ಮರಳಿಗಾಗಿ ದಂಗೆ ಏಳುವಂತೆ ಮಾಡುವೆ: ರೇಣುಕಾಚಾರ್ಯ 

Team Udayavani, Nov 23, 2018, 6:05 AM IST

sand.jpg

ಬೆಂಗಳೂರು: ಹೊನ್ನಾಳಿ ತಾಲ್ಲೂಕಿನಲ್ಲಿ ಮರಳಿನ ತೀವ್ರ ಅಭಾವ ತಲೆದೋರಿದ್ದು, ಮರಳಿಗಾಗಿ ದಂಗೆ ಏಳುವಂತೆ ಜನತೆಗೆ ಕರೆ ನೀಡುತ್ತೇನೆ. ಸೋಮವಾರದಿಂದ ನೇರವಾಗಿ ನದಿ ಬ್ಲಾಕ್‌ಗಳಿಂದಲೇ ಮರಳು ತೆಗೆಯುತ್ತೇವೆ. ಸರ್ಕಾರಕ್ಕೆ ತಾಕತ್ತಿದ್ದರೆ ನನ್ನನ್ನು ಬಂಧಿಸಲಿ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಸವಾಲು ಹಾಕಿದರು.

ವಿಧಾನಸೌಧದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಾಜು ಆಗದ ಬ್ಲಾಕ್‌ಗಳಿಂದ ಮರಳು ತೆಗೆದು ಹಂಚಿಕೆ ಮಾಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದರೂ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. ಹಾಗಾಗಿ ಸೋಮವಾರ ನದಿ ಬ್ಲಾಕ್‌ಗಳಿಂದಲೇ ಮರಳು ತೆಗೆದು ಜನರಿಗೆ ಹಂಚಲಾಗುವುದು. ಮರಳಿಗಾಗಿ ಜನ ದಂಗೆ ಏಳಲಿ. ಅವರ ರಕ್ಷಣೆಗೆ ನಾನಿರುತ್ತೇನೆ. ಸಮ್ಮಿಶ್ರ ಸರ್ಕಾರದ ವಿರುದ್ಧ ನಾನು ತೊಡೆ ತಟ್ಟಿ ನಿಂತಿದ್ದಕ್ಕೆ ನನ್ನನ್ನು ಮಟ್ಟ ಹಾಕಲು ಮುಂದಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಮುಖ್ಯಮಂತ್ರಿಗಳಿಗೆ ತಾಕತ್ತಿದ್ದರೆ ನನ್ನನ್ನು ಬಂಧಿಸಲಿ ಎಂದು ಹೇಳಿದರು.

ಮರಳಿನ ಅಭಾವದಿಂದ ತಾಲ್ಲೂಕಿನಲ್ಲಿ ಸುಮಾರು 7000 ಆಶ್ರಯ ಮನೆಗಳ ನಿರ್ಮಾಣ ಕಾರ್ಯ ಸ್ಥಗಿತಗೊಂಡಿದೆ. ಶೌಚಾಲಯ, ಸರ್ಕಾರಿ ಕಾಮಗಾರಿ, ಸಾರ್ವಜನಿಕರ ನಿರ್ಮಾಣ ಕಾರ್ಯಗಳು ಮರಳು ಅಭಾವದಿಂದ ಸ್ಥಗಿತವಾಗಿವೆ. ಹರಾಜು ಆಗದ ಬ್ಲಾಕ್‌ಗಳಿಂದ ಮರಳು ತೆಗೆದು ಒಂದು ಕ್ಯುಬಿಕ್‌ ಮೀಟರ್‌ಗೆ 600 ರೂ.ನಂತೆ ಮರಳು ಹಂಚಿಕೆ ಮಾಡಬೇಕೆಂದು ಕೋರಿದರೂ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸ್ಪಂದಿಸಲಿಲ್ಲ. ಅನಿವಾರ್ಯವಾಗಿ ಮರಳು ತೆಗೆದು ಬಳಸಲು ಮುಂದಾದವರಿಗೆ ಹಿಂಸೆ ನೀಡಲಾಗುತ್ತಿದೆ ಎಂದು ದೂರಿದರು.

ಸಿಎಂ ಗಮನಕ್ಕೆ ತರಲಾಗಿತ್ತಾದರೂ, ಜಿಲ್ಲಾಧಿಕಾರಿ, ಎಸ್‌ಪಿ ತಪ್ಪು ಮಾಹಿತಿ ನೀಡಿದ್ದರು. ಆ ಹಿನ್ನೆಲೆಯಲ್ಲಿ ಕಳೆದ 19ರಂದು ಅನಿವಾರ್ಯವಾಗಿ ನದಿಗಿಳಿದು ಮರಳು ತೆಗೆಯಲು ನಿರ್ಧರಿಸಲಾಯಿತು. ತಲಾ 600 ರೂ.ನಂತೆ 100ಕ್ಕೂ ಹೆಚ್ಚು ಡಿಡಿ ಪಡೆದು ಮರಳು ನೀಡುವಂತೆ ಕೋರಿದರೂ ಸ್ಪಂದಿಸದ ಕಾರಣ ನ.19ರಂದು ಮರಳು ತೆಗೆಯಲು ಮುಂದಾದಾಗ ನಾನು ಸೇರಿದಂತೆ 10 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದರು.

ಜಿಲ್ಲಾಡಳಿತಕ್ಕೆ ತಾಕತ್ತಿದ್ದರೆ ಬೆಂಗಳೂರಿಗೆ ಅಕ್ರಮವಾಗಿ ಸಾಗಣೆಯಾಗುತ್ತಿರುವ ಮರಳನ್ನು ತಡೆಯಲಿ. ಅಮಾಯಕರಿಗೆ ತೊಂದರೆ ನೀಡಿದರೆ ಕ್ರಾಂತಿ ಮಾಡುತ್ತೇವೆ ಎಂದು ಎಚ್ಚರಿಸಿದರು.

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್‌ ಶಾಸಕರು, ಸಂಸದರ ಸಭೆ ಈವರೆಗೆ ನಡೆಸಿಲ್ಲ. ಜಿಲ್ಲಾ ಪ್ರವಾಸ ಕೈಗೊಂಡಿಲ್ಲ. ಜನರ ಸಮಸ್ಯೆಗೆ ಸ್ಪಂದಿಸಿಲ್ಲ. ಇಂಥವರು ನನಗೆ ನೀತಿ ಪಾಠ ಮಾಡುತ್ತಾರೆ. ನಾನು ಅವರಿಗಿಂತ ಮೊದಲೇ ಸಚಿವನಾಗಿದ್ದೆ. ಶ್ರೀನಿವಾಸ್‌ ತಮ್ಮ ವೈಯಕ್ತಿಕ ಫೇಸ್‌ಬುಕ್‌ ಖಾತೆಯಲ್ಲಿ ನನ್ನ ವಿರುದ್ಧ ಅವಹೇಳನಕಾರಿ ವ್ಯಂಗ್ಯ ಮಾಡಿದ್ದು, ಅದರ ವಿರುದ್ಧದೂರು ನೀಡುತ್ತೇನೆ.
– ಎಂ.ಪಿ.ರೇಣುಕಾಚಾರ್ಯ, ಶಾಸಕ

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.