ಶಾಲಾ ಮಕ್ಕಳ ಸುರಕ್ಷತೆಗೆ ಲೋಕಾಸಕ್ತಿ


Team Udayavani, Jan 31, 2019, 5:44 AM IST

blore-1.jpg

ಬೆಂಗಳೂರು: ಮಕ್ಕಳ ಸುರಕ್ಷತಾ ನಿಯಮಗಳನ್ನು ಪಾಲಿಸದ ಖಾಸಗಿ ಶಾಲೆಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಲೋಕಾಯುಕ್ತ, ಬೆಂಗಳೂರು ನಗರ ವ್ಯಾಪ್ತಿಯ ಖಾಸಗಿ ಶಾಲೆಗಳ ಪೈಕಿ ಶೇ.10ರಷ್ಟು ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಿಗೆ (ಎಡಿಜಿಪಿ) ಸೂಚಿಸಿದ್ದಾರೆ.

ಭೇಟಿ ನೀಡುವ ಖಾಸಗಿ ಶಾಲೆಗಳಲ್ಲಿ ಮಕ್ಕಳ ಶಿಕ್ಷಣ ನೀತಿ-2016ರ ಅನ್ವಯ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿಯೇ? ಇಲ್ಲವೇ? ಮಕ್ಕಳ ಸುರಕ್ಷಾ ಸಮಿತಿ ರಚನೆಯಾಗಿಯೇ? ಮಕ್ಕಳ ಭದ್ರತೆ ಬಗ್ಗೆ ಶಾಲೆಗಳ ಕ್ರಮಗಳೇನು? ಹಾಗೂ ಶಾಲಾ ಸಿಬ್ಬಂದಿ ಹಿನ್ನೆಲೆ, ಶಾಲಾ ವಾಹನಗಳ ಸುರಕ್ಷತೆ ಸೇರಿ ಪ್ರಮುಖ ಮಾಹಿತಿಗಳನ್ನು ಸಂಗ್ರಹಿಸಿ ವರದಿ ಸಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ.

ಖಾಸಗಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡದಿರುವ ಕುರಿತು ‘ಮಕ್ಕಳ ಸುರಕ್ಷಾ ನಿಯಮಗಳಿಗೆ ಕಿಮ್ಮತ್ತು ನೀಡದ ಖಾಸಗಿ ಶಾಲೆಗಳು’ ಎಂಬ ಶೀರ್ಷಿಕೆಯಡಿ 2018ರ ಜುಲೈ 2ರಂದು ‘ಉದಯವಾಣಿ’ ವಿಶೇಷ ವರದಿ ಪ್ರಕಟಿಸಿತ್ತು. ವರದಿ ಆಧರಿಸಿ, ಲೋಕಾಯುಕ್ತ ಸಂಸ್ಥೆ, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಈ ಸಂಬಂಧ ಈಗಾಗಲೇ ಬೆಂಗಳೂರು ನಗರದಲ್ಲಿರುವ ಖಾಸಗಿ ಶಾಲೆಗಳ ಪಟ್ಟಿ ಸಿದ್ಧಪಡಿಸಿ ಕೊಂಡಿರುವ ಲೋಕಾಯುಕ್ತ ಪೊಲೀಸರು, ಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ ನಗರದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳಿವೆ. ಈ ಪೈಕಿ ಶೇ.10ರಷ್ಟು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲು ಕಾಲವಕಾಶ ಬೇಕಿದೆ ಎಂದು ಲೋಕಾಯುಕ್ತ ಅಧಿಕಾರಿಗಳ ಬಳಿ ಪೊಲೀಸರು ಮನವಿ ಮಾಡಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

ಮತ್ತೂಂದೆಡೆ ಬೆಂಗಳೂರು ದಕ್ಷಿಣ ಮತ್ತು ಉತ್ತರ ಜಿಲ್ಲೆ ಹಾಗೂ ಗ್ರಾಮಾಂತರ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಮ್ಮ ವ್ಯಾಪ್ತಿಯಲ್ಲಿರುವ ಖಾಸಗಿ ಶಾಲೆಗಳು ಕೈಗೊಂಡಿರುವ ಮಕ್ಕಳ ಸುರಕ್ಷತಾ ಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಲೋಕಾಯುಕ್ತ ಸಂಸ್ಥೆಗೆ ವರದಿ ಸಲ್ಲಿಸಿದ್ದಾರೆ. ಈ ಪೈಕಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿ ಕಾರಿಗಳು ವರದಿ ಸಲ್ಲಿಸಿದ್ದು, ನಾಲ್ಕು ತಾಲೂಕುಗಳ 236 ಖಾಸಗಿ ಶಾಲೆಗಳ ಪೈಕಿ ದೊಡ್ಡಬಳ್ಳಾಪುರದ ಖಾಸಗಿ ಶಾಲೆಯೊಂದು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಬಗ್ಗೆ ವರದಿಯಲ್ಲಿ ತಿಳಿಸಲಾಗಿದೆ.

