ಮದ್ಯ ಪರವಾನಗಿ: ಎಸ್ಸಿ, ಎಸ್ಟಿಗಿಲ್ಲ ರಿಯಾಯ್ತಿ


Team Udayavani, Jan 21, 2017, 11:44 AM IST

highcourt.jpg

ಬೆಂಗಳೂರು: ರಾಜ್ಯ ಅಬಕಾರಿ ನಿಯಮಕ್ಕೆ ತಿದ್ದುಪಡಿ ತಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮದ್ಯ ಮಾರಾಟ ಪರವಾನಗಿ ಹಂಚಿಕೆಯಲ್ಲಿನ ನಿಯಮದ ಸಡಿಲಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್‌ ವಿಭಾಗೀಯ ಪೀಠ ಎತ್ತಿಹಿಡಿದಿದೆ.|

ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತು ಕೆಲ ಮದ್ಯದಂಗಡಿ ಮಾಲೀಕರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಜಯಂತ್‌ ಪಟೇಲ್‌ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರಿದ್ದ ವಿಭಾಗೀಯ ಪೀಠ ಮೇಲ್ಮನವಿಯನ್ನು ಗುರುವಾರ ವಜಾಗೊಳಿಸಿತು. ಆ ಮೂಲಕ ಏಕಸದಸ್ಯ ಪೀಠದ ಆದೇಶ ಮಾನ್ಯ ಮಾಡಿದೆ.

ಈ ಮಧ್ಯೆ ರಾಜ್ಯ ಸರ್ಕಾರದ ಅಧಿಸೂಚನೆಗೆ ಏಕಸದಸ್ಯ ಪೀಠ ತಡೆಯಾಜ್ಞೆ ನೀಡುವ ಮುನ್ನ (2016ರ ಮಾರ್ಚ್‌ 11) ಮುನ್ನ ತಿದ್ದುಪಡಿ ನಿಯಮಗಳನ್ವಯ ಮದ್ಯ ಮಾರಾಟ ಪರವಾನಗಿ ಪಡೆದು ಮದ್ಯದಂಗಡಿ ತೆರದು ವ್ಯಾಪಾರ ನಡೆಸುತ್ತಿವವರ ಪರವಾನಗಿ ಮುಂದುವರಿಯಲಿದೆ. ಆದರೆ, ಪರವಾನಗಿ ಅವಧಿ ಮುಗಿದ ಬಳಿಕ ನವೀಕರಣ ಮಾಡಬಾರದು ಎಂದು ಸರ್ಕಾರಕ್ಕೆ ವಿಭಾಗೀಯ ಪೀಠ ಆದೇಶದಲ್ಲಿ ನಿರ್ದೇಶಿಸಿದೆ.

ಪ್ರಕರಣವೇನು?: ರಾಜ್ಯ ಸರ್ಕಾರ, ಪರಿಶಿಷ್ಟ ವರ್ಗಗಳಿಗೆ ಸಿಎಲ್‌-7ಡಿ ಮದ್ಯಮಾರಾಟ ಪರವಾನಗಿ ಪಡೆಯಲು ಇದ್ದ ಷರತ್ತು ಸಡಿಲಿಸಿ 2014ರ ಜೂನ್‌ 9ರಂದು ಅಧಿಸೂಚನೆ ಹೊರಡಿಸಿತ್ತು. ನಗರ ಪ್ರದೇಶದ ವ್ಯಾಪ್ತಿಯ ವಸತಿ ಸಹಿತ ಪ್ರದೇಶದಲ್ಲಿ ಮದ್ಯ ಮಾರಾಟ ಪರವಾನಗಿ ಪಡೆಯಬೇಕಾದರೆ ಸಾಮಾನ್ಯ ವರ್ಗಕ್ಕೆ ಕನಿಷ್ಠ 30 ಹಾಸಿಗೆಗಳುಳ್ಳ ಹೋಟೆಲ್‌ಹೊಂದಿರಬೇಕು ಮತ್ತು ಇತರೆ ಭಾಗಗಳಲ್ಲಿ 20 ಹಾಸಿಗೆಗಳುಳ್ಳ ಹೋಟೆಲ್‌ ಹೊಂದಿರುವುದು ಕಡ್ಡಾಯ ಎಂದು ಅಧಿಸೂಚನೆಯಲ್ಲಿ ಸರ್ಕಾರ ಷರತ್ತು ವಿಧಿಸಿತ್ತು.

