ಮಗನ ದೃಶ್ಯ ನೋಡಿ ಖುಷಿಗೊಂಡ ಎಚ್ಡಿಕೆ
Team Udayavani, Jan 16, 2019, 3:00 AM IST
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಸ್ವಲ್ಪ ರಿಲ್ಯಾಕ್ಸ್ ಮೂಡ್‌ನಲ್ಲಿದ್ದರು. ಒಂದು ಕಡೆ ರಾಜಕೀಯದ ಕ್ಷಣ ಕ್ಷಣದ ಬೆಳವಣಿಗೆ ಅಚ್ಚರಿ ಮೂಡಿಸುತ್ತಿದ್ದರೆ, ಇನ್ನೊಂದು ಕಡೆ ಅವರು ಯಾವುದೇ ಸಮಸ್ಯೆ ಇಲ್ಲ ಎಂಬ ವಿಶ್ವಾಸದಿಂದಲೇ ಸಂಜೆ ವೇಳೆಗೆ ಶಾಸಕ ಮುನಿರತ್ನ ಅವರ ಮನೆಗೆ ತೆರಳಿ ‘ಕುರುಕ್ಷೇತ್ರ’ ಚಿತ್ರದ ಟೀಸರ್ ವೀಕ್ಷಿಸಿದರು. ಹೌದು, ಮುನಿರತ್ನ ನಿರ್ಮಾಣದ ‘ಕುರುಕ್ಷೇತ್ರ’ ಚಿತ್ರದಲ್ಲಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖೀಲ್ ಕುಮಾರ್ ಅಭಿಮನ್ಯು ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅವರ ಭಾಗದ ಕೆಲ ದೃಶ್ಯಗಳನ್ನು ಮುಖ್ಯಮಂತ್ರಿ ಅವರಿಗೆ ತೋರಿಸಬೇಕೆಂದು ಮುನಿರತ್ನ ನಿರ್ಧರಿಸಿದ್ದರು. ಬೆಳಗ್ಗೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಹೋದ ಸಂದರ್ಭದಲ್ಲಿ ಈ ವಿಷಯವನ್ನು ಮನದಟ್ಟು ಮಾಡಿಕೊಂಡ ಬಳಿಕ ಮುಖ್ಯಮಂತ್ರಿ, ಮುನಿರತ್ನ ಮನೆಗೆ ತೆರಳಿ ‘ಕುರುಕ್ಷೇತ್ರ’ ಚಿತ್ರದ ಕೆಲ ದೃಶ್ಯಗಳನ್ನು ವೀಕ್ಷಿಸಿದ್ದಾರೆ. ‘ಕುರುಕ್ಷೇತ್ರ’ ಚಿತ್ರಕ್ಕೆ 3ಡಿ ಸ್ಪರ್ಶ ನೀಡಲಾಗಿದ್ದು, ಮುನಿರತ್ನ ಅವರು ಮುಖ್ಯಮಂತ್ರಿ ಯವರಿಗೆ ಅದನ್ನು ತೋರಿಸಿದ ಬಳಿಕ, ಮುಖ್ಯಮಂತ್ರಿಗಳು ‘ಕುರುಕ್ಷೇತ್ರ’ ಚಿತ್ರವನ್ನು ಕೊಂಡಾಡಿದ್ದಾರೆ. ಚಿತ್ರದ ತಾಂತ್ರಿಕ ವಿಷಯಗಳ ಬಗ್ಗೆ ಮೆಚ್ಚುಗೆ ಪಟ್ಟಿದ್ದಾರೆ. ಜತೆಗೆ ಕನ್ನಡದಲ್ಲಿ ಪೌರಾಣಿಕ ಚಿತ್ರಗಳು ಹೆಚ್ಚೆಚ್ಚು ಬರಬೇಕು ಎಂದಿದ್ದಾರೆ. ರಾಜಕೀಯ ವಿಷಯದಲ್ಲಿ ಹಲವು ಗೊಂದಲಗಳಿದ್ದರೂ, ಮುಖ್ಯಮಂತ್ರಿಗಳು ಮಾತ್ರ ತುಂಬಾ ಕೂಲ್ ಆಗಿ, ಅವರ ಪುತ್ರ ಅಭಿನಯಿಸಿದ ‘ಕುರುಕ್ಷೇತ್ರ’ ಚಿತ್ರದ ಕೆಲ ತುಣುಕು ನೋಡಿ ಖುಷಿಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.