ಸಾಹಿತ್ಯ ನಕಲು ಪ್ರವೃತ್ತಿ ಹೆಚ್ಚಿದೆ
Team Udayavani, Jun 2, 2018, 12:06 PM IST
ಬೆಂಗಳೂರು: ಸಾಹಿತ್ಯದಲ್ಲಿ ನಕಲು ಸಂಸ್ಕೃತಿ ಹೆಚ್ಚುತ್ತಿದ್ದು, ಬೇರೊಬ್ಬ ಕವಿಯ ಕವಿತೆ, ಕವನಗಳಿಗೆ ತಮ್ಮ ಹೆಸರನ್ನು ಹಾಕಿಕೊಂಡು ನಕಲಿ ಕವಿಗಳಾಗುತ್ತಿದ್ದಾರೆ ಎಂದು ಸಾಹಿತಿ ಡಾ.ದೊಡ್ಡರಂಗೇಗೌಡ ಅವರು ಬೇಸರ ವ್ಯಕ್ತಪಡಿಸಿದರು.
ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕನ್ನಡ ಗೆಳೆಯರ ಬಳಗ ಹಾಗೂ ಸಪ್ನ ಬುಕ್ ಹೌಸ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ರಂಗರಾಜು ನಾಗವಾರ ಅವರ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಸಾಹಿತ್ಯ ಕತ್ತರಿಸು, ಅಂಟಿಸು ಸಂಸ್ಕೃತಿಯತ್ತಾ ತೆರಳುತ್ತಿದ್ದೆ ಎಂದು ಹೇಳಿದರು.
ಬಹುತೇಕರು ಸ್ವಂತ ಬರವಣಿಗೆ ಸಾಧ್ಯವಾಗದ ಹಿನ್ನೆಲೆಯಲ್ಲಿ ನಕಲು ಪದ್ಧತಿಗೆ ದಾಸರಾಗುತ್ತಿದ್ದಾರೆ. ಆದರೆ, ಇದು ಸಾಹಿತ್ಯ ವಲಯದ ಬೆಳವಣಿಗೆಗೆ ಮಾರಕ ಹಾಗಾಗಿ ಎಲ್ಲರೂ ತಮ್ಮದೇ ಕತೃìತ್ವ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ರಂಗರಾಜು ನಾಗವಾರ ಅವರ “ನಾನೂ ಕಂಡ ಅಮೆರಿಕ’ ಹಾಗೂ “ಪ್ರೀತಿ … ಪ್ರೀತಿಯ ರೀತಿ’ ಪುಸ್ತಕಗಳನ್ನು ಸಾಹಿತಿ ಜರಗನಹಳ್ಳಿ ಶಿವಶಂಕರ್ ಅವರು ಬಿಡುಗಡೆ ಮಾಡಿದರು. ಕನ್ನಡ ಪರ ಚಿಂತಕ ರಾ.ನಂ.ಚಂದ್ರಶೇಖರ್, ಸಪ್ನಬುಕ್ ಹೌಸ್‌ನ ಹಿರಿಯ ಸದಸ್ಯ ದೊಡ್ಡೇಗೌಡ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
MUST WATCH
ಹೊಸ ಸೇರ್ಪಡೆ
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.