ರಾಜ್ಯಾದ್ಯಂತ ನಾಳೆಯಿಂದ ಲಾರಿ ಮುಷ್ಕರ
Team Udayavani, Jul 19, 2018, 6:35 AM IST
ಬೆಂಗಳೂರು: ಟೋಲ್ ಶುಲ್ಕ ವ್ಯವಸ್ಥೆ ರದ್ದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಲ್ ಇಂಡಿಯಾ ಮೋಟಾರ್ ಟ್ರಾನ್ ಪೋರ್ಟ್ ಜು.20ರಂದು ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟ್ಸ್ ಸಂಘಗಳ ಒಕ್ಕೂಟ ಬೆಂಬಲ ವ್ಯಕ್ತಪಡಿಸಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಮಾತನಾಡಿ, ಜು.20ರಿಂದ ನಡೆಯಲಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತರಕಾರಿ ಸಾಗಣೆ ಲಾರಿಗಳ ಮಾಲೀಕರು ಸೇರಿ ಎಲ್ಲ ಸರಕು ಸಾಗಣೆ ವಾಹನಗಳ ಮಾಲೀಕರು-ಚಾಲಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಔಷಧ ಮತ್ತು ಹಾಲು ಸಾಗಣೆ ವಾಹನಗಳನ್ನು ಹೊರತುಪಡಿಸಿ ದೇಶದಾದ್ಯಂತ 90 ಲಕ್ಷಕ್ಕೂ ಅಧಿಕ ಮತ್ತು ರಾಜ್ಯಾದ್ಯಂತ 6 ಲಕ್ಷಕ್ಕೂ ಅಧಿಕ ಲಾರಿಗಳು ರಸ್ತೆಗಿಳಿಯುವುದಿಲ್ಲ ಎಂದರು.
ಕೇಂದ್ರ ಸರ್ಕಾರವು ಟೋಲ್ ಮುಕ್ತ ಭಾರತವನ್ನಾಗಿ ಮಾಡಬೇಕು. ದೇಶದಲ್ಲಿ ಸರಿ ಸುಮಾರು 412 ಟೋಲ್‌ಗಳಿದ್ದು,ವಾರ್ಷಿಕವಾಗಿ 1.2 ಲಕ್ಷ ಕೋಟಿ ರೂ.ಪಾವತಿಸಬೇಕಾಗಿದೆ.
ಟೋಲ್ ಪಾವತಿಸಲು ನಾವು ತಯಾರಿದ್ದೇವೆ. ಆದರೆ, ಹಣ ಪಾವತಿಯ ವಿಧಾನ ಬದಲಾಗಬೇಕು. ದೇಶದಲ್ಲಿ ಒಂದು ಕೋಟಿಯಷ್ಟು ವಾಣಿಜ್ಯ ವಾಹನಗಳು ಟೋಲ್‌ಗಳ ಮೂಲಕ ಸಂಚರಿಸುತ್ತವೆ.
ಹೀಗಾಗಿ, ವರ್ಷಕ್ಕೆ 50 ಸಾವಿರದಷ್ಟು ಹಣವನ್ನು ವರ್ಷದ ಮೊದಲೇ ನಾವು ಪಾವತಿ ಮಾಡಲು ಸಿದಟಛಿ. ಎಲ್ಲ ಟೋಲ್‌ಗಳಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿದರು.
ಟೋಲ್ ಪ್ಲಾಜಾಗಳಲ್ಲಿ ಪ್ರತಿ ವಾಹನ 15 ರಿಂದ 20 ನಿಮಿಷಗಳ ಕಾಲ ನಿಂತು ಹೋಗುವುದರಿಂದ ಗಾಳಿಯಲ್ಲಿ ವ್ಯರ್ಥವಾಗುವ ಡೀಸೆಲ್ ಹಾಗೂ ಸಮಯ, ವಾಹನದ ರಿಪೇರಿ ಮತ್ತು ಟೋಲ್‌ಗಳ ನಿರ್ವಹಣಾ ವೆಚ್ಚಗಳಿಂದ 84 ಸಾವಿರ ಕೋಟಿ ರೂ.ಗಳ ನಷ್ಟವಾಗುತ್ತಿದೆ ಎಂದು ಐಐಎಂ ಸಂಸ್ಥೆ ವರದಿ ನೀಡಿದೆ. ಇದನ್ನೆಲ್ಲಾ ಪರಿಗಣಿಸಿ ಕೇಂದ್ರ ಸರ್ಕಾರ ಟೋಲ್ ಮುಕ್ತ ಭಾರತ ಮಾಡಬೇಕು ಎಂದು ಆಗ್ರಹಿಸಿದರು.
ಅಲ್ಲದೆ, ಡೀಸೆಲ್‌ನ್ನು ಜಿಎಸ್‌ಟಿಯಡಿ ತರಬೇಕು. ಮೂರನೇ ವ್ಯಕ್ತಿ ವಿಮಾ ಪಾಲಿಸಿ ದರ ಕಡಿತಗೊಳಿಸಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಟಿಡಿಎಸ್ ರದ್ದುಗೊಳಿಸಬೇಕು. ಪೂರ್ವ ಭಾವಿ ಆದಾಯ ಕಾಯ್ದೆ ಪರಿವರ್ತಿಸಬೇಕು. ಈ-ವೇ ಬಿಲ್ ಕುರಿತ ಸಮಸ್ಯೆ ಬಹೆಗರಿಸಬೇಕು. ಪ್ರವಾಸಿ ವಾಹನ ಹಾಗೂ ಬಸ್‌ಗಳಿಗೆ ರಾಷ್ಟ್ರೀಯ ಪರವಾನಗಿ ನೀಡಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.