Lokayukta: 62 ಅಬಕಾರಿ ಕಚೇರಿಗಳ ಮೇಲೆ ಲೋಕಾ ದಾಳಿ
Team Udayavani, Sep 25, 2024, 11:23 AM IST
ಬೆಂಗಳೂರು: ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್, ಉಪಲೋಕಾಯುಕ್ತ ಬಿ.ವೀರಪ್ಪ ಬೆಂಗಳೂರು ನಗರ ಅಬಕಾರಿ ಜಿಲ್ಲಾ ವ್ಯಾಪ್ತಿಯ ಯಶವಂತಪುರ ಹಾಗೂ ಬ್ಯಾಟರಾಯನಪುರ ಅಬಕಾರಿ ಕಚೇರಿಗಳಿಗೆ ಖುದ್ದಾಗಿ ಭೇಟಿ ನೀಡಿ ತಪಾಸಣೆ ನಡೆಸಿದಾಗ ಅನಧಿಕೃತ ಗಾಂಜಾ, ಅನೇಕ ಮದ್ಯದ ಬಾಟಲುಗಳು, 2 ಲಕ್ಷ ರೂ. ಮೌಲ್ಯದ ನೋಟುಗಳು ಪತ್ತೆಯಾಗಿವೆ.
ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಅಬಕಾರಿ ಜಿಲ್ಲಾ ವ್ಯಾಪ್ತಿಯ 62 ಅಬಕಾರಿ ಕಚೇರಿಗಳ ಮೇಲೆ ಏಕಕಾಲದಲ್ಲಿ ಮಂಗಳವಾರ ಲೋಕಾಯುಕ್ತ ಸಿಬ್ಬಂದಿ ದಾಳಿ ನಡೆಸಿ ಹಲವು ಲೋಪ ಪತ್ತೆಹಚ್ಚಿದ್ದಾರೆ. ಇನ್ನು ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಹಾಗೂ ಉಪಲೋಕಾಯುಕ್ತ ಬಿ.ವೀರಪ್ಪ ಖುದ್ದು ಯಶವಂತಪುರ ಹಾಗೂ ಮೈಸೂರು ರಸ್ತೆಯ ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಜೊತೆ ಪರಿಶೀಲಿಸಿದಾಗ ಯಾವುದೇ ಸೀಲ್ ಹಾಕಿರದ ಸುಮಾರು ಅರ್ಧ ಕೆಜಿಯಷ್ಟು ಅನಧಿಕೃತ ಗಾಂಜಾ, ಮದ್ಯದ ಬಾಟಲಿಗಳು ಹಾಗೂ ದಾಖಲೆ ಇಲ್ಲದ 2 ಲಕ್ಷ ರೂ. ಕಂಡು ಒಂದು ಕ್ಷಣ ಲೋಕಾ ಸಿಬ್ಬಂದಿಯೇ ದಂಗಾದರು. ಸೂಕ್ತ ಸ್ಪಷ್ಟನೆ ನೀಡದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಲೋಕಾಯುಕ್ತ ಮುಂದಾಗಿದೆ. ದಾಳಿ ನಡೆದ 62 ಕಚೇರಿಗಳ ಪೈಕಿ ಬಹುತೇಕ ಕಡೆ ಹಲವಾರು ಲೋಪಗಳು ಪತ್ತೆಯಾಗಿವೆ.
ಅನಧಿಕೃತ ಗಾಂಜಾ: ಎನ್‌ಡಿಪಿಎಸ್ ಪ್ರಕರಣದಲ್ಲಿ ಅಬಕಾರಿ ಇಲಾಖೆಯವರಿಗೆ ಗಾಂಜಾ ಜಪ್ತಿ ಮಾಡಲು ಅವಕಾಶವಿದೆ. ಜಪ್ತಿ ಮಾಡಿದ ಗಾಂಜಾಗೆ ಸೀಲ್‌ಗಳು, ಕ್ರೈಂ ನಂಬರ್, ಮಹಜರು ಕವರ್‌ಗಳೆಲ್ಲ ಇರಬೇಕು. ಕೋರ್ಟ್‌ಗೆ ಹಾಜರುಪಡಿಸಿರುವ ದಾಖಲೆಗಳಿರಬೇಕು ಎಂಬಿತ್ಯಾದಿ ನಿಯಮಗಳಿವೆ. ಆದರೆ, ಇಲ್ಲಿ ಜಪ್ತಿ ಮಾಡಿರುವ ಡ್ರಗ್ಸ್‌ಗಳನ್ನು ನಿಯಮ ಉಲ್ಲಂ ಸಿ ಪ್ರತ್ಯೇ ಕವಾಗಿಟ್ಟಿದ್ದರು. ಇನ್ನು ಯಶವಂತಪುರ ಕಚೇರಿಯಲ್ಲಿ ಸುಮಾರು 15 ಅನಧಿಕೃತ ಮದ್ಯದ ಬಾಟಲಿಗಳು ಸಿಕ್ಕಿವೆ.
ಅಬಕಾರಿ ಅಕ್ರಮಗಳ ವಿರುದ್ಧ 132 ದೂರು: ದಾಳಿ ನಡೆಸಿದ ಬಳಿಕ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ ಮಾಧ್ಯಮದ ಜೊತೆಗೆ ಮಾತನಾಡಿ, ಈ ಅಬಕಾರಿ ಇಲಾಖೆಗಳಲ್ಲಿ ದುಡ್ಡು ಕೊಡದೇ ನಮ್ಮ ಅರ್ಜಿ ಮುಂದೆ ಸಾಗುವುದಿಲ್ಲ. ಸಾಕಷ್ಟು ಭ್ರಷ್ಟಾಚಾರ ಇದೆ. ಬಹಳ ಸತಾಯಿಸುತ್ತಿದ್ದಾರೆ ಎಂಬ ಬಗ್ಗೆ ಒಟ್ಟಾರೆ 132ಕ್ಕೂ ಅಧಿಕ ದೂರುಗಳು ಲೋಕಾಯುಕ್ತಕ್ಕೆ ಬಂದಿದ್ದವು. ದಾಳಿ ವೇಳೆ ಪತ್ತೆಯಾಗಿರುವ ಕೆಲ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದೇವೆ. ಸಾರ್ವ ಜನಿಕರ ಅರ್ಜಿಗಳು ಏಕೆ ವಿಲೇವಾರಿ ಆಗುತ್ತಿಲ್ಲ ಎಂಬುದರ ಬಗ್ಗೆ ಪ್ರಶ್ನಿಸಿದರೆ ಇನ್‌ಸ್ಪೆಕ್ಟರ್‌ಗಳನ್ನು ಕಳುಹಿಸಲಾಗಿದೆ. ಅಲ್ಲಿ ಕೆಲವೊಂದು ಪ್ರಕ್ರಿಯೆಗಳು ನಡೆದು ವರದಿ ಬಂದ ಬಳಿಕ ಪರವಾನಗಿ ನೀಡುವ ಸಂಬಂಧ ಅರ್ಜಿ ವಿಲೇವಾರಿ ಮಾಡಲಾಗುವುದು ಎನ್ನುತ್ತಿದ್ದಾರೆ. ಕೆಲವೊಮ್ಮೆ ಆನ್‌ಲೈನ್ ಮಾಡಬಹುದು ಎನ್ನುತ್ತಾರೆ, ಇನ್ನು ಕೆಲವು ಬಾರಿ ಆಫ್ಲೈನ್‌ನಲ್ಲೂ ಕೊಡಬಹುದು ಎನ್ನುತ್ತಿದ್ದಾರೆ. ಇದೀಗ ದಾಳಿ ವೇಳೆ ಜಪ್ತಿ ಮಾಡಿರುವ ಕಡತ ಪರಿಶೀಲಿಸಿ ತಪ್ಪಿತಸ್ಥ ಅಧಿಕಾರಿಗಳಿಂದ ಲೋಪಗಳ ಕುರಿತು ಸ್ಪಷ್ಟನೆ ಕೇಳಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಬಕಾರಿ ಇಲಾಖೆಯಲ್ಲಿ ಗಾಂಜಾ ಪತ್ತೆ: ನಾವು ದಾಳಿ ನಡೆಸಿದ ಯಶವಂತಪುರ ಹಾಗೂ ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ದಾಖಲೆಯಿಲ್ಲದ ಗಾಂಜಾ, ಮದ್ಯದ ಬಾಟಲಿಗಳು ಪತ್ತೆಯಾಗಿದೆ. ಗಾಂಜಾ ಇಲ್ಲಿಗೆ ಏಕೆ ಬಂದಿದೆ ಎಂಬುದರ ಬಗ್ಗೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಉತ್ತರಿಸುತ್ತಿಲ್ಲ. ಇದರ ಜೊತೆಗೆ ಹತ್ತಾರು ಲಿಕ್ಕರ್ ಬಾಟಲಿಗಳು ಸಿಕ್ಕಿರುವುದರ ಬಗ್ಗೆ ಪ್ರಶ್ನಿಸಿದರೆ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಮಾಧ್ಯಮದ ಜೊತೆಗೆ ಮಾತನಾಡುವ ವೇಳೆ ಮಾಹಿತಿ ನೀಡಿದ್ದಾರೆ.
ಗೌಪ್ಯವಾಗಿ ಮಾಹಿತಿ ಸಂಗ್ರಹಿಸಿ ದಾಳಿ!:
ಬೆಂಗಳೂರು ನಗರ ಅಬಕಾರಿ ಜಿಲ್ಲಾ ವ್ಯಾಪ್ತಿಯಲ್ಲಿನ 62 ಅಬಕಾರಿ ಕಚೇರಿಗಳಲ್ಲಿ ಸಿಎಲ್-2, ಸಿಎಲ್-7, ಸಿಎಲ್-9 ಪರವಾನಗಿ ವಿಭಾಗ ವಿತರಣೆ, ನವೀಕರಿಸುವಿಕೆ, ಸ್ಥಳಾಂತರಿಸುವಿಕೆ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ಇತರೆ ಸಾರ್ವಜನಿಕ ಕೆಲಸ ಕಾರ್ಯಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅವ್ಯವಹಾರ ಹಾಗೂ ಅಕ್ರಮಗಳ ಬಗ್ಗೆ ಅಬಕಾರಿ ಪರವಾನಗಿದಾರರು ಹಾಗೂ ಸಾರ್ವಜನಿಕರು ದೂರು ನೀಡಿದ್ದರು. ಹೀಗಾಗಿ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳ ಮುಖಾಂತರ ಗೌಪ್ಯ ತನಿಖೆ ನಡೆಸಿ ಮಾಹಿತಿ ಸಂಗ್ರಹಿಸಿ ಅಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಖಾತ್ರಿ ಪಡಿಸಿಕೊಂಡಿದ್ದರು. ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಿಕೊಂಡು ಲೋಕಾಯುಕ್ತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನ್ಯಾಯಾಂಗ ಹಾಗೂ ಪೊಲೀಸ್ ಅಧಿಕಾರಿಗಳ ತಂಡವನ್ನು ಸನ್ನದ್ಧಗೊಳಿಸಿ ಬೆಂಗಳೂರು ನಗರ ಅಬಕಾರಿ ಜಿಲ್ಲಾ ವ್ಯಾಪ್ತಿಯಲ್ಲಿನ 62 ಅಬಕಾರಿ ಕಚೇರಿಗಳಲ್ಲಿ ಏಕಕಾಲದಲ್ಲಿ ತಪಾಸಣೆ ಮಾಡಿ ಅಕ್ರಮಗಳನ್ನು ಪತ್ತೆ ಹಚ್ಚುವಂತೆ ಆದೇಶಿಸಿದ್ದರು. ಲೋಕಾಯುಕ್ತ ಸಂಸ್ಥೆಯಲ್ಲಿ ರಾಜ್ಯಾದ್ಯಂತ ಅಬಕಾರಿ ಇಲಾಖಾ ಕಚೇರಿಗಳಲ್ಲಿನ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ 132 ಪ್ರಕರಣ ಗಳು ವಿವಿಧ ಹಂತದ ತನಿಖೆಯಲ್ಲಿ ಮುಂದುವರಿ ದಿರುವುದು ಅಬಕಾರಿ ಇಲಾಖಾ ಕಚೇರಿಗಳಲ್ಲಿ ನಡೆಯುತ್ತಿರುವ ಅವ್ಯವಹಾರವನ್ನು ಪುಷ್ಟಿಕರಿಸುತ್ತವೆ.
ಅಕ್ರಮಕ್ಕಾಗಿ ಖಾಸಗಿ ವ್ಯಕ್ತಿಗಳ ನೇಮಕ!:
ಕೆಲವು ಕಡೆ ಅಬಕಾರಿ ಇನ್‌ಸ್ಪೆಕ್ಟರ್‌ಗಳೇ ಖಾಸಗಿ ವ್ಯಕ್ತಿಗಳನ್ನಿಟ್ಟುಕೊಂಡು ಅವ್ಯವಹಾರ ನಡೆಸುತ್ತಿದ್ದ ಸಂಗತಿ ಬಯಲಾಗಿದೆ. ಅಬಕಾರಿ ಇನ್‌ಸ್ಪೆಕ್ಟರ್‌ಗಳು ಖಾಸಗಿ ವ್ಯಕ್ತಿಗಳಿಗೆ ತಿಂಗಳಿಗೆ 15 ರಿಂದ 20 ಸಾವಿರ ರೂ. ವೇತನ ನೀಡಿ ಕೆಲಸ ಮಾಡಿಕೊಳ್ಳಲು ಇಟ್ಟು ಕೊಂಡಿರುವುದು ಗೊತ್ತಾಗಿದೆ. ಬ್ಯಾಟರಾಯನಪುರ, ಕೋರಮಂಗಲ ಕಚೇರಿಗಳಲ್ಲಿ ಹಲವು ಅಕ್ರಮ ಪತ್ತೆಯಾಗಿದೆ. ಕೋರಮಂಗಲ ಕಚೇರಿಯಲ್ಲಿ ಲೋಕಾಯುಕ್ತ ಸಿಬ್ಬಂದಿ ಎಂಟ್ರಿಯಾಗುತ್ತಿದ್ದಂತೆ ಅಟೆಂಡೆನ್ಸ್, ಕ್ಯಾಶ್ ರಿಜಿಸ್ಟ್ರರ್ ಪುಸ್ತಕವನ್ನೇ ತೆಗೆದು ಕೊಂಡು ಓಡಿ ಹೋಗಿರುವುದು ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.