ಕೈ ಟಿಕೆಟ್ ಆಕಾಂಕ್ಷಿಗಳ ಸಂದರ್ಶನ ಮಾಡಿದ ಮಿಸ್ತ್ರಿ
Team Udayavani, Mar 9, 2018, 6:35 AM IST
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಟಿಕೆಟ್‌ಗೆ ಅರ್ಜಿ ಸಲ್ಲಿಸುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳನ್ನು ಎಐಸಿಸಿ ಟಿಕೆಟ್ ಪರಿಶೀಲನಾ ಸಮಿತಿ ಅಧ್ಯಕ್ಷ ಮಧುಸೂಧನ್ ಮಿಸ್ತ್ರಿ ಸಂದರ್ಶನ ಮಾಡಿದ್ದಾರೆ.
224 ವಿಧಾನಸಭಾ ಕ್ಷೇತ್ರಗಳಿಗೆ ಸುಮಾರು 2 ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳು ಅರ್ಜಿ ಪಡೆದಿದ್ದು, ನಿರೀಕ್ಷೆಗೂ ಮೀರಿ ಟಿಕೆಟ್‌ಗೆ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಮಧುಸೂಧನ್ ಮಿಸ್ತ್ರಿ ಆಕಾಂಕ್ಷಿಗಳ ಸಾಮರ್ಥ್ಯ ಮತ್ತು ಅವರು ಸ್ಪರ್ಧಿಸುವ
ಕ್ಷೇತ್ರಗಳ ಬಗ್ಗೆ ಅವರಿಗಿರುವ ಮಾಹಿತಿ ಪಡೆಯುವ ಪ್ರಯತ್ನ ಮಾಡಿದ್ದಾರೆ. ಟಿಕೆಟ್ ಆಕಾಂಕ್ಷಿಗಳಿಗೆ, ನೀವು ಯಾವ ಕ್ಷೇತ್ರದಿಂದ ಟಿಕೆಟ್ ಬಯಸಿದ್ದೀರಿ? ನಿಮ್ಮ ಕ್ಷೇತ್ರದ ಮತದಾರರ ಸಂಖ್ಯೆ ಎಷ್ಟು ? ನಿಮ್ಮ ಕ್ಷೇತ್ರದಲ್ಲಿ ಎಷ್ಟು ವಾರ್ಡ್‌ಗಳಿವೆ. ಅದರಲ್ಲಿಬಿಜೆಪಿ, ಕಾಂಗ್ರೆಸ್ ಸದಸ್ಯರ ಸಂಖ್ಯೆ ಎಷ್ಟು ? ನಿಮ್ಮ ಕ್ಷೇತ್ರದಲ್ಲಿ ಹಾಲಿ ಶಾಸಕರ ಬಗ್ಗೆ ಇರುವ ಅಭಿಪ್ರಾಯ ಏನು ? ಹಾಲಿ ಶಾಸಕ ಬಿಜೆಪಿಯವರಾಗಿದ್ದರೆ ಅವರನ್ನು ಸೋಲಿಸಲು ನಿಮ್ಮ ಬಳಿ ಯಾವ ಅಸ್ತ್ರವಿದೆ ? ಕ್ಷೇತ್ರದ ಜಾತಿ ಸಮೀಕರಣ ಹೇಗಿದೆ ? ಯಾವ ಜಾತಿಯ ಮತಗಳು ನಿರ್ಣಾಯಕ ಪಾತ್ರ ವಹಿಸುತ್ತವೆ? ಎಂಬೆಲ್ಲಾ ಮಾಹಿತಿ ಪಡೆದಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ನೀವೇ ಉತ್ತಮ ಅಭ್ಯರ್ಥಿ ಎಂದು ಹೇಗೆ ಹೇಳುತ್ತೀರಿ ? ಈ ಹಿಂದೆ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್ ಅಭ್ಯರ್ಥಿ ಸೋಲಲು ಕಾರಣವೇನು ? ಕಾಂಗ್ರೆಸ್ ಅಭ್ಯರ್ಥಿ ಎಷ್ಟು ಮತಗಳ ಅಂತರದಿಂದ ಸೋತಿದ್ದರು ? ಕಳೆದ ಬಾರಿ ಸೋಲಲು ಕಾಂಗ್ರೆಸ್ ತಂತ್ರಗಾರಿಕೆ ವಿಫಲವಾಗಿದ್ದೆಲ್ಲಿ ? ಹೀಗೆ ಸರಣಿ ಪ್ರಶ್ನೆಗಳನ್ನು ಕೇಳಿ ಆಕಾಂಕ್ಷಿಗಳಿಗೆ ಕ್ಷೇತ್ರದ ಬಗ್ಗೆ ಇರುವ ಮಾಹಿತಿ ಮತ್ತು ಅವರಿಗೆ ಸ್ಪರ್ಧಿಸಲು ಇರುವ ಅರ್ಹತೆಯನ್ನು ಪರೀಕ್ಷೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮಧುಸೂಧನ್ ಮಿಸ್ತ್ರಿ, ಟಿಕೆಟ್ ಆಕಾಂಕ್ಷಿಗಳಿಂದ ಹಲವು ಮಾಹಿತಿ ಪಡೆದಿದ್ದೇವೆ. ಒಬ್ಬರಿಗೆ ಒಂದೇ ಟಿಕೆಟ್ ಎಂಬ ವಿಚಾರ ಇಟ್ಟುಕೊಂಡು ಅರ್ಜಿ ಪಡೆದುಕೊಳ್ಳುತ್ತಿದ್ದೇವೆ. ಅರ್ಜಿ ಪಡೆದು ಪರಿಶೀಲನೆ ನಡೆಸಿ ಹೈಕಮಾಂಡ್‌ಗೆ ಕಳುಹಿಸಿಕೊಡುತ್ತೇವೆ. ಯಾರಿಗೆ ಟಿಕೆಟ್ ನೀಡಬೇಕೆನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಗೆಲ್ಲುವ ಸಾಮರ್ಥ್ಯ ಇದ್ದವರಿಗೆ ಟಿಕೆಟ್ ನೀಡಲಾಗುವುದು ಎಂದರು.
ಸಮಿತಿ ಸದಸ್ಯರಾದ ಸಂಸದರಾದ ತಮ್ರಾಧ್ವಜ್ ಸಾಹು ಹಾಗೂ ಗೌರವ್ ಗೋಗಾಯ್ ಹಾಜರಿದ್ದರು. ಶುಕ್ರವಾರವೂ ಟಿಕೆಟ್ ಆಕಾಂಕ್ಷಿಗಳ ಸಂದರ್ಶನ ನಡೆಯಲಿದೆ.
ಪದಾಧಿಕಾರಿಗಳ ಸಭೆ ಇಂದು
ಬೆಂಗಳೂರು: ಮೂರು ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಕರ್ನಾಟಕವನ್ನು ಮುಂದಿನ ಗುರಿಯಾಗಿಸಿಕೊಂಡಿರುವುದರಿಂದ ರಾಜ್ಯ ಕಾಂಗ್ರೆಸ್ ತಳ ಮಟ್ಟದಲ್ಲಿ ಪಕ್ಷವನ್ನು ಮತ್ತಷ್ಟು ಚುರುಕುಗೊಳಿಸಲು ತೀರ್ಮಾನಿಸಿದೆ.
ಪಕ್ಷದ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ, ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯ ನಿರ್ವಹಿಸಲು, ಸರ್ಕಾರದ ಯೋಜನೆಗಳು ಹಾಗೂ ಪಕ್ಷದ ಸೂಚನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಮತ್ತಷ್ಟು ತೀವ್ರಗತಿಯಲ್ಲಿ ಮಾಡುವಂತೆ ಜಿಲ್ಲಾಧ್ಯಕ್ಷರಿಗೆ ಸೂಚಿಸುