ಫ್ಲೆಕ್ಸ್ ಮುದ್ರಣ ಮಳಿಗೆಗಳಿಗೆ ಬೀಗ
Team Udayavani, Aug 4, 2018, 12:06 PM IST
ಬೆಂಗಳೂರು: ಹೈಕೋರ್ಟ್ ಸೂಚನೆ ಮೇರೆಗೆ ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ತೆರವು ಕಾರ್ಯಾಚರಣೆ ನಡೆಯುತ್ತಿರುವ ಬಿಬಿಎಂಪಿ, ಫ್ಲೆಕ್ಸ್‌ಗಳ ತೆರವು ಕಾರ್ಯದ ಜತೆಗೆ ಶುಕ್ರವಾರ ನಗರದ ಹಲವು ಫ್ಲೆಕ್ಸ್, ಬ್ಯಾನರ್ ಮುದ್ರಣ ಮಳಿಗೆಗಳ ಮೇಲೆ ದಾಳಿ ನಡೆಸಿ ಮಳಿಗೆಗಳಿಗೆ ಬೀಗ ಜಡಿದಿದೆ.
ಮೂರು ದಿನಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್ ತೆರವು ಕಾರ್ಯಾಚರಣೆ ನಡೆಸುತ್ತಿರುವ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ, ಸುಮಾರು 20 ಸಾವಿರಕ್ಕೂ ಹೆಚ್ಚು ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಿದ್ದಾರೆ. ಈ ನಡುವೆಯೇ ಫ್ಲೆಕ್ಸ್, ಬ್ಯಾನರ್ ಮುದ್ರಿಸುವ ಮಳಿಗೆಗಳ ಮೇಲೂ ಶುಕ್ರವಾರ ದಾಳಿ ನಡೆಸಿದ ಅಧಿಕಾರಿಗಳು, ಮಳಿಗೆಗಳಿಗೆ ಬೀಗಮುದ್ರೆ ಹಾಕಿ ನೋಟಿಸ್ ಜಾರಿಗೊಳಿಸಿದ್ದಾರೆ.
ಪಾಲಿಕೆ ಆರೋಗ್ಯಾಧಿಕಾರಿ ಡಾ.ಸುರೇಶ್ ನೇತೃತ್ವದಲ್ಲಿ ಗಾಂಧಿನಗರ ಹಾಗೂ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, 8ಕ್ಕೂ ಹೆಚ್ಚು ಫ್ಲೆಕ್ಸ್ ಮುದ್ರಣ ಮಳಿಗೆಗಳ ಮೇಲೆ ದಾಳಿ ನಡೆಸಿ ಮಾಲೀಕರಿಗೆ ದಂಡ ವಿಧಿಸಿದ್ದು, ಮಳಿಗೆಗಳಲ್ಲಿ ಶೇಖರಿಸಲಾಗಿದ್ದ ಫ್ಲೆಕ್ಸ್ ಮುದ್ರಣ ಉತ್ಪನ್ನಗಳನ್ನು ವಶಕ್ಕೆ ಪಡೆದಿದ್ದಾರೆ. ಎಂಟು ವಲಯಗಳಿಂದ 36 ಮಳಿಗೆಗಳಿಗೆ ಬೀಗ ಹಾಕಲಾಗಿದೆ.
ಚಾಮರಾಜಪೇಟೆಯಲ್ಲಿನ ಆರ್.ಕೆ.ಪ್ರಿಂಟರ್ ಹಾಗೂ ಲಾರ್ಡ್ ಡಿಜಿಟಲ್ಸ್ ಮಳಿಗೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಜತೆಗೆ ಬಿನ್ನಿಪೇಟೆ ವಾರ್ಡ್‌ನ ಓಂಕಾರ್ ಎಂಟರ್ ಪ್ರೈಸಸ್ ಮೇಲೆ ದಾಳಿ ನಡೆಸಿ 600 ಕೆ.ಜಿ. ಫ್ಲೆಕ್ಸ್‌ಗಳನ್ನು ಜಪ್ತಿ ಮಾಡಿದ್ದು, ಮಾಲೀಕರಿಗೆ 30 ಸಾವಿರ ರೂ. ದಂಡ ವಿಧಿಸಿದ್ದಾರೆ. ಜತೆಗೆ ಮುಂದಿನ ದಿನಗಳಲ್ಲಿ ಫ್ಲೆಕ್ಸ್ ಮುದ್ರಣ ಮಾಡದಂತೆ ನೋಟಿಸ್ ಜಾರಿಗೊಳಿಸಿದ್ದಾರೆ.
ಹಲ್ಲೆ ನಡೆಸಿದ ನಾಲ್ವರ ಬಂಧನ: ಮಹದೇವಪುರ ವಲಯದಲ್ಲಿ ಗುರುವಾರ ಫ್ಲೆಕ್ಸ್, ಬ್ಯಾನರ್ ತೆರವು ಕಾರ್ಯಾಚರಣೆ ವೇಳೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿ, ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಗುರುವಾರ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯಲ್ಲಿ ಹಾಕಲಾಗಿದ್ದ ಅನಧಿಕೃತ ಬ್ಯಾನರ್‌ಗಳನ್ನು ತೆರವುಗೊಳಿಸುವ ವೇಳೆ ಪಾಲಿಕೆಯ ಎಚ್‌ಎಎಲ್ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ಭಟ್ಟಚಾರ್ ಮೇಲೆ ಹಲ್ಲೆ ನಡೆಸಿದ ರಾಜೇಂದ್ರನ್, ಸೈಮರ್, ಕಮಲನಾಥ್ ಹಾಗೂ ಸೂರ್ಯ ಎಂಬ ಆರೋಪಿಗಳನ್ನು ಬಂಧಿಸಲಾಗಿದ್ದು, ಸಂತೋಷ್ ಹಾಗೂ ಸರವಣ ತಲೆಮರೆಸಿಕೊಂಡಿದ್ದಾರೆ.
ಅಧಿಕಾರಿಗಳಿಗೆ ಧೈರ್ಯ ತುಂಬಿದ ಮೇಯರ್: ಗುರುವಾರ ಪೈ ಬಡಾವಣೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಫ್ಲೆಕ್ಸ್ ತೆರವುಗೊಳಿಸುವ ವೇಳೆ ರಾಜಕೀಯ ಮುಖಂಡರ ಬೆಂಬಲಿಗರಿಂದ ಹಲ್ಲೆಗೆ ಒಳಗಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಭೇಟಿ ಮಾಡಿದ ಮೇಯರ್ ಆರ್.ಸಂಪತ್‌ರಾಜ್, ಅವರಲ್ಲಿ ಧೈರ್ಯ ತುಂಬಿ ನಿಮ್ಮ ಜತೆ ನಾವಿದ್ದೇವೆ.
ಯಾವುದಕ್ಕೂ ಹೆದರವ ಅಗತ್ಯವಿಲ್ಲ. ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹೈಕೋರ್ಟ್ ಸೂಚನೆ ನಂತರವೂ ವಾರ್ತೂರು ವಾರ್ಡ್‌ನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿಲ್ಲ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ವರ್ತೂರು ವಾರ್ಡ್‌ಗೆ ಭೇಟಿ ನೀಡಿದ ಮೇಯರ್, ಫ್ಲೆಕ್ಸ್ ತೆರವುಗೊಳಿಸಲು ಮುಂದಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ವಾರ್ಡ್‌ನಲ್ಲಿ ಹಾಕಲವಾಗಿರುವ ಎಲ್ಲ ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಕೂಡಲೇ ತೆರವುಗೊಳಿಸಬೇಕು. ನಂತರವೂ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ದೂರು ದಾಖಲಿಸಿ ವಾಟ್ಸ್‌ಆ್ಯಪ್ ಮೂಲಕ ದೂರು ಪ್ರತಿಯನ್ನು ತಮಗೆ ಕಳುಹಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಫ್ಲೆಕ್ಸ್ ಮುದ್ರಣ ಮಳಿಗೆಗಳ ವಿರುದ್ಧ ಕೈಗೊಂಡ ಕ್ರಮಗಳ ವಿವರ
ವಲಯ ವಶಕ್ಕೆ ಪಡೆದ ಫ್ಲೆಕ್ಸ್(ಕೆ.ಜಿ) ಮಳಿಗೆಗೆ ಬೀಗ ನೋಟಿಸ್ ಪಡೆದ ಮಳಿಗೆಗಳು ದಂಡ
-ಪಶ್ಚಿಮ 780 6 6 35,000
-ಪೂರ್ವ 8,500 11 0 50,000
-ದಕ್ಷಿಣ 80 2 2 0
-ಬೊಮ್ಮನಹಳ್ಳಿ 5,000 6 2 0
-ದಾಸರಹಳ್ಳಿ 2,200 0 0 0
-ಆರ್‌ಆರ್‌ನಗರ 0 5 0 0
-ಯಲಹಂಕ 2,000 0 0 0
-ಮಹದೇವಪುರ 260 6 0 7,000
-ಒಟ್ಟು 18,820 36 10 92,000
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.