ಕೇಂದ್ರ ಗೃಹ ಸಚಿವರ ಮಧ್ಯಪ್ರವೇಶ ಕೋರಿ ಶೋಭಾ ಕರಂದ್ಲಾಜೆ ಪತ್ರ


Team Udayavani, Apr 30, 2019, 3:05 AM IST

gruha

ಬೆಂಗಳೂರು: ರಾಜ್ಯ ಗೃಹ ಸಚಿವರು ಬಿಜೆಪಿ ಕಾರ್ಯಕರ್ತರು, ಪಕ್ಷದ ಪರ ಒಲವು ಹೊಂದಿರುವವರನ್ನು ಗುರಿಯಾಗಿಸಿಕೊಂಡು ಪ್ರತೀಕಾರ ತೋರುತ್ತಿದ್ದು, ಕೂಡಲೇ ಕೇಂದ್ರ ಗೃಹ ಸಚಿವರು ಮಧ್ಯ ಪ್ರವೇಶಿಸಿ ಸಂವಿಧಾನಾತ್ಮಕವಾಗಿ ಕಾರ್ಯ ನಿರ್ವಹಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರಿಗೆ ಸೋಮವಾರ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಸರ್ಕಾರವು ಬಿಜೆಪಿ ಪರ ಒಲವು ಹೊಂದಿರುವವರ ವಿರುದ್ಧ ಸುಳ್ಳು ಆರೋಪ ಹೊರಿಸಿ ತೊಂದರೆ ನೀಡಲಾರಂಭಿಸಿದೆ.

ಪ್ರತ್ಯೇಕ ಧರ್ಮ ಸ್ಥಾಪನೆ ಹೆಸರಿನಲ್ಲಿ ಲಿಂಗಾಯಿತ ಮತಗಳನ್ನು ವಿಭಜಿಸುವ ಕಾರ್ಯತಂತ್ರದ ಬಗ್ಗೆ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾಗಾಂಧಿಯವರಿಗೆ ಬರೆದಿದ್ದಾರೆ ಎನ್ನಲಾದ ಪತ್ರಕ್ಕೆ ಸಂಬಂಧಪಟ್ಟಂತೆ ಎಂ.ಬಿ.ಪಾಟೀಲ್‌ ದೂರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಧರಿಸಿ ಅನಗತ್ಯವಾಗಿ ಕೆಲವರನ್ನು ವಿಚಾರಣೆಗೆ ಒಳಪಡಿಸುವುದು, ಬಂಧಿಸುತ್ತಿರುವುದು ಖಂಡನೀಯ ಎಂದು ಪತ್ರದಲ್ಲಿ ದೂರಿದ್ದಾರೆ.

ತಾವು ಯಾವುದೇ ಪತ್ರ ಬರೆದಿಲ್ಲ. ಅದು ನಕಲಿ ಪತ್ರ ಎಂಬುದಾಗಿ ಎಂ.ಬಿ.ಪಾಟೀಲ್‌ ಹೇಳಿದ್ದರು. ಗೃಹ ಸಚಿವರೇ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸ್‌ ಅಧಿಕಾರಿಗಳು ಒತ್ತಡದಲ್ಲಿದ್ದು, ಮಹೇಶ್‌ ವಿಕ್ರಮ್‌ ಹೆಗ್ಡೆ ಅವರನ್ನು ಬಂಧಿಸಿ ಎರಡು ದಿನ ವಿಚಾರಣೆ ಬಳಿಕ ಬಿಡುಗಡೆ ಮಾಡಿದ್ದಾರೆ.

