ಲೋಕಾಯುಕ್ತರು ಆಸ್ಪತ್ರೆಯಿಂದ ಬಿಡುಗಡೆ
Team Udayavani, Mar 15, 2018, 6:10 AM IST
ಬೆಂಗಳೂರು : ಚಾಕುವಿನಿಂದ ಇರಿತಕ್ಕೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿಯವರು ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಬುಧವಾರ ಬಿಡುಗಡೆಯಾದರು.
ಮಲ್ಯ ಆಸ್ಪತ್ರೆಯಿಂದ ಬಿಡುಗಡೆಯಗುವ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ಚಿಕಿತ್ಸೆ ಪಡೆಯುವ ವೇಳೆ ಆಸ್ಪತ್ರೆಯಲ್ಲಿ ಪ್ರತಿಯೊಬ್ಬರೂ ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ, ಅವರೆಲ್ಲರಿಗೂ ಕೃತಜ್ಞತೆ ತಿಳಿಸಲು ಬಯಸುತ್ತೇನೆ . ನನ್ನ ಆರೋಗ್ಯದ ಬಗ್ಗೆ ಪ್ರಾರ್ಥನೆ ಮಾಡಿದವರೆಲ್ಲರಿಗೂ ಧನ್ಯವಾದಗಳನ್ನು ಹೇಳುತ್ತೇನೆಂದು ವಿಶ್ವನಾಥ ಶೆಟ್ಟರು ತಿಳಿಸಿದರು.
ಮಾ.3 ರಂದು ಲೋಕಾಯುಕ್ತ ಕಚೇರಿಯಲ್ಲಿ ಆರೋಪಿ ತೇಜರಾಜ್ ಶರ್ಮಾ, ನ್ಯಾಯಮೂರ್ತಿ ವಿಶ್ವನಾಥ ಶೆಟ್ಟರ ಚೇಂಬರ್‌ಗೆ ತೆರಳಿ ಚಾಕುವಿನಿಂದ ಇರಿದು ತೀವ್ರವಾಗಿ ಗಾಯಗೊಳಿಸಿದ್ದನು. ತಕ್ಷಣವೇ ಲೋಕಾಯುಕ್ತರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತು. 12 ದಿನಗಳ ಕಾಲ ಚಿಕಿತ್ಸೆ ಪಡೆದು ವಿಶ್ವನಾಥ ಶೆಟ್ಟರು ಮನೆಗೆ ಮರಳಿದ್ದಾರೆ.ಕೈಗೆ ಬ್ಯಾಂಡೇಜ್ ಹಾಕಲಾಗಿದ್ದು , ಹೊಲಿಗೆಯನ್ನು ಬಿಚ್ಚಲಾಗಿದೆ. ಮನೆಯಲ್ಲಿ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದು 15 ದಿನಗಳಲ್ಲಿ ಚಾಕುವಿನ ಇರಿತದಿಂದ ಆಗಿರುವ ಗಾಯ ಸಂಪೂರ್ಣವಾಗಿ ಮಾಯಲಿದೆ ಎಂದು ನ್ಯಾ.ವಿಶ್ವನಾಥ ಶೆಟ್ಟಿಯವರ ಕುಟುಂದವರು ” ಉದಯವಾಣಿಗೆ ‘ ತಿಳಿಸಿದ್ದಾರೆ.
ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಂದರ್ಭದಲ್ಲಿ ಲೋಕಾಯುಕ್ತರು ಚಾಕು ಇರಿತದ ಘಟನೆ ಬಗ್ಗೆ ಮಾತನಾಡಲು ನಿರಾಕರಿಸಿದರು. ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ ಪಾಟೀಲ್ ಆಸ್ಪತ್ರೆಯಲ್ಲಿ ಲೋಕಾಯುಕ್ತರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಹಲವು ಸ್ನೇಹಿತರು, ನ್ಯಾಯಾಧೀಶರು, ಆಪ್ತರು ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
CIDಗೆ ಹೆಬ್ಬಾಳ್ಕರ್ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?
Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.