ಜಯದೇವ ವೃತ್ತದ ಮೇಲ್ಸೇತುವೆಗೆ ಜೀವದಾನ

Team Udayavani, Apr 10, 2018, 12:21 PM IST

jayadeva.jpg

ಬೆಂಗಳೂರು: ವಿಧಾನಸಭಾ ಚುನಾವಣೆಯಿಂದ ಜಯದೇವ ವೃತ್ತದ ಮೇಲ್ಸೇತುವೆಗೆ ಜೀವದಾನ ಸಿಕ್ಕಿದೆ! “ನಮ್ಮ ಮೆಟ್ರೋ’ ಎರಡನೇ ಹಂತದ ಯೋಜನೆಗಾಗಿ ಜಯದೇವ ಫ್ಲೈಓವರ್‌ ನೆಲಸಮಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ) ನಿರ್ಧರಿಸಿತ್ತು. ಆದರೆ, ಚುನಾವಣೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಇದನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಫ್ಲೈಓವರ್‌ ಕೆಡವಲು ಈ ಹಿಂದೆಯೇ ಸಂಚಾರ ಪೊಲೀಸರ ಅನುಮತಿ ದೊರಕಿತ್ತು. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗವನ್ನೂ ರೂಪಿಸಲಾಗಿತ್ತು. ಅಲ್ಲದೆ, ಹಿಂದೂಸ್ತಾನ್‌ ಕನ್‌ಸ್ಟ್ರಕ್ಷನ್‌ ಕಂಪನಿ (ಎಚ್‌ಸಿಸಿ) ಮತ್ತು ಯುಆರ್‌ಸಿ ಕನ್‌ಸ್ಟ್ರಕ್ಷನ್‌ಗೆ ಟೆಂಡರ್‌ ನೀಡಲಾಗಿತ್ತು. ಸಿವಿಲ್‌ ಕಾಮಗಾರಿಯ ಯೋಜನಾ ವೆಚ್ಚ 797.29 ಕೋಟಿ ರೂ. ಆಗಿದೆ. ಕಾಮಗಾರಿ ದಿನಾಂಕ ನಿಗದಿ ಮಾತ್ರ ಬಾಕಿ ಇತ್ತು. ಅಷ್ಟರಲ್ಲಿ ಚುನಾವಣೆ ಘೋಷಣೆ ಆಗಿದ್ದರಿಂದ ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹಿಂಜರಿಕೆ: ನಗರದ ಅತಿಹೆಚ್ಚು ವಾಹನದಟ್ಟಣೆ ಇರುವ ಮಾರ್ಗಗಳಲ್ಲಿ ಜಯದೇವ ವೃತ್ತ ಕೂಡ ಒಂದು. ಇಲ್ಲಿ ನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುತ್ತವೆ. ಚುನಾವಣೆ ಹೊಸ್ತಿಲಲ್ಲಿ ಇರುವಾಗ ಮೇಲ್ಸೇತುವೆ ನೆಲಸಮಗೊಳಿಸಿ, ಜನರಿಗೆ ಕಿರಿಕಿರಿ ಉಂಟುಮಾಡುವುದರ ಜತೆಗೆ “ಕಪ್ಪುಚುಕ್ಕೆ’ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹಿಂದೆಸರಿಯಲಾಗಿದೆ ಎಂದು ಬಿಎಂಆರ್‌ಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಶಕದ ಹಿಂದಷ್ಟೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಸುಮಾರು 21 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಈ ಮೇಲ್ಸೇತುವೆಯು ಬನ್ನೇರುಘಟ್ಟ ಮಾರ್ಗದ ಸಿಗ್ನಲ್‌ ಮುಕ್ತ ಸಂಚಾರ ಸೇವೆ ಒದಗಿಸುತ್ತಿದೆ. 