ಏ.27ರಂದು ಬಿಜೆಪಿ ಪರ ಒಲವುಳ್ಳ ಪತ್ರಕರ್ತ ಹೇಮಂತ್‌ ಕುಮಾರ್‌ ಅವರನ್ನು ನಕಲಿ ಪತ್ರ ಸೃಷ್ಟಿಸಿ ಹುಬ್ಬಳ್ಳಿಯಲ್ಲಿ ವೈರಲ್‌ ಮಾಡಿದ ಆರೋಪದಲ್ಲಿ ಬಂಧಿಸಲಾಗಿದೆ. ಹಾಗೆಯೇ ಎಂ.ಬಿ.ಪಾಟೀಲ್‌ ಅವರು ಧರ್ಮ ವಿಭಜನೆಗೆ ಮುಂದಾಗಿದ್ದಾರೆ ಎಂಬುದಾಗಿ ವಿಡಿಯೋ ಹೇಳಿಕೆ ನೀಡಿದ ಆರೋಪದಡಿ ಧಾರ್ಮಿಕ ಕಾರ್ಯಕರ್ತೆ ಶ್ರುತಿ ಬೆಳ್ಳಕ್ಕಿ ಅವರನ್ನು ಬಂಧಿಸಲಾಗಿತ್ತು ಎಂದು ವಿವರಿಸಿದ್ದಾರೆ.

ಈ ಸಂಬಂಧ ಬಿಜೆಪಿ ನಾಯಕರು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾದ ನೀಲಮಣಿರಾಜು ಅವರನ್ನು ಭೇಟಿ ಮಾಡಿ ಬಿಜೆಪಿ ಕಾರ್ಯಕರ್ತರು, ಪಕ್ಷದ ಪರ ಒಲವುಳ್ಳವರನ್ನು ಗುರಿಯಾಗಿಸಿ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿರುವ ಬಗ್ಗೆ ಉತ್ತರ ನೀಡುವಂತೆ ಕೋರಲಾಯಿತು.

ಆದರೆ ಪೊಲೀಸ್‌ ಮಹಾನಿರ್ದೇಶಕರು ಸೂಕ್ತ ಸಮಜಾಯಿಷಿ ನೀಡಲು ತಡವರಿಸಿದ್ದು, ಗೃಹ ಸಚಿವರ ಆಣತಿಯಂತೆ ಪೊಲೀಸರು ಕಾರ್ಯ ನಿರ್ವಹಿಸುತ್ತಿರುವುದನ್ನು ಸಾಬೀತುಪಡಿಸಿದಂತಿತ್ತು. ಈ ನಡುವೆ ಪ್ರಕರಣವನ್ನು ಸರ್ಕಾರ ಸಿಐಡಿಗೆ ವರ್ಗಾಯಿಸಿದ್ದು, ಸಿಐಡಿ ಐಜಿಪಿ ಹೇಮಂತ್‌ ನಿಂಬಾಳ್ಕರ್‌ ಅವರಿಗೆ ತನಿಖೆ ಜವಾಬ್ದಾರಿ ವಹಿಸಿದೆ.

ಹೇಮಂತ್‌ ನಿಂಬಾಳ್ಕರ್‌ ಅವರು ಕಾಂಗ್ರೆಸ್‌ ಶಾಸಕಿ ಅಂಜಲಿ ನಿಂಬಾಳ್ಕರ್‌ ಪತಿಯಾಗಿದ್ದು, ಆಡಳಿತ ಪಕ್ಷವನ್ನು ಓಲೈಸುವ ರೀತಿಯಲ್ಲಿ ತನಿಖೆ ನಡೆಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಬಿಜೆಪಿ ಕಾರ್ಯಕರ್ತರು, ಬೆಂಬಲಿಗರನ್ನೇ ಗುರಿಯಾಗಿಸಿ ಪ್ರಕರಣ ದಾಖಲಿಸುತ್ತಿರುವ ಬಗ್ಗೆ ಸಿಐಡಿ ಹಿರಿಯ ಅಧಿಕಾರಿಗಳನ್ನು ಪ್ರಶ್ನಿಸಿದರೂ ಸಮರ್ಥನೀಯ ಸಮಜಾಯಿಷಿ ನೀಡಿಲ್ಲ ಎಂದು ವಿವರಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್‌ ನಾಯಕ ಬೇಳೂರು ಗೋಪಾಲಕೃಷ್ಣ ಅವರು ಕಾಂಗ್ರೆಸ್‌ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಪ್ರಧಾನಿಯವರನ್ನು ಹತ್ಯೆ ಮಾಡುವಂತೆ ಕರೆ ನೀಡಿದ್ದರು. ಈ ಸಂಬಂಧ ವಿಡಿಯೋ ದಾಖಲೆ ನೀಡಿದರೂ ನಗರ ಪೊಲೀಸ್‌ ಆಯುಕ್ತರ ಈವರೆಗೆ ಕ್ರಮ ಕೈಗೊಂಡಿಲ್ಲ. ಬೀದರ್‌ನ ಕಾಂಗ್ರೆಸ್‌ ಶಾಸಕ ನಾರಾಯಣ ರಾವ್‌ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿಯವರ ಬಗ್ಗೆ ಅವಹೇಳನಕಾರಿ ಹೆಳಿಕೆ ನೀಡಿದ್ದರು.

