ಶ್ರೀಕೃಷ್ಣನಂತೆ ನಾನೂ ಪಕ್ಷಪಾತಿ: ಸಿಎಂ

Team Udayavani, Aug 15, 2017, 11:15 AM IST

siddu-frishna.jpg

ಬೆಂಗಳೂರು: ಶ್ರೀಕೃಷ್ಣ ಹೇಗೆ ನ್ಯಾಯಪರ ಪಕ್ಷಪಾತಿಯೋ ಹಾಗೆಯೇ ನಾನು ಕೂಡ ಅಹಿಂದ ಪರ ಪಕ್ಷಪಾತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಶ್ರೀಕೃಷ್ಣ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಶ್ರೀಕೃಷ್ಣ ಅವತಾರ ಪುರುಷ. ದೃಷ್ಟ ಶಿಕ್ಷಕ, ಶಿಷ್ಟ ಪರಿಪಾಲಕನಾಗಿದ್ದು, ಕೆಟ್ಟದನ್ನು ಶಿಕ್ಷಿಸಬೇಕು. ಒಳ್ಳೆಯದ್ದಕ್ಕೆ ರಕ್ಷಣೆ ಕೊಡಬೇಕು ಎಂದು ಹೇಳಿದ್ದಾನೆ ಎಂದು ತಿಳಿಸಿದರು.

ಮಹಾಭಾರತದಲ್ಲಿಯೂ ಕೂಡ ಶ್ರೀಕೃಷ್ಣ ಅರ್ಜುನನಿಗೆ ರಾಜಧರ್ಮದ ನೀತಿ ಹೇಳಿ, ಧರ್ಮದ ಪರವಾಗಿ ನಿಂತಿದ್ದನು. ಆದ್ದರಿಂದ ಶ್ರೀಕೃಷ್ಣ ಪಕ್ಷಪಾತಿ ಎಂದು ಹೇಳುವವರೂ ಇದ್ದಾರೆ. ಶೋಷಿತ ವರ್ಗಗಳಿಗೆ ಸಾಮಾಜಿಕವಾಗಿ ನ್ಯಾಯ ಸಿಗಬೇಕು ಎಂಬ ಸಿದ್ಧಾಂತವನ್ನು ನಾನು ನಂಬಿದ್ದು, ಕೃಷ್ಣನಂತೆ ನಾನು ಕೂಡ ಅಹಿಂದ ಪರ ಪಕ್ಷಪಾತಿಯಾಗಿದ್ದೇನೆ. ಶೋಷಿತರಿಗೆ ಜಾತಿ ಸಮೀಕ್ಷೆ ವರದಿ ಬಂದ ನಂತರ ಚರ್ಚಿಸಿ ಸರ್ಕಾರ ಅಗತ್ಯ ಸೌಲಭ್ಯ ಒದಗಿಸುತ್ತದೆ ಎಂದು ಭರವಸೆ ನೀಡಿದರು. 

ಸರ್ಕಾರದಿಂದ ಆಚರಣೆ: ಯಾದವ ಸಂಘದಿಂದ ನಡೆಸುವ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಸರ್ಕಾರದಿಂದ ಆಚರಿಸಬೇಕು ಮತ್ತು ಅಂದು ರಜೆ ನೀಡಬೇಕು ಎಂಬ ಬೇಡಿಕೆ ಇತ್ತು. ಹಾಗೆಯೇ ಕೃಷ್ಣ ಜನ್ಮಾಷ್ಠಮಿಯನ್ನು ಸರ್ಕಾರವೇ ಆಚರಿಸುತ್ತಿದೆ ಎಂದ ಅವರು, ರಜೆ ಘೋಷಣೆ ಮಾಡುವುದರಿಂದ ಸರ್ಕಾರಿ ನೌಕರರಿಗೆ ಒಂದು ರಜೆ ಸಿಗುತ್ತದೆ ಹೊರತು ಯಾದವ ಸಮಾಜಕ್ಕೆ ಯಾವುದೇ ಪ್ರಯೋಜನವಾಗುವುದಿಲ್ಲ. ಮಹಾತ್ಮರನ್ನು ಪ್ರತಿಯೊಬ್ಬರು ಸ್ಮರಿಸಬೇಕೇ ಹೊರತು, ರಜೆಯಲ್ಲಿ ಮಜಾ ಮಾಡುವುದಲ್ಲ ಎಂದರು. 

ಮೌಡ್ಯದಿಂದಲೇ ಶೋಷಣೆ: ನಮ್ಮಲ್ಲಿ ಮೌಡ್ಯಗಳಿದ್ದು, ಅವುಗಳನ್ನು ತೊಡೆದು ಹಾಕಬೇಕು. ಯಾವ ಸಮುದಾಯಗಳಲ್ಲಿ ಮೌಡ್ಯ, ಕಂದಾಚಾರ ಇರುವುದಿಲ್ಲವೋ ಅಲ್ಲಿ ಶೋಷಣೆ ಇರುವುದಿಲ್ಲ. ಶಿಕ್ಷಣದಿಂದ ವೈಚಾರಿಕತೆ ಬೆಳೆಸಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮೂರು ಮಂತ್ರಗಳನ್ನು ಎಲ್ಲಾ ಶೋಷಿತ ವರ್ಗಗಳು ಪಾಲನೆ ಮಾಡಿದರೆ, ಯಾವುದೇ ಸಮುದಾಯ ಶೋಷಿತವಾಗುವುದಿಲ್ಲ.

“ಯಾವ ವ್ಯವಸ್ಥೆಗೆ ಚಲನೆ ಇಲ್ಲವೋ ಆ ವ್ಯವಸ್ಥೆ ಬದಲಾಗುವುದಿಲ್ಲ” ಎಂದು ರಾಮಮನೋಹರ ಲೋಹಿಯಾ ಹೇಳಿದ್ದು, ಶಿಕ್ಷಣದಿಂದ ಚಲನಶೀಲತೆ ರೂಢಿಸಿಕೊಂಡು ಪ್ರಗತಿ ಸಾಧಿಸಬೇಕು ಎಂದ ಸಲಹೆ ನೀಡಿದರು.  ಕಾರ್ಯಕ್ರಮದಲ್ಲಿ ಯಾದವವಾಣಿ ಪತ್ರಿಕೆ ಬಿಡುಗಡೆ ಮಾಡಲಾಯಿತು. ನಂತರ ಮಾತನಾಡಿದ ಯಾದವ ಸಂಘದ ರಾಜ್ಯಾಧ್ಯಕ್ಷ ಲಕ್ಷ್ಮೀಪತಿ, ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಯಾದವ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು.

ಈ ಬಾರಿಯ ಚುನಾವಣೆಯಲ್ಲಿ 6 ಮಂದಿ ಯಾದವರಿಗೆ ಪಕ್ಷದಿಂದ ಟಿಕೆಟ್‌ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಪತ್ರ ಸಲ್ಲಿಸಿದರು. ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌, ವಿಧಾನಪರಿಷತ್‌ ಸದಸ್ಯ ಎಚ್‌.ಎಂ.ರೇವಣ್ಣ, ಮೇಯರ್‌ ಪದ್ಮಾವತಿ, ಬಿಎಂಟಿಸಿ ಅಧ್ಯಕ್ಷ ನಾಗರಾಜ್‌ ಯಾದವ್‌, ಬೆಂಗಳೂರು ಗ್ರಾಮಾಂತರ ಜಿಪಂ ಅಧ್ಯಕ್ಷ ವಿ.ಪ್ರಸಾದ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

ನಾನು ಗೋರಕ್ಷಕನಲ್ಲವೇ?
“ಯಾದವರು ಬಿಹಾರ, ಉತ್ತರ ಪ್ರದೇಶ ಸೇರಿದಂತೆ ಹಲವೆಡೆ ಬಲಾಡ್ಯರಾಗಿದ್ದಾರೆ. ರಾಜ್ಯದಲ್ಲಿ ಮಾತ್ರ ಹಿಂದುಳಿದಿದ್ದಾರೆ. ಗೋ ಪಾಲನೆಯನ್ನು ಪುರಾತನ ಕಾಲದಿಂದಲೂ ಮಾಡಿದ್ದಾರೆ. ಪ್ರಸ್ತುತ ಗೋ ರಕ್ಷಣೆ ಹೆಸರಿನಲ್ಲಿ ಕೆಲವರು ನಾಟಕ ಆಡುತ್ತಿದ್ದಾರೆ. ಅವರು ಒಂದು ದಿನವೂ ಸಗಣಿ ಎತ್ತಿಲ್ಲ. ಸರ್ಕಾರ ಒಂದು ಲೀಟರ್‌ ಹಾಲಿಗೆ 5 ರೂ. ಬೆಂಬಲ ಬೆಲೆ ನೀಡುತ್ತಿದೆ. ಹಾಗಾದರೆ ನಾನು ಗೋ ರಕ್ಷಕನಲ್ಲವೇ? ನಿಜವಾಗಿ ಸಗಣಿ ಎತ್ತುವವನೇ ಗೋರಕ್ಷಕ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಸುಮಾರು 33 ಶೋಷಿತ ಸಮುದಾಯದ ಜಾತಿಗಳಿಗೆ ಬೆಂಗಳೂರಿನಲ್ಲಿ ಒಂದೇ ಕಡೆ ಸಮುದಾಯ ಭವನ ಸ್ಥಾಪನೆಗೆ ಜಾಗ ಕೊಡಲು ನಿರ್ಧರಿಸಲಾಗಿದೆ. ಮುಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಅದನ್ನು ಪರಿಶೀಲಿಸಿ ಅನುಮೋದನೆ ನೀಡಲಾಗುವುದು.
-ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.