ಹಿನ್ನೆಲೆ: ಜಯದೇವ ಬಳಿಯ 8 ಕಿ.ಮೀ. ಮೆಟ್ರೋ ಮಾರ್ಗವು ಜಯದೇವ ಆಸ್ಪತ್ರೆ ಆವರಣದಲ್ಲಿ ತೆಗೆದುಕೊಂಡು ಹೋಗಲು ನಿರ್ಧರಿಸಲಾಗಿತ್ತು. ಇದಕ್ಕೆ ಆಸ್ಪತ್ರೆ ಆಕ್ಷೇಪ ವ್ಯಕ್ತಪಡಿಸಿತು. ಪರಿಣಾಮ ಆಸ್ಪತ್ರೆಯ ವಿರುದ್ಧ ದಿಕ್ಕಿನಲ್ಲಿರುವ ಸ್ಥಳಕ್ಕೆ ವರ್ಗಾವಣೆಗೊಂಡಿತ್ತು. ಇದಕ್ಕೂ ವಾಣಿಜ್ಯ ಕಟ್ಟಡಗಳು ಹಾಗೂ ಹಿರಿಯ ನಾಗರಿಕರ ಮನೆಗಳು ಸೇರಿದಂತೆ ಸುಮಾರು 90ಕ್ಕೂ ಹೆಚ್ಚು ಮನೆಗಳು ನೆಲಸಮಗೊಳ್ಳುತ್ತಿದ್ದವು. ಈ ಬದಲಾವಣೆಯನ್ನು ಖಂಡಿಸಿ ಜಯದೇವ ಇಂಟರ್‌ಚೇಂಜ್‌ ಮೆಟ್ರೋ ಸಂತ್ರಸ್ತರ ವೇದಿಕೆ ವಿರೋಧ ವ್ಯಕ್ತಪಡಿಸಿತ್ತು.

ಎತ್ತರಿಸಿದ ಮಾರ್ಗದಿಂದ ನಿವಾಸಿಗಳಿಗೆ ತೊಂದರೆಯಾಗಲಿದ್ದು, ಈ ಮಾರ್ಗವನ್ನು ಸುರಂಗ ಮಾರ್ಗದಲ್ಲಿ ಕೊಂಡೊಯ್ಯಬೇಕು ಎಂದೂ ವೇದಿಕೆ ಆಗ್ರಹಿಸಿತ್ತು.  ಆದರೆ, ಸುರಂಗ ಮಾರ್ಗ ನಿರ್ಮಾಣ ವೆಚ್ಚ ದುಪ್ಪಟ್ಟು ಆಗಲಿದೆ. ಈ ಹಿನ್ನೆಲೆಯಲ್ಲಿ ಎರಡೂ ಮಾರ್ಗಗಳನ್ನು ಕೈಬಿಟ್ಟು, ರಸ್ತೆ ಮಧ್ಯದಿಂದ ಮಾರ್ಗ ನಿರ್ಮಾಣಕ್ಕೆ ನಿಗಮ ನಿರ್ಧರಿಸಿತು. ಇದರಿಂದ ಕಟ್ಟಡಗಳನ್ನು ಕೆಡಹುವುದು ತಪ್ಪಲಿದೆ. ಈ ಕಾಮಗಾರಿಯನ್ನು 36 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಿದೆ. 

ಏನೇನು ಬರುತ್ತೆ?: ಇಲ್ಲಿ ಮೂರು ಗ್ರೇಡ್‌ ಸೆಪರೇಟರ್‌ಗಳು ಹಾಗೂ ಎರಡು ಮೆಟ್ರೋ ಮಾರ್ಗಗಳನ್ನು ಒಳಗೊಂಡ ಐದು ಹಂತಗಳ ಸಂಚಾರ ವ್ಯವಸ್ಥೆ ಬರಲಿದೆ. ಒಂದು ಇಂಟರ್‌ಚೇಂಜ್‌ ಮೆಟ್ರೋ ನಿಲ್ದಾಣವೂ ಇಲ್ಲಿ ನಿರ್ಮಾಣಗೊಳ್ಳಲಿದೆ. ಮೇಲ್ಸೇತುವೆಯನ್ನು ನೆಲಸಮಗೊಳಿಸಲಾಗುತ್ತದೆ. ಆದರೆ, ಈಗಿರುವ ಕೆಳಸೇತುವೆ ಹಾಗೆಯೇ ಉಳಿಸಿಕೊಳ್ಳಲಾಗುವುದು.

ಡೇರಿ ವೃತ್ತದಿಂದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಸಂಪರ್ಕಿಸುವ ಬನ್ನೇರುಘಟ್ಟ ರಸ್ತೆಯಲ್ಲಿರುವ ಈ ಕೆಳಸೇತುವೆ ಮೊದಲ ಹಂತದಲ್ಲಿ ಇರಲಿದೆ. ಕೆಳಸೇತುವೆಯ ಮೇಲೆ ನೆಲಮಟ್ಟದಲ್ಲಿ ಎರಡೂ ದಿಕ್ಕುಗಳಲ್ಲಿ ರಸ್ತೆ ನಿರ್ಮಿಸಲಾಗುತ್ತದೆ. ಅವು ಎರಡನೇ ಹಂತದಲ್ಲಿ ಬರಲಿವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. 

ಟಾಪ್ ನ್ಯೂಸ್

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.