ಜಾಹೀರಾತು ಅಕ್ರಮಕ್ಕೆ ಸಹಕರಿಸಿದವರ ಪಟ್ಟಿ ಸಿದ್ಧ
Team Udayavani, Sep 26, 2017, 11:29 AM IST
ಬೆಂಗಳೂರು: “ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮ ಜಾಹೀರಾತು ಫಲಕಗಳ ಅಳವಡಿಕೆಗೆ ಸಹಕರಿಸಿದ ಪಾಲಿಕೆಯ ಅಧಿಕಾರಿಗಳ ಪಟ್ಟಿ ಸಿದ್ಧಪಡಿಸುತ್ತಿದ್ದು, ಮುಂದಿನ ವಿಚಾರಣೆ ವೇಳೆ ಈ ಪಟ್ಟಿಯನ್ನು ಬಿಬಿಎಂಪಿ, ಹೈಕೋರ್ಟ್‌ಗೆ ಸಲ್ಲಿಸಲಿದೆ,’ ಎಂದು ಪಾಲಿಕೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸೋಮವಾರ ಈ ಕುರಿತು ಮಾಹಿತಿ ನೀಡಿದ ಅವರು, “ನಗರದಲ್ಲಿನ ಅನಧಿಕೃತ ಜಾಹೀರಾತು ಫಲಕಗಳಿಂದ ಪಾಲಿಕೆಗೆ ಆಗುತ್ತಿರುವ ನಷ್ಟಕ್ಕೆ ಕಾರಣವಾದ ಕಂದಾಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಹೈಕೋರ್ಟ್ ಪಾಲಿಕೆಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ಪಟ್ಟಿ ಸಿದ್ಧಪಡಿಸಲಾಗುತ್ತಿದೆ.
ಅಧಿಕಾರಿಯ ಹೆಸರು ಹಾಗೂ ಹುದ್ದೆಯೊಂದಿಗೆ ಪಟ್ಟಿ ಸಿದ್ಧವಾಗಿದೆ. ನಂತರ ನ್ಯಾಯಾಲಯದ ಸೂಚನೆಯಂತೆ ಕ್ರಮಕೈಗೊಳ್ಳಲಾ ಗುವುದು,’ ಎಂದರು. ನಗರದಲ್ಲಿ ಅನಧಿಕೃತ ಜಾಹೀರಾತು ಫಲಕ ಹಾಕಿರುವ ಸಂಸ್ಥೆಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ನೋಟಿಸ್ ನಂತರವೂ ತೆರಿಗೆ ಪಾವತಿಸದ ಏಜೆನ್ಸಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತಿದ್ದು, ಎಷ್ಟು ಏಜೆನ್ಸಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂಬ ಮಾಹಿತಿಯನ್ನೂ ಹೈಕೋರ್ಟ್‌ಗೆ ಸಲ್ಲಿಸಲಾಗುವುದು. ಜಾಹೀರಾತು ಫಲಕಗಳ ಅಕ್ರಮದಲ್ಲಿ ಶಾಮೀಲಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ,’ ಎಂದು ಆಯುಕ್ತರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.