ಈ ಬಗ್ಗೆಯೂ ಪೊಲೀಸ್‌ ಇಲಾಖೆ ಹಾಗೂ ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ಆಡಳಿತ ಪಕ್ಷದವರ ವಿರುದ್ಧ ಕ್ರಮ ಕೈಗೊಳ್ಳದೆ ಪೊಲೀಸರು ಮೌನ ವಹಿಸಿರುವುದು ಅವರ ಮೇಲಿನ ಒತ್ತಡವನ್ನು ತೋರಿಸತ್ತದೆ. ಆದರೆ ಗೃಹ ಸಚಿವರು ದೂರು ನೀಡಿದರೆ ಪೊಲೀಸರು ತಕ್ಷಣವೇ ಸಾಮಾಜಿಕ ಜಾಲತಾಣ ಕಾರ್ಯಕರ್ತರು, ಪತ್ರಕರ್ತರು, ಧಾರ್ಮಿಕ ಕಾರ್ಯಕರ್ತರ ವಿರುದ್ಧ ಸುಳ್ಳು ದೂರು ದಾಖಲಿಸಿ ಬಂಧಿಸುವ ಮೂಲಕ ಮೆಚ್ಚಿಸುವ ಪ್ರಯತ್ನ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂ.ಬಿ.ಪಾಟೀಲ್‌ ಅವರ ಹೆಸರಲ್ಲಿ ನಕಲಿ ಪತ್ರ ಸೃಷ್ಟಿಸಿದ್ದಾರೆ ಎನ್ನುವುದಾದರೆ ನಿಜವಾದ ದುಷ್ಕರ್ಮಿಗಳನ್ನು ಪೊಲೀಸರು ಪತ್ತೆ ಹಚ್ಚಿ ಕ್ರಮ ಜರುಗಿಸುವ ಇಲ್ಲವೇ ಪತ್ರದ ಸಾಚಾತನವನ್ನು ಪತ್ತೆ ಮಾಡುವ ಬದಲಿಗೆ ಯಾವುದೇ ಸಂಚು, ಪಾತ್ರವಿಲ್ಲದ ಮುಗ್ಧ ಪತ್ರಕರ್ತ ಹೇಮಂತ್‌ ಕುಮಾರ್‌ ಅವರನ್ನು ಬಂಧಿಸಿದ್ದಾರೆ.

ಗೃಹ ಸಚಿವರನ್ನು ಮೆಚ್ಚಿಸಲು ಸುಳ್ಳು ಆರೋಪ ಹೊರಿಸಿದ್ದಾರೆ. ಹಾಗಾಗಿ ಕೂಡಲೇ ಕೇಂದ್ರ ಗೃಹ ಸಚಿವರು ಮಧ್ಯಪ್ರವೇಶಿಸಬೇಕು. ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಬಿಜೆಪಿ ಕಾರ್ಯಕರ್ತವಿರುದ್ಧ ಪ್ರತೀಕಾರ ತೆಗೆದುಕೊಳ್ಳುವ ಮನೋಭಾವವನ್ನು ನಿಲ್ಲಿಸುವಂತೆ ಸೂಚಿಸುವ ಜತೆಗೆ ಸಂವಿಧಾನಾತ್ಮಕವಾಗಿ ಕಾರ್ಯ ನಿರ್ವಹಿಸುವಂತೆ ನಿರ್ದೇಶನ ನೀಡಬೇಕು ಎಂದು ಶೋಭಾ ಕರಂದ್ಲಾಜೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

ಅಡ್ಡಹೊಳೆಯಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

ಅಡ್ಡಹೊಳೆ ಗ್ರಾಮದಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

13(1

Udupi: ಕೊರಗ ಸಮುದಾಯಕ್ಕೆ ಸಮಸ್ಯೆಗಳ ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.