ಬೆಂಗಳೂರಿನ ಹಳೆಯ ಕನ್ನಡ ಮಾಧ್ಯಮ ಶಾಲೆಗೆ ಬೀಗ
Team Udayavani, Jan 3, 2018, 12:48 PM IST
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ಕಳೆದ 10 ವರ್ಷದಿಂದ ಶಿಕ್ಷಕರನ್ನು ನೇಮಿಸದೇ ವ್ಯವಸ್ಥಿತವಾಗಿ ಬೆಂಗಳೂರಿನ ಅತ್ಯಂತ ಹಳೆಯ ಕನ್ನಡ ಮಾಧ್ಯಮ ಅನುದಾನಿತ ಶಾಲೆಯೊಂದನ್ನು ಮುಚ್ಚಿದೆ.
ಖ್ಯಾತ ನಟ ಸಾಹಸಸಿಂಹ ಡಾ.ವಿಷ್ಣು ವರ್ಧನ್, ಹಿರಿಯ ನಟ ರಮೇಶ್ ಭಟ್, ಬೆಂಗಳೂರಿನ ಪ್ರಸಿದ್ಧ ವಕೀಲರು, ವಿಜ್ಞಾನಿಗಳು, ಶಿಕ್ಷಣ ತಜ್ಞರು ಓದಿರುವ ಚಾಮರಾಜಪೇಟೆ 4ನೇ ಮುಖ್ಯರಸ್ತೆಯ ಮಾಡೆಲ್ ಸ್ಕೂಲ್ ಎಜುಕೇಷನ್ ಸೊಸೈಟಿಯ ಪ್ರೌಢಶಾಲೆಯನ್ನು ಎರಡು ತಿಂಗಳ ಹಿಂದೆಯೇ ಇಲಾಖೆ ಮುಚ್ಚಿದೆ. ಈಗ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಬೇಕಾದ ವ್ಯವಸ್ಥೆ ಮಾಡಿಕೊಂಡಿದೆ.
6 ರಿಂದ 8ನೇ ತರಗತಿಯ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿರುವ 80 ವಿದ್ಯಾರ್ಥಿಗಳು ಹಾಗೂ ಅವರಿಗೆ ಪಾಠ ಹೇಳಿಕೊಡಲು 6 ಶಿಕ್ಷಕರಿದ್ದರು. ವಿದ್ಯಾರ್ಥಿಗಳನ್ನು ಸಮೀಪದ ಸರ್ಕಾರಿ ಹಾಗೂ ಅನುದಾನಿತ ಶಾಲೆಗೆ ವರ್ಗಾಯಿಸಿ, ಶಿಕ್ಷಕರನ್ನು ಬೇರೆ ಶಾಲೆಗೆ ನಿಯೋಜಿಸಿ ಶಿಕ್ಷಣ ಇಲಾಖೆಯಿಂದಲೇ ಪ್ರೌಢಶಾಲಾ ವಿಭಾಗಕ್ಕೆ ಬೀಗ ಜಡಿದಿದ್ದಾರೆ.
ಪ್ರಾಥಮಿಕ ಶಾಲೆಯಲ್ಲಿ (1ರಿಂದ 7ನೇ ತರಗತಿ) ಸುಮಾರು 35 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಶಾಲೆಯನ್ನು ಮುಚ್ಚಲು ಇಲಾಖೆಯ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ ಎಂದು ಆಡಳಿತ ಮಂಡಳಿಯ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ನಿಯಮದ ಪ್ರಕಾರ ಅನುದಾನಿತ ಶಾಲೆಯ ಪ್ರತಿ ತರಗತಿಯಲ್ಲಿ ಕನಿಷ್ಠ 25 ವಿದ್ಯಾರ್ಥಿಗಳು ಇರಬೇಕು. ಸರ್ಕಾರಿ ನಿಯಮಕ್ಕೆ ಬದ್ಧವಾಗಿದ್ದ ಈ ಶಾಲೆಯಲ್ಲಿ ಕಳೆದ ಮೂರು ವರ್ಷದಿಂದ ಫಲಿತಾಂಶ ಕುಸಿದಿತ್ತು. ಇದಕ್ಕೆ ಶಿಕ್ಷಕರ ಕೊರತೆಯೇ ಕಾರಣ, ಕಳೆದ 10 ವರ್ಷದಿಂದ ಸರ್ಕಾರ ಶಿಕ್ಷಕರನ್ನು ನೇಮಕ ಮಾಡಿಲ್ಲ.
