ಲಿಂಗಾಯತ ಧರ್ಮ: ಸುಪ್ರೀಂ ಮೊರೆಗೆ ಚಿಂತನೆ
Team Udayavani, Dec 17, 2018, 8:30 AM IST
ದಾವಣಗೆರೆ: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಚಿಂತನೆ ನಡೆಸಲಾಗುತ್ತಿದೆ. ಪ್ರತ್ಯೇಕ ಧರ್ಮದ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಚಳಿಗಾಲದ ಅಧಿವೇಶನದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ತಿರಸ್ಕಾರದ ಪ್ರಸ್ತಾವನೆಯನ್ನು ಪುನರ್ ಪರಿಶೀಲನೆ ಮಾಡುವುದಾಗಿ ಕೇಂದ್ರ ಸರಕಾರದ ಧಾರ್ಮಿಕ ಖಾತೆ ಸಚಿವರು ನಮಗೆ ಭರವಸೆ ನೀಡಿದ್ದಾರೆ. ಅವರು ಒಂದು ವೇಳೆ ಹೇಳಿದಂತೆ ನಡೆದುಕೊಳ್ಳದಿದ್ದರೆ ನಾವು ಬಜೆಟ್ ಅಧಿವೇಶನ ಸಂದರ್ಭದಲ್ಲಿ ಮತ್ತೆ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
ಜೈನ ಸಮುದಾಯದವರು ಸುಪ್ರೀಂ ಕೋರ್ಟ್ಗೆ ಹೋಗಿ ನ್ಯಾಯ ಪಡೆದುಕೊಂಡಂತೆ ನಾವು ನ್ಯಾಯ ಪಡೆದುಕೊಳ್ಳುತ್ತೇವೆ. ಕೇಂದ್ರ ಸರಕಾರ ಪ್ರತ್ಯೇಕ ಧರ್ಮದ ಬಗ್ಗೆ ರಾಜ್ಯ ಸರಕಾರ ಕಳುಹಿಸಿದ ಪ್ರಸ್ತಾವನೆ ತಿರಸ್ಕರಿಸಲು ನೀಡಿರುವ ಎರಡು ಕಾರಣಗಳೂ ವಿಚಿತ್ರವಾಗಿವೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನೆ ಮಾಡಲಾಗುವುದು ಎಂದರು. ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ತಪ್ಪು ಮಾಹಿತಿಯನ್ನು ಕಾಣದ ಕೈಗಳು ಪ್ರಧಾನಿ ಮೋದಿ ಅವರಿಗೆ ನೀಡುತ್ತಾ ಕುತಂತ್ರ ನಡೆಸಿದ್ದಾರೆ. ಹಾಗಾಗಿ ಈ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.