5ನೇ ದಿನಕ್ಕೆ ಲಾರಿ ಮುಷ್ಕರ: ಸರಕು ಪೂರೈಕೆ ವ್ಯತ್ಯಯ
Team Udayavani, Jul 24, 2018, 7:30 AM IST
ಬೆಂಗಳೂರು: ಸರಕು ಸಾಗಣೆ ವಾಹನಗಳ ಮುಷ್ಕರ ಐದನೇ ದಿನಕ್ಕೆ ಕಾಲಿಟ್ಟಿದ್ದು ದಿನ ಕಳೆದಂತೆ ಮುಷ್ಕರ ತೀವ್ರ ಸ್ವರೂಪ ಪಡೆಯುತ್ತಿದ್ದು, ಅಗತ್ಯ ವಸ್ತು ಸೇರಿ ಸರಕು ಮತ್ತು ಸೇವೆ ಪೂರೈಕೆಯಲ್ಲಿ ಕ್ರಮೇಣ ವ್ಯತ್ಯಯವಾಗಲಾರಂಭಿಸಿದೆ.
ರಾಜಧಾನಿ ಬೆಂಗಳೂರು ಸೇರಿ ಇತರೆಡೆ ಆಹಾರ ಧಾನ್ಯ, ಬೇಳೆಕಾಳುಗಳ ಹಳೆಯ ದಾಸ್ತಾನು ಬಹುತೇಕ ಮಾರಾಟವಾಗಿದ್ದು, ಹೊಸ ದಾಸ್ತಾನು ಪೂರೈಕೆಯಾಗದಿದ್ದರೆ ಅಭಾವ ತಲೆದೋರುವ ಆತಂಕ ಮೂಡಿದೆ. ಇನ್ನೊಂದೆಡೆ ಸಣ್ಣ ಮತ್ತು ಭಾರೀ ಕೈಗಾರಿಕೆಗಳಿಗೆ ಕಚ್ಚಾ ಪದಾರ್ಥ ಪೂರೈಕೆಯಲ್ಲೂ ವ್ಯತ್ಯಯವಾಗಿದ್ದು, ಉತ್ಪಾದನೆ ಇಳಿಕೆಯಾಗುತ್ತಿರುವುದು ಉದ್ಯಮಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಸರಕು ಸಾಗಣೆಗೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆ ನಿವಾರಿಸಲು ಮುಂದಾಗಬೇಕೆಂದು ಎಫ್ಕೆಸಿಸಿಐ ಕೇಂದ್ರ ಸರ್ಕಾರವನ್ನು ಕೋರಲು ನಿರ್ಧರಿಸಿದೆ.
ಕೇಂದ್ರ ಸರ್ಕಾರದಿಂದ ಈವರೆಗೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಹೋರಾಟ ತೀವ್ರಗೊಳಿಸಲು ಅಖೀಲ ಭಾರತ ಮೋಟಾರು ಟ್ರಾನ್ಸ್ಪೊàರ್ಟ್ ಕಾಂಗ್ರೆಸ್ ನಿರ್ಧರಿಸಿದೆ. ಈ ನಡುವೆ ಸರಕು ಹೊತ್ತು ಸಾಗುವ ವಾಹನಗಳನ್ನು ಅಲ್ಲಲ್ಲಿ ತಡೆಯುವ ಕಾರ್ಯ ಆರಂಭವಾಗಿದೆ. ಪ್ರವಾಸಿ ವಾಹನ, ಮ್ಯಾಕ್ಸಿಕ್ಯಾಬ್ ಮಾಲೀಕರು ಸಹ ವಾಹನ ಸಂಚಾರ ಸ್ಥಗಿತಗೊಳಿಸಿ ಹೋರಾಟದ ತೀವ್ರತೆ ಹೆಚ್ಚಿಸಲು ಚಿಂತಿಸಿದ್ದಾರೆ. ಸೋಮವಾರದಿಂದ ಹಲವು ಸರಕುಗಳ ಪೂರೈಕೆಯಲ್ಲಿ ವ್ಯತ್ಯಾಸವಾಗಿದ್ದು, ಉದ್ಯಮಗಳು, ವ್ಯಾಪಾರ- ವಹಿವಾಟುದಾರರು ಮಾತ್ರವಲ್ಲದೇ ಸಾರ್ವಜನಿಕರಿಗೂ ಮುಷ್ಕರದ ಬಿಸಿ ತಟ್ಟಲಾರಂಭಿಸಿದಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.