ಸರ್ಕಾರಿ ಶಾಲೆಗಳಲ್ಲೇ ಸಮಿತಿಯಿಲ್ಲ: ಬೆಂಗಳೂರು ಉತ್ತರ ಜಿಲ್ಲಾ ವ್ಯಾಪ್ತಿಯ ವಲಯ 1, ವಲಯ 2, ವಲಯ 3 ಹಾಗೂ ವಲಯ 4ರಲ್ಲಿ 1.477 ಖಾಸಗಿ ಅನುದಾನರಹಿತ ಶಾಲೆಗಳಿದ್ದು, ಈ ಪೈಕಿ ವಲಯ 4ರ ಎರಡು ಶಾಲೆಗಳು ಮಾತ್ರ ಮಕ್ಕಳ ರಕ್ಷಣಾ ಸಮಿತಿ ರಚನೆ ಮಾಡಿಕೊಂಡಿಲ್ಲ. ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯ ವಲಯ 1, ವಲಯ 2, ವಲಯ 3, ವಲಯ 4 ಮತ್ತು ಆನೇಕಲ್‌ ತಾಲೂಕಿನಲ್ಲಿ 953 ಸರ್ಕಾರಿ, 309 ಅನುದಾನಿತ ಹಾಗೂ 2.231 ಅನುದಾನರಹಿತ ಸೇರಿ ಒಟ್ಟು 3.493 ಶಾಲೆಗಳಿವೆ. ಈ ಪೈಕಿ 3.179 ಶಾಲೆಗಳು ಸಮಿತಿ ರಚಿಸಿಕೊಂಡಿದ್ದು, ಆನೇಕಲ್‌ನ 36 ಸರ್ಕಾರಿ ಶಾಲೆಗಳಲ್ಲೇ ಮಕ್ಕಳ ರಕ್ಷಣಾ ಸಮಿತಿ ರಚಿಸಿಕೊಂಡಿಲ್ಲ ಎಂದು ವರದಿಯಲ್ಲೇ ಉಲ್ಲೇಖೀಸಲಾಗಿದೆ. 2018ರ ಜುಲೈ 2ರಂದು ‘ಉದಯವಾಣಿ’ ಪ್ರಕಟಿಸಿದ್ದ ವಿಶೇಷ ವರದಿ.

ರಾಜ್ಯದ ಎಲ್ಲ ಡಿಡಿಪಿಐಗಳಿಗೆ ಸೂಚನೆ
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಮಾತ್ರವಲ್ಲದೆ, ರಾಜ್ಯದ ಎಲ್ಲ ಉಪ ನಿರ್ದೇಶಕರಿಗೂ ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ವಸ್ತುನಿಷ್ಠ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಪ್ರಮುಖವಾಗಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರತಿ ಶಾಲಾ ಮುಖ್ಯಸ್ಥರಿಂದ ಮಾಹಿತಿ ಪಡೆದು ಅಗತ್ಯ ಮಾರ್ಗದರ್ಶನ ನೀಡಬೇಕು ಮತ್ತು ಅನುಪಾಲನಾ ವರದಿ ಸಲ್ಲಿಸಬೇಕು. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಇಲಾಖಾ ತರಬೇತಿಗಳನ್ನು ನೀಡುವ ಮಾದರಿಯಲ್ಲಿಯೇ ಖಾಸಗಿ ಶಾಲಾ ಶಿಕ್ಷಕರುಗಳಿಗೂ ಸಹ ಆಯಾ ಆಡಳಿತ ಮಂಡಳಿ ಯಿಂದ ತರಬೇತಿಗಳನ್ನು ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡುವುದು, ಸರ್ಕಾರಿ ಶಾಲೆಗಳ ಎಸ್‌ಡಿಎಂ ಸಮಿತಿಗಳ ಕಾರ್ಯನಿರ್ವಹಣೆ ಬಗ್ಗೆ ಕಾಲಕಾಲಕ್ಕೆ ಪರಿಶೀಲನೆ ನಡೆಸುವುದು, ಖಾಸಗಿ ಶಾಲೆಗಳಲ್ಲಿ ಪೋಷಕ-ಶಿಕ್ಷಕ ಸಮಿತಿಯ ಸಭೆಯು ನಿಯಮಿತವಾಗಿ ನಡೆಯುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಯನ್ನು ಪಾಲಿಸಿರುವ ಬಗ್ಗೆ ನಿಗದಿತ ನಮೂನೆಯಲ್ಲಿ ಮಾಹಿತಿ ಪಡೆದು ಖಾತ್ರಿ ಪಡಿಸಿಕೊಂಡು ವರದಿಯನ್ನು ಸಲ್ಲಿಸಬೇಕು ಎಂದು ಲೋಕಾಯುಕ್ತರು ಸೂಚಿಸಿದ್ದಾರೆ.

ವರದಿಯಲ್ಲಿ ಏನಿರಬೇಕು?
•ಖಾಸಗಿ ಶಾಲೆಗಳಲ್ಲಿ ಮಕ್ಕಳ ಶಿಕ್ಷಣ ನೀತಿ-2016ರ ಅನ್ವಯ ಸುರಕ್ಷತಾ ಕ್ರಮಗಳ ಅನುಷ್ಠಾನವಾಗಿದೆಯೇ?
•ಮಕ್ಕಳ ಸುರಕ್ಷಾ ಸಮಿತಿ ರಚನೆಯಾಗಿಯೇ?
•ಮಕ್ಕಳ ಭದ್ರತೆ ಕುರಿತಂತೆ ಶಾಲೆಗಳು ಕೈಗೊಂಡಿರುವ ಕ್ರಮಗಳೇನು?
•ಶಾಲಾ ಸಿಬ್ಬಂದಿ ಹಿನ್ನೆಲೆ, ಶಾಲಾ ವಾಹನಗಳ ಸುರಕ್ಷತೆ ಸೇರಿ ಪ್ರಮುಖ ಮಾಹಿತಿ ಸಂಗ್ರಹ

ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.