ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ ಸಾಹಿತ್ಯ ಪ್ರಶಸ್ತಿ
Team Udayavani, Sep 8, 2018, 6:10 AM IST
ಬೆಂಗಳೂರು: ಬಿಎಂಟಿಸಿ ನೀಡುತ್ತಿರುವ ನೃಪತುಂಗ ಪ್ರಶಸ್ತಿ ಮಾದರಿಯಲ್ಲಿಯೇ ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಎರಡು ಕೋಟಿ ರೂ. ಅನುದಾನ ನೀಡುವ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ ಸಾಹಿತ್ಯ ಪ್ರಶಸ್ತಿ ನೀಡಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ನಡೆದ “ನೃಪತುಂಗ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಕವಿ ಡಾ.ಸಿದ್ದಲಿಂಗಯ್ಯಗೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ತಮ್ಮ ಆಡಳಿತದಲ್ಲಿ ಕಲೆ ಹಾಗೂ ಸಾಹಿತ್ಯ ವಲಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹಾಗಾಗಿಯೇ ಅವರನ್ನು ಮಹಾತ್ಮ ಗಾಂಧೀಜಿ ,ರಾಜರ್ಷಿ ಎಂದು ಕರೆಯುತ್ತಿದ್ದರು.
ಅಂತಹ ಮಹನೀಯರ ಹೆಸರಿನಲ್ಲಿ ಒಂದು ಉತ್ಕೃಷ್ಟ ಪ್ರಶಸ್ತಿಯನ್ನು ನೀಡಬೇಕು. ಆ ನಿಟ್ಟಿನಲ್ಲಿ ನಮ್ಮ ಇಲಾಖೆಯ ಎಲ್ಲ ವಿಭಾಗಗಳನ್ನು ಒಟ್ಟಾಗಿ ಸೇರಿಸಿ ಎರಡು ಕೋಟಿ ಅನುದಾನ ನೀಡುವ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ ಮುಂದಿನ ವರ್ಷವೇ ಪ್ರಶಸ್ತಿ ನೀಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು