ವಿಮಾನಯಾನ ಕ್ಷೇತ್ರದಲ್ಲಿ ವಿಪುಲ ಉದ್ಯೋಗ

Team Udayavani, Oct 16, 2019, 3:05 AM IST

vimanayaana

ಬೆಂಗಳೂರು: ವಿಮಾನಯಾನ ಕ್ಷೇತ್ರದಲ್ಲಿ ಇಡೀ ಜಗತ್ತಿನಲ್ಲಿಯೇ ಭಾರತ ಮೂರನೇ ಅತಿ ದೊಡ್ಡ ಮಾರುಕಟ್ಟೆ ಎಂದು ಪರಿಗಣಿಸಲ್ಪಟ್ಟಿದೆ. ಇದರಿಂದ ಸದ್ಯದಲ್ಲೇ ಸಹಸ್ರಾರು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಖ್ಯಾತ ವೈಮಾನಿಕ ತಂತ್ರಜ್ಞ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಡಾ.ಕೋಟ ಹರಿನಾರಾಯಣ್‌ ತಿಳಿಸಿದರು.

ಯಲಹಂಕದ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರಸಿದ್ಧ ವಿಜ್ಞಾನಿ ವಿಕ್ರಂ ಸಾರಾಭಾಯಿ ಅವರ ಜನ್ಮ ಶತಮಾನೋತ್ಸವ ಪ್ರಯುಕ್ತ ಆಯೋಜಿಸಿದ್ದ “ಏರೋವಿಶನ್‌-2019′ ಆರು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಕಾರ್ಯಕಮ್ಮಟ ಉದ್ಘಾಟಿಸಿ ಮಾತನಾಡಿದರು.

ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗಷ್ಟೇ ಸೀಮಿತವಾಗಿದ್ದ ವೈಮಾನಿಕ ಮಾರುಕಟ್ಟೆಯ ಅವಕಾಶಗಳು ಈಗ ಭಾರತದಲ್ಲೂ ಪ್ರಾಪ್ತವಾಗಲಿವೆ. ಇದಕ್ಕೆ ಇಂಬು ಕೊಡುವಂತೆ 19 ಆಸನಗಳ ಸಣ್ಣ ವಿಮಾನಗಳ ತಯಾರಿಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದರಿಂದ ಅತ್ಯಂತ ಕಿರಿದಾದ ರನ್‌ವೇಗಳಲ್ಲೂ ವಿಮಾನ ಲ್ಯಾಂಡ್‌ ಆಗಲಿದ್ದು, ಸಣ್ಣಪುಟ್ಟ ಪಟ್ಟಣಗಳ ನಡುವೆ ಕೂಡ ವಿಮಾನಗಳು ಸಂಚರಿಸಲಿವೆ ಎಂದರು.

ಭಾರತ ಸರ್ಕಾರದ “ಉಡಾನ್‌’ ಯೋಜನೆಯ ಅನುಷ್ಠಾನದಿಂದ ಸಣ್ಣಪುಟ್ಟ ನಗರ, ಪಟ್ಟಣಗಳಿಗೂ ವಾಯು ಸಾರಿಗೆ ಲಭ್ಯವಾಗಲಿದೆ. ಅಷ್ಟೇ ಅಲ್ಲದೆ ವಾಣಿಜ್ಯ ಹಾಗೂ ಕೈಗಾರಿಕೆಗಳ ಅಭಿವೃದ್ಧಿಗೂ ಉಡಾನ್‌ ನೆರವಾಗಲಿದೆ. ಪ್ರಸ್ತುತ ವರ್ಷದಲ್ಲಿಯೇ ನೂರಕ್ಕೂ ಹೆಚ್ಚು ಹೊಸ ವಿಮಾನ ನಿಲ್ದಾಣಗಳು ಕಾರ್ಯಾಚರಣೆಗೆ ಸಿದ್ಧವಾಗಲಿವೆ ಎಂದರು.

ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಹಿರಿಯ ವಿಜ್ಞಾನಿ, ಪದ್ಮಶ್ರೀ ಡಾ. ಪ್ರಹ್ಲಾದ ರಾಮರಾವ್‌ ಅವರು ಮಾತನಾಡಿ, ವೈಮಾನಿಕ ತಂತ್ರಜ್ಞಾನದ ಅಭಿವೃದ್ಧಿ ಕುರಿತ ಸಂಗತಿಗಳನ್ನು ವಿದ್ಯಾರ್ಥಿಗಳು ಪ್ರಾತ್ಯಕ್ಷಿಕೆಗಳ ಮೂಲಕ ಮನನ ಮಾಡಿಕೊಳ್ಳಲು ಸಾಧ್ಯವಾಗುವಂತೆ ಈ ರಾಷ್ಟ್ರೀಯ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದರು.

ಕಾರ್ಯಾಗಾರದಲ್ಲಿ ವೈಮಾನಿಕ ತಂತ್ರಜ್ಞಾನ ಅಭಿವೃದ್ಧಿ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಹಾಗೂ ಹಿರಿಯ ವಿಜ್ಞಾನಿ ಡಾ. ಪಿ.ಎಸ್‌. ಕೃಷ್ಣನ್‌, ಕರ್ನಾಟಕ ಕೇಂದ್ರೀಯ ವಿವಿ ಕುಲಪತಿ ಪ್ರೊ. ಎನ್‌.ಆರ್‌. ಶೆಟ್ಟಿ , ಎನ್‌ಎಂಐಟಿ ಪ್ರಾಂಶುಪಾಲ ಡಾ. ಹೆಚ್‌.ಸಿ. ನಾಗರಾಜ್‌, ಪ್ರೊ. ಪಿ.ಕೆ. ದಾಶ್‌, ಆಡಳಿತಾ—ಕಾರಿ ರೋಹಿತ್‌ ಪೂಂಜ ಹಾಗೂ ಅಕಾಡೆಮಿಕ್‌ ಡೀನ್‌ ಪ್ರೊ. ಶ್ರೀಧರ್‌ ಸೇರಿದಂತೆ 400ಕ್ಕೂ ಅ—ಕ ವೈಮಾನಿಕ ತಂತ್ರಜ್ಞಾನದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

dw

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.