ಲೋಕಸಭೆ ಚುನಾವಣೆ: ಕೇರಳದಲ್ಲಿ 2 ಸ್ಥಾನ ಗೆಲ್ಲಲು ಜೆಡಿಎಸ್ ಚಿತ್ತ
Team Udayavani, Jul 30, 2018, 6:05 AM IST
ಬೆಂಗಳೂರು: ರಾಜ್ಯಾಧಿಕಾರಕ್ಕಾಗಿ ಕಾಂಗ್ರೆಸ್ ಜತೆ ಮಾಡಿಕೊಂಡ ಮೈತ್ರಿಯನ್ನು ಲೋಕಸಭೆ ಚುನಾವಣೆಗೂ ಮುಂದುವರಿಸಿ ರಾಜ್ಯದಲ್ಲಿ ಲೋಕಸಭಾ ಸೀಟುಗಳ ಸಂಖ್ಯೆ ಹೆಚ್ಚಿಸಿಕೊಳ್ಳಲು ಮುಂದಾಗಿರುವ ಜೆಡಿಎಸ್ ಇದೀಗ ನೆರೆ ರಾಜ್ಯ ಕೇರಳದ ಮೇಲೂ ಕಣ್ಣು ಹಾಕಿದೆ.
ಈಗಾಗಲೇ ಕೇರಳದಲ್ಲಿ ಎಡಪಕ್ಷಗಳ ಒಕ್ಕೂಟ (ಎಲ್‌ಡಿಎಫ್) ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅಲ್ಲೂ ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ಪ್ರಯತ್ನಕ್ಕೆ ಕೈಹಾಕಿದೆ. ಶನಿವಾರ ಕೇರಳಕ್ಕೆ ತೆರಳಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
ಕೇರಳದ ಕೊಚ್ಚಿನ್ ಬಳಿಯ ಕಳಮಶೆÏàರಿಯಲ್ಲಿ ಜೆಡಿಎಸ್ ಕೇರಳ ಘಟಕ ತಮಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಎರಡು ಸ್ಥಾನಗಳಲ್ಲಿ ಗೆಲುವು ಖಚಿತಪಡಿಸಿಕೊಳ್ಳುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಆ ಮೂಲಕ ಲೋಕಸಭೆ ಚುನಾವಣೆ ಸ್ಥಾನ ಹೊಂದಾಣಿಕೆ ಸಂದರ್ಭದಲ್ಲಿ ಜೆಡಿಎಸ್‌ಗೆ ಎರಡು ಸೀಟುಗಳನ್ನು ನೀಡುವಂತೆ ಎಲ್‌ಡಿಎಫ್ ಮುಂದೆ ಪರೋಕ್ಷ ಬೇಡಿಕೆ ಇಟ್ಟಂತಾಗಿದೆ.
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಜನತಾ ಪರಿವಾರ ಒಂಡು ಹೋದರೂ ಕರ್ನಾಟಕ ಮತ್ತು ಕೇರಳದಲ್ಲಿ ಪಕ್ಷದ ಕಾರ್ಯಕರ್ತರ ಒಗ್ಗಟ್ಟಿನಿಂದ ಪಕ್ಷ ನಮ್ಮೊಂದಿಗೆ ಉಳಿದುಕೊಂಡಿದೆ. ಕಠಿಣ ಪರಿಶ್ರಮದ ಮೂಲಕ ಇದನ್ನು ಬಲಗೊಳಿಸಬೇಕಾದ ಅಗತ್ಯವಿದೆ. ಬೆಂಗಳೂರಿನಲ್ಲಿ 10 ಸಾವಿರಕ್ಕೂ ಹೆಚ್ಚು ಮಳೆಯಾಳಿ ಭಾಷಿಕರು ವಾಸವಾಗಿದ್ದು, ಪಕ್ಷ ಸಂಘಟನೆಗೆ ಇವರ ಸಹಕಾರ ಪಡೆಯಲು ಯಾವುದೇ ಮುಜುಗರ ಬೇಡ. ಕೇರಳದಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಚುರುಕುಗೊಳಿಸಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎರಡು ಸ್ಥಾನಗಳಲ್ಲಿ ಪಕ್ಷವನ್ನು ಗೆಲ್ಲಲು ಶ್ರಮಿಸಿ ಎಂದು ಕರೆ ನೀಡಿದರು.
ತಮ್ಮ ನೇತೃತ್ವದ ಸರ್ಕಾರ ಕರ್ನಾಟಕದಲ್ಲಿ ರೈತರ ಸುಮಾರು 48 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುತ್ತಿರುವುದು, ಹೊಸ ಕೃಷಿ ನೀತಿ ಜಾರಿಗೆ ಮುಂದಾಗಿರುವುದು ಮುಂತಾದ ಅಂಶಗಳನ್ನು ಸಭೆಯಲ್ಲಿ ವಿವರಿಸಿದ ಅವರು, ಈ ಎಲ್ಲಾ ವಿಚಾರಗಳೊಂದಿಗೆ ಕೇರಳದಲ್ಲೂ ಪಕ್ಷ ಸಂಘಟನೆ ಮಾಡುವಂತೆ ಸೂಚಿಸಿದರು.
ಕೇರಳದಲ್ಲಿ ಎಲ್‌ಡಿಎಫ್ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪ್ರಸ್ತುತ ಅಲ್ಲಿನ ವಿಧಾನಸಭೆಯಲ್ಲಿ ಮೂರು ಸ್ಥಾನಗಳನ್ನು ಹೊಂದಿದೆ. 2009ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಕೇರಳದಲ್ಲಿ ಒಂದು ಸ್ಥಾನ ಗೆದ್ದಿತ್ತು. ಆದರೆ, 2014ರ ಚುನಾವಣೆಯಲ್ಲಿ ಈ ಸ್ಥಾನ ಕಳೆದುಕೊಳ್ಳಬೇಕಾಗಿ ಬಂದಿತ್ತು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಿ ತನ್ನ ಶಕ್ತಿ ವೃದ್ಧಿಸಿಕೊಳ್ಳಲು ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.