2016ರಲ್ಲಿ ಶಾಲೆಯ ಶಿಕ್ಷಕರೊಬ್ಬರು ನಿವೃತ್ತಿ ಹೊಂದಿದ್ದರು. ನಂತರವೂ ನೇಮಕಾತಿ ನಡೆದಿಲ್ಲ. ಇಲಾಖೆಯಿಂದ ಶಿಕ್ಷಕರ ನೇಮಕಕ್ಕೆ ಆದೇಶ ಆಗಿದ್ದರೂ, ಬಿಇಒ ಮತ್ತು ಡಿಡಿಪಿಐಗಳು ಇದಕ್ಕೆ ಅವಕಾಶ ನೀಡಿಲ್ಲ. ಮುಖ್ಯಶಿಕ್ಷಕರ ಜವಾಬ್ದಾರಿಯನ್ನು ಬಿಇಒ ನಿಭಾಯಿಸುತ್ತಿದ್ದರು ಎಂದು ಶಾಲೆಯ ಮೂಲಗಳು ಮಾಹಿತಿ ನೀಡಿದರು.
1870ರಲ್ಲಿ ನರ್ಸರಿಯೊಂದಿಗೆ ಆರಂಭಗೊಂಡ ಮಾಡೆಲ್ ಸ್ಕೂಲ್ ಎಜುಕೇಷನ್ ಸೊಸೈಟಿ, 1957ರಲ್ಲಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆ ತೆರೆದಿತ್ತು. ಹಲವು ಗಣ್ಯರು ಓದಿದ ಮತ್ತು ಭೇಟಿ ನೀಡಿದ ಶಾಲೆ ಇದಾಗಿದೆ. ಬಾಸ್ಕೊ ಮನೆಯ ನೂರಾರು ಅನಾಥ ಮಕ್ಕಳಿಗೆ ಶಿಕ್ಷಣ ನೀಡಿದ ಸಂಸ್ಥೆಯೂ ಹೌದು. ಒಂದು ಕಾಲದಲ್ಲಿ ಈ ಶಾಲೆಯಲ್ಲಿ ಸೀಟು ಪಡೆಯಲು ತೀವ್ರ ಪೈಪೋಟಿ ಇತ್ತು. 8 ಸುಸಜ್ಜಿತ ಕೊಠಡಿ ಇಂದಿಗೂ ಇದೆ ಎಂದು ಶಿಕ್ಷಕರೊಬ್ಬರು ಮಾಹಿತಿ ನೀಡಿದರು.
ಶಾಲೆ ಮುಚ್ಚುವಂತೆ ಇಲಾಖೆಯಿಂದ ಪತ್ರ ಬಂದಿದೆ. ಮಕ್ಕಳಲ್ಲಿದ್ದ ಸಂದರ್ಭದಲ್ಲಿ ಅಧಿಕಾರಿಗಳು ಬಂದು ಸಮೀಕ್ಷೆ ಮಾಡಿ ವರದಿ ನೀಡಿದ್ದಾರೆ. ಬೆಂಗಳೂರಿನ ಪ್ರಪ್ರಥಮ ಕನ್ನಡ ಮಾಧ್ಯಮ ಶಾಲೆ ಇದು. ಅದನ್ನು ಉಳಿಸಿಕೊಳ್ಳಲು ಇಲಾಖೆಯೇ ಪ್ರಯತ್ನ ಮಾಡುತ್ತಿಲ್ಲ.
-ಯದುಕುಮಾರ್, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.