ಚಿಮೂ ಹೇಳಿಕೆಗೆ ಲಿಂಗಾಯತ ಧರ್ಮ ಮಹಾಸಭಾ ವಿರೋಧ
Team Udayavani, Jun 25, 2017, 11:14 AM IST
ಬೆಂಗಳೂರು: ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಸಮುದಾಯಗಳಲ್ಲ, ಎರಡು ಒಂದೇ ಎಂಬ ಖ್ಯಾತ ಸಾಹಿತಿ ಡಾ.ಚಿದಾನಂದ ಮೂರ್ತಿ ಅವರ ಹೇಳಿಕೆಗೆ ಲಿಂಗಾಯತ ಧರ್ಮ ಮಹಾಸಭಾ ವಿರೋಧ ವ್ಯಕ್ತಪಡಿಸಿದೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ವೀರಶೈವ ಪ್ರತ್ಯೇಕ ಧರ್ಮವಲ್ಲ ಎಂಬುದು ಸತ್ಯ. ಆದರೆ ವೀರಶೈವ ಮತ್ತು ಲಿಂಗಾಯತ ಸಮುದಾಯಗಳು ಒಂದೇ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದು ಹೇಳಿದರು.
ಸಾಹಿತಿ ಚಿದಾನಂದಮೂರ್ತಿ ವೈದಿಕ ಹಾಗೂ ಶೈವರನ್ನು ಓಲೈಸುವುದಕ್ಕಾಗಿ ಸ್ವಧರ್ಮಕ್ಕೆ ದ್ರೋಹ ಬಗೆಯುತ್ತಿದ್ದಾರೆ. ನಿಜವಾಗಿಯೂ ಅವರು ಲಿಂಗಾಯತರೋ? ಶೈವರೋ? ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು. ಕರ್ನಾಟಕದಲ್ಲಿ ವೀರಶೈವ ಎಂಬುದೇ ಇಲ್ಲ. ಲಿಂಗಾಯತ ಧರ್ಮದ ಅನುಯಾಯಿಗಳೇ ಇದ್ದಾರೆ.
ಕೇಂದ್ರ ಸರ್ಕಾರ ನಡೆಸುವ ಧರ್ಮವಾರು ಜನಗಣತಿಯ ಪ್ರಕಾರ ಲಿಂಗಾಯತ ಸಮಾಜದಲ್ಲಿ ಬರುವ ಪಂಚಮಸಾಲಿ, ಬಣಜಿಗ, ಗಾಣಿಗ, ಕಂಬಾರ ಮುಂತಾದ 71 ಒಳ ಪಂಗಡಗಳಲ್ಲಿ ವೀರಶೈವವು ಒಂದು ಒಳ ಪಂಗಡ ಹೊರತೇ ವಿನಃ ಲಿಂಗಾಯತ ಧರ್ಮವೇ ವೀರಶೈವ ಎಂದಾಗುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.