ಆದರೆ, ಪರಿಶಿಷ್ಟರಿಗೆ ನಗರ ಪ್ರದೇಶಗಳಲ್ಲಿ 15 ಮತ್ತು ಇತರೆ ಭಾಗಗಳಲ್ಲಿ 10 ಹಾಸಿಗೆಗಳುಳ್ಳ ಹೋಟೆಲ್‌ ಹೊಂದಿದ್ದರೆ ಸಾಕು ಎಂದು ರಿಯಾಯ್ತಿ ನೀಡಿತ್ತು. ಸರ್ಕಾರದ ಈ ಕ್ರಮ ತಾರತಮ್ಯ ನೀತಿಯಿಂದ ಕೂಡಿದೆ ಎಂದು ಆರೋಪಿಸಿ ಬಿ.ಗೋವಿಂದರಾಜ ಹೆಡೆY ಎಂಬುವರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ಆ ಅರ್ಜಿ ಪುರಸ್ಕರಿಸಿದ್ದ ನ್ಯಾಯಮೂರ್ತಿ ಡಾ.ವಿನೀತ್‌ ಕೊಠಾರಿ ಅವರಿದ್ದ ಏಕಸದಸ್ಯ ಪೀಠ ರಾಜ್ಯ ಸರ್ಕಾìದ ಆಧಿಸೂಚನೆ ರದ್ದುಪಡಿಸಿ 2016ರ ಜುಲೈ 22ರಂದು ಆದೇಶಿಸಿತ್ತು. ಮದ್ಯ ಮಾರಾಟ ಒಂದು ಅಪಾಯಕಾರಿ ವ್ಯಾಪಾರ. ಇಂಥ ವ್ಯಾಪಾರಕ್ಕೆ ಪರವಾನಗಿ ನೀಡುವ ವೇಳೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಡಗಡದವರಿಗೆ ರಿಯಾಯ್ತಿ ನೀಡುವ ಕ್ರಮ ಸೂಕ್ತವಲ್ಲ.

ಅಲ್ಲದೆ, ಪರಿಶಿಷ್ಟ ಸಮುದಾಯದವರಿಗೆ ಮದ್ಯ ಮಾರಾಟ ಪರವಾನಗಿ ಹಂಚಿಕೆಯಲ್ಲಿ ರಿಯಾಯ್ತಿ ನೀಡುವುದರಿಂದ ಸಮಾಜದಲ್ಲಿನ ಇತರೆ ಸಮುದಾಯಗಳ ನಡುವೆ ತಾರತಮ್ಯ ನೀತಿ ಅನುಸರಿಸಿದಂತಾಗುತ್ತದೆ. ಹೀಗಾಗಿ, ಸರ್ಕಾರದ ಅಧಿಸೂಚನೆ ಕಾನೂನು ಬಾಹಿರವಾಗಿದೆ ಎಂದು ಏಕಸದಸ್ಯ ಪೀಠ ತನ್ನ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತು ಮದ್ಯದಂಗಡಿ ಪರವಾನಗಿ ಪಡೆದಿದ್ದ ಪರಿಶಿಷ್ಠ ಜಾತಿ ಹಾಗೂ ಪಂಗಡ ವರ್ಗದವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಮೇಲ್ಮನವಿ ವಜಾಗೊಳಿಸಿ ಏಕಸದಸ್ಯ ಪೀಠದ ಆದೇಶ ಮಾನ್ಯ ಮಾಡಿದೆ.

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.