ಮಧುಕರ್ ಶೆಟ್ಟಿ ಸಾವು ನಿಗೂಢ?
Team Udayavani, Dec 30, 2018, 12:30 AM IST
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಾ. ಮಧುಕರ್ ಶೆಟ್ಟಿ ಸಾವು ಅಸ್ವಾಭಾವಿಕವೇ ಎಂಬ ಶಂಕೆ ಈಗ ವ್ಯಕ್ತವಾಗಿದೆ. ಆವರಿಗೆ ಎಚ್1ಎನ್1 ಸೋಂಕು ತಗುಲಿದೆ ಹಾಗೂ ಹೃದಯ ಸಮಸ್ಯೆ ಮತ್ತು ಶ್ವಾಸಕೋಶಕ್ಕೆ ಸೋಂಕು ತಗುಲಿ ಸಾವಿಗೀಡಾದರು ಎಂಬ ಅದಲು ಬದಲು ಹೇಳಿಕೆಗಳು ಈ ಶಂಕೆಗೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಗೃಹಸಚಿವರು, ಸಚಿವರು, ಸಂಸದರು ಮತ್ತು ಅಧಿಕಾರಿ ವರ್ಗ ತನಿಖೆ ಸೂಕ್ತ ಎಂದಿರುವುದು ಇದಕ್ಕೆ ಪುಷ್ಟಿ ನೀಡುವಂತಿದೆ.
ಸಾವಿಗೆ ಅಚ್ಚರಿ ವ್ಯಕ್ತಪಡಿಸಿರುವ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಾವಿನ ಹಿನ್ನೆಲೆ ಬಗ್ಗೆ ತನಿಖೆ ಆಗಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಅವರ ಹೇಳಿಕೆ ಬಳಿಕ ಸಾವಿನ ನಿಗೂಢತೆ ಬಗ್ಗೆ ಹಲವು ಚರ್ಚೆಗಳು ಸಾರ್ವಜನಿಕ ವಲಯದಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹುಟ್ಟಿಕೊಂಡಿವೆ. ಗೃಹ ಸಚಿವ ಎಂ.ಬಿ ಪಾಟೀಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ ಮಧುಕರ್ ಶೆಟ್ಟಿ ಸಾವಿನ ಕುರಿತ ವರದಿಗಳನ್ನು ಪರಿಶೀಲಿಸಿ ಅಗತ್ಯಬಿದ್ದರೆ ತನಿಖೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ ಅವರೂ ಮಧುಕರ್ ಶೆಟ್ಟಿ ಸಾವಿನ ಕುರಿತು ಸೂಕ್ತ ತನಿಖೆ ಆಗಬೇಕಿದೆ ಎಂದು ಹೇಳಿದ್ದಾರೆ.
ಯಲಹಂಕದ ಸಶಸ್ತ್ರ ಮೀಸಲು ಪಡೆ ತರಬೇತಿ ಶಾಲಾ ಮೈದಾನದಲ್ಲಿ ಶನಿವಾರ ಅಂತಿಮ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಗೃಹ ಸಚಿವ ಎಂ.ಬಿ. ಪಾಟೀಲ್, ಮಧುಕರ್ ಶೆಟ್ಟಿ ಸಾವಿಗೆ ಸಂಬಂಧಿಸಿದಂತೆ ಹೈದ್ರಾಬಾದ್‌ನ ಸರ್ದಾರ್ ವಲ್ಲಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿ ವರದಿ ಹಾಗೂ ಅವರಿಗೆ ಚಿಕಿತ್ಸೆ ನೀಡಿದ ಆಸ್ಪತ್ರೆಯ ಪ್ರಾಥಮಿಕ ವರದಿ ಪಡೆದುಕೊಂಡು ಇಲಾಖೆ ಪರಿಶೀಲಿಸಿದ್ದು, ಪ್ರಾಥಮಿಕವಾಗಿ ಯಾವುದೇ ಅನುಮಾನ ವ್ಯಕ್ತವಾಗಿಲ್ಲ. ಪೂರ್ಣ ವರದಿ ತರಿಸಿಕೊಂಡು ಪರಿಶೀಲಿಸಿದ ಬಳಿಕ ಅಗತ್ಯ ಬಿದ್ದರೆ ಮುಂದಿನ ಕ್ರಮ ವಹಿಸಲಾಗುವುದು ಎಂದರು.
ಈ ನಡುವೆ ಹೆಸರು ಹೇಳಲಿಚ್ಛಿಸದ ಐಪಿಎಸ್ ಅಧಿಕಾರಿಯೊಬ್ಬರು ಮಧುಕರ್ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಭ್ರಷ್ಟ ರಾಜಕಾರಣಿಗಳು, ಪೊಲೀಸರೂ ಸೇರಿದಂತೆ ಭ್ರಷ್ಟ ಅಧಿಕಾರಿಗಳ ಬಗ್ಗೆ ಬಹಳಷ್ಟು ಆಘಾತಕಾರಿ ಮಾಹಿತಿಗಳು ಮಧುಕರ್ ಬಳಿ ಇವೆ. ಅಂತಹ ದಾಖಲೆಗಳ ಕಾರಣ ಈ ಸಾವಿನ ಹಿಂದೆ ಇದೆಯೆ? ಎಂಬ ಬಗ್ಗೆ ತನಿಖೆಯಾಗಬೇಕಿದೆ ಎಂದು ಹೇಳಿದ್ದಾರೆ. ಅವರು ಆಸ್ಪತ್ರೆಗೆ ದಾಖಲಾದಾಗ ಇದ್ದ ಸ್ಥಿತಿ, ಕೈಗೊಂಡ ವೈದ್ಯಕೀಯ ಚಿಕಿತ್ಸೆಗಳು, ಅವರು ಕುಸಿದುಬಿದ್ದಾಗ ಅಲ್ಲಿದ್ದವರು ಮತ್ತು ಇತರ ಅಧಿಕಾರಿಗಳ ಹೇಳಿಕೆಗಳನ್ನೂ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮಧುಕರ್ ಆರೋಗ್ಯ ಪರಿಸ್ಥಿತಿ ಮತ್ತು ಸಾವಿನ ಕುರಿತು ವರದಿಗಳನ್ನು ಪರಿಶೀಲಿಸಿ ಅವಶ್ಯ ಬಿದ್ದಲ್ಲಿ ಮುಂದಿನ ಕ್ರಮ ವಹಿಸಲಾಗುವುದು.
– ಎಂ.ಬಿ ಪಾಟೀಲ್, ಗೃಹ ಸಚಿವ
ಮಧುಕರ್ ಶೆಟ್ಟಿ ಅವರ ಸಾವಿನ ಸುದ್ದಿ ಕೇಳಿ ಅಚ್ಚರಿಯಾಯಿತು. ಅದರ ಹಿನ್ನೆಲೆ ಏನು ಎನ್ನುವದರ ಬಗ್ಗೆ ತನಿಖೆ ಮಾಡಬೇಕಿದೆ. ಸ್ವಾಭಾವಿಕವಾಗಿದೆಯೇ? ಏನಾದರೂ ಹೆಚ್ಚು ಕಡಿಮೆ ಆಗಿದೆಯೆ? ಆ ಬಗ್ಗೆ ತಿಳಿದುಕೊಳ್ಳಬೇಕು. ಬಹಳ ಗೌರವಾನ್ವಿತ ವ್ಯಕ್ತಿ. ಪೊಲೀಸ್ ಇಲಾಖೆಯ ಆಸ್ತಿಯಾಗಿದ್ದರು.
– ಡಿ.ಕೆ. ಶಿವಕುಮಾರ್, ಸಚಿವ
ಉಡುಪಿ ಜಿಲ್ಲೆಯ ಮಧುಕರ್ ಶೆಟ್ಟಿ ಅವರು ಶೃಂಗೇರಿಯಲ್ಲಿ ನಕ್ಸಲರ ವಿರುದ್ಧ ಉತ್ತಮ ಕೆಲಸಮಾಡಿದ್ದರು. ನಕ್ಸಲರನ್ನು ಪತ್ತೆಹಚ್ಚುವಲ್ಲಿಯೂ ಸಾಕಷ್ಟು ಕೆಲಸ ಮಾಡಿದ್ದರು. ಲೋಕಾಯುಕ್ತದಲ್ಲೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಭೃಷ್ಟರಿಗೆ ಸಿಂಹಸ್ವಪ್ನರಾಗಿದ್ದರು. ಅವರು ಶ್ವಾಸಕೋಶ ಸಮಸ್ಯೆ ಅಥವಾ ಎಚ್1ಎನ್1 ಸೋಂಕಿನಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ಅವರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆಯೇ ಅಥವಾ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆಯೇ ಎಂಬ ಬಗ್ಗೆ ಸೂಕ್ತ ತನಿಖೆ ಆಗಬೇಕು.
– ಶೋಭಾ ಕರಂದ್ಲಾಜೆ, ಸಂಸದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.