Lokayukta: 13 ಆರ್‌ಟಿಒ ಕಚೇರಿ ಮೇಲೆ ಲೋಕಾ ದಾಳಿ
Team Udayavani, Sep 14, 2023, 12:44 PM IST
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿರುವ ಪ್ರಮುಖ 13 ಪ್ರಾದೇಶಿಕ ಸಾರಿಗೆ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಏಕಾಏಕಿ ದಿಢೀರ್ ದಾಳಿ ನಡೆಸಿ ಭ್ರಷ್ಟರ ಅಕ್ರಮ ಪತ್ತೆ ಹಚ್ಚಿ ಬಿಸಿ ಮುಟ್ಟಿಸಿದ್ದಾರೆ.
ಬಹುತೇಕ ಆರ್‌ಟಿಒ ಕಚೇರಿಗಳಲ್ಲಿ ಏಜೆಂಟ್‌ಗಳ ಹಾವಳಿ ಕಂಡು ಬಂದಿದೆ. ಬೆಂಗಳೂರಿನ ಯಲಹಂಕ, ಇಂದಿರಾನಗರ, ಜಯನಗರ, ಕೋರಮಂಗಲ, ಜ್ಞಾನಭಾರತಿ, ರಾಜಾಜಿನಗರ, ಯಶವಂತಪುರ ಸೇರಿದಂತೆ ಒಟ್ಟು 13 ಪ್ರಾದೇಶಿಕ ಸಾರಿಗೆ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಕಚೇರಿಯಲ್ಲಿದ್ದ ದಾಖಲೆ ಪರಿಶೀಲಿಸಿದಾಗ ಕೆಲವೊಂದು ಅರ್ಜಿ, ಕಡತಗಳನ್ನು ಹಲವು ತಿಂಗಳಿಂದ ವಿಲೇವಾರಿ ಮಾಡದೇ ಬಾಕಿ ಉಳಿಸಿಕೊಂಡಿರುವುದು, ಏಜೆಂಟ್‌ಗಳ ಮೂಲಕ ಲಂಚಕ್ಕೆ ಬೇಡಿಕೆಯಿಡಲು ಅಧಿಕಾರಿಗಳು ಪರೋಕ್ಷವಾಗಿ ಪ್ರಯತ್ನಿಸಿರುವುದು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ಕೆಲ ಏಜೆಂಟ್‌ಗಳ ಮೊಬೈಲ್ ಜಪ್ತಿ ಮಾಡಿ ಪರಿಶೀಲಿಸಲಾಗುತ್ತಿದೆ. ದಾಳಿ ವೇಳೆ ಪತ್ತೆಯಾಗಿರುವ ಅಕ್ರಮಗಳ ಕುರಿತು ಆರ್‌ಟಿಒ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಗೊಂದಲದ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಕೆಲ ಆರ್‌ಟಿಒ ಕಚೇರಿ ಅಧಿಕಾರಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ಲೋಕಾಯುಕ್ತ ಸಂಸ್ಥೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಖುದ್ದು ಲೋಕಾಯುಕ್ತರಿಂದಲೇ ಪರಿಶೀಲನೆ: ಇನ್ನು ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ ಅವರು ಖುದ್ದು ಜಯನಗರ ಹಾಗೂ ರಾಜಾಜಿನಗರದ ಪ್ರಾದೇಶಿಕ ಸಾರಿಗೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದು ವಿಶೇಷವಾಗಿತ್ತು. ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಯಲಹಂಕ ಹಾಗೂ ಯಶವಂತಪುರದ ಆರ್‌ಟಿಒ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರ್‌ಟಿಒ ಕಚೇರಿಗಳಿಗೆ ದಾಳಿ ಏಕೆ ?: ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅವ್ಯವಹಾರ ಹಾಗೂ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಗಿಂದಾಗ್ಗೆ ಲೋಕಾಯುಕ್ತ ಸಂಸ್ಥೆಯ ಗಮನ ಸೆಳೆಯುತ್ತಿದ್ದರು. ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅವರು ಲೋಕಾ ಅಧಿಕಾರಿಗಳ ಮುಖಾಂತರ ಗೌಪ್ಯ ತನಿಖೆ ನಡೆಸಿ ಮಾಹಿತಿ ಸಂಗ್ರಹಿಸಿ, ಅಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಖಾತ್ರಿ ಪಡಿಸಿಕೊಂಡಿದ್ದರು.
ಬಳಿಕ ಲೋಕಾಯುಕ್ತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನ್ಯಾಯಾಂಗ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ರಚಿಸಿ ಬೆಂಗಳೂರಿನಾದ್ಯಂತ ಇರುವ ಎಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಏಕಕಾಲದಲ್ಲಿ ದಾಳಿ ಮಾಡಿ ಅಕ್ರಮ ಪತ್ತೆ ಹಚ್ಚುವಂತೆ ಆದೇಶಿಸಿದ್ದರು.
ಒಂದು ಕಚೇರಿಗೆ 10 ಅಧಿಕಾರಿಗಳ ತಂಡ: ದಾಳಿ ನಡೆಸಿದ ಬಳಿಕ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ “ಉದಯವಾಣಿ’ ಜತೆ ಮಾತನಾಡಿ, ಮೊದಲಿಂದಲೂ ಆರ್‌ಟಿಒ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯುವ ಬಗ್ಗೆ ಆರೋಪಗಳು ಕೇಳಿ ಬಂದಿತ್ತು. ಬೆಂಗಳೂರಿನಲ್ಲಿ ಏಜೆಂಟ್‌ಗಳ ಹಾವಳಿ ಹೆಚ್ಚಾಗಿದೆ, ಅರ್ಜಿ ಸಲ್ಲಿಸಿರುವುದು ಶೀಘ್ರದಲ್ಲಿ ವಿಲೇವಾರಿಯಾಗುತ್ತಿಲ್ಲ ಎಂಬುದು ಸೇರಿದಂತೆ ಸಾರ್ವಜನಿಕರಿಂದ ಆರ್‌ಟಿಒ ಕಚೇರಿ ಸಿಬ್ಬಂದಿ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಎಸ್‌ಪಿ, ಡಿವೈಎಸ್‌ಪಿ, ಜಿಲ್ಲಾ ನ್ಯಾಯಾಧೀಶರು, ಇನ್‌ಸ್ಪೆಕ್ಟರ್‌ಗಳು ಸೇರಿದಂತೆ ಒಂದು ಆರ್‌ಟಿಒ ಕಚೇರಿ ಪರಿಶೀಲನೆಗೆ 10 ಅಧಿಕಾರಿಗಳ ತಂಡ ರಚಿಸಲಾಗಿತ್ತು. ಆರ್‌ಟಿಒ ಕಚೇರಿಯ ಟ್ರಾನ್ಸ್‌ಪೋರ್ಟ್ ವಿಭಾಗ, ನಾನ್ ಟ್ರಾನ್ಸ್‌ಪೋರ್ಟ್ ವಿಭಾಗ, ಪರವಾನಗಿ ವಿಭಾಗ, ಪರ್ಮಿಟ್ಸ್ ವಿಭಾಗ ಸೇರಿದಂತೆ ಎಲ್ಲ ವಿಭಾಗಗಳಲ್ಲೂ ಪರಿಶೀಲನೆ ನಡೆಸಲಾಗಿದೆ.
ಯಾವೆಲ್ಲಾ ಅರ್ಜಿ ವಿಲೇವಾರಿಗೆ ಬಾಕಿ ಇದೆ. ಏನೆಲ್ಲಾ ಗೋಲ್ ಮಾಲ್ ನಡೆಯುತ್ತಿದೆ? ಎಂಬಿತ್ಯಾದ ಆರೋಪಗಳ ಬಗ್ಗೆ ಸಂಪೂರ್ಣ ವರದಿಬೇಕು ಎಂದು ಹೇಳಿರುವುದಕ್ಕೆ ದಿಢೀರ್ ದಾಳಿ ನಡೆಸಿ ಪರಿಶೀಲಿಸಲಾಗಿದೆ ಎಂದರು.
ಬೆಂ. ಗ್ರಾಮಾಂತರದಲ್ಲೂ ದಾಳಿ:
ದೇವನಹಳ್ಳಿ: ಪಟ್ಟಣದ ರಾಣಿ ಸರ್ಕಲ್‌ನಲ್ಲಿರುವ ಆರ್‌ಟಿಒ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಅಧಿಕಾರಿ ಕಚೇರಿ ಮೇಲೆ ದಾಳಿ ಮಾಡಿ ವಿವಿಧ ಪತ್ರಗಳನ್ನು ಪರಿಶೀಲಿಸಿದರು. ಲೋಕಾಯುಕ್ತ ಅಧಿಕಾರಿ ಪವನ್ ನೆಜ್ಯೂರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ಆರ್‌ಟಿಒ ಕಚೇರಿಗಳಲ್ಲಿ ಭ್ರಷ್ಟಾಚಾರದ ಮತ್ತು ಅವರ ನಡೆಯುತ್ತಿರುವ ಕುರಿತು ಸಾರ್ವಜನಿಕ ದೂರನ್ನು ಆಧರಿಸಿ ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿ ಲೋಕಾಯುಕ್ತರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.