೇ.10ರಷ್ಟು ದಂಡವನ್ನು ತಪ್ಪು ಸರಿಪಡಿಸಿಕೊಳ್ಳುವವರಿಗೆ ಪಾವತಿಸಬೇಕಾಗುತ್ತದೆ.
ತಡೆಯಾಜ್ಞೆ ತರುವುದು ಕಷ್ಟವಾಗಲಿದೆ: ಸದ್ಯ ಆಯುಕ್ತರು ಸರ್ಕಾರಕ್ಕೆ ಸಲ್ಲಿಕೆ ಮಾಡಿರುವ ಪ್ರಸ್ತಾವನೆಯಲ್ಲಿ ಆಸ್ತಿ ಮಾಲೀಕರು ಬಿಬಿಎಂಪಿ ನೋಟಿಸ್ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋದ ಸಂದರ್ಭದಲ್ಲಿ ನಿವೇಶನ ಮೌಲ್ಯದ ಅರ್ಧದಷ್ಟು ಮೊತ್ತವನ್ನು ನ್ಯಾಯಾಲಯದಲ್ಲಿ ಠೇವಣಿಯಿಡುವುದು ಕಡ್ಡಾಯಗೊಳಿಸಬೇಕೆಂದು ಕೋರಲಾಗಿದೆ. ಇದರಿಂದಾಗಿ ಕಾನೂನು ಬಾಹಿರ ಕಟ್ಟಡಗಳ ನಿರ್ಮಾಣ ಸ್ಥಗಿತಗೊಳ್ಳಲಿದ್ದು, ನ್ಯಾಯಾಲಯಕ್ಕೆ ಹೋಗುವವರ ಸಂಖ್ಯೆಯೂ ಕಡಿಮೆಯಾಗುತ್ತದೆ.
ತಿದ್ದುಪಡಿಗೆ ಪ್ರಸ್ತಾಪಿಸಿರುವ ಸೆಕ್ಷನ್‌ಗಳು: 66, 67, 300, 306, 308, 310, 321 ಹಾಗೂ 443.
ಕಟ್ಟಡ ನಿಯಮ ಉಲ್ಲಂ ಸಿ ನಿರ್ಮಾಣವಾಗುತ್ತಿರುವ ಕಟ್ಟಡಗಳಿಗೆ ಪಾಲಿಕೆಯಿಂದ ನೋಟಿಸ್ ಜಾರಿಗೊಳಿಸಬಹುದೇ ಹೊರತು, ಕಾಮಗಾರಿ ಸ್ಥಗಿತಗೊಳಿಸುವ ಅಧಿಕಾರ ಕೆಎಂಸಿ ಕಾಯ್ದೆಯಲ್ಲಿ ಇಲ್ಲ. ಹೀಗಾಗಿ ಪಾಲಿಕೆಯಿಂದ ನೋಟಿಸ್ ಜಾರಿಗೊಳಿಸಿದರೂ ನಿಯಮ ಬಾಹಿರ ನಿರ್ಮಾಣ ಕಾರ್ಯಗಳು ಮುಂದುವರಿಯುತ್ತಿವೆ. ಹೀಗಾಗಿ ಕಾಯ್ದೆಯಲ್ಲಿನ ಕೆಲವು ಸೆಕ್ಷನ್‌ಗಳಲ್ಲಿನ ನೂನ್ಯತೆಗಳನ್ನು ಸರಿಪಡಿಸುವ ಮೂಲಕ ನಿಯಮ ಬಾಹಿರ ಕಟ್ಟಡಗಳಿಗೆ ಕಡಿವಾಣ ಹಾಕಲು ಚಿಂತನೆ ನಡೆಸಲಾಗಿದೆ.
-ಎನ್.ಮಂಜುನಾಥ ಪ್ರಸಾದ್, ಬಿಬಿಎಂಪಿ ಆಯುಕ್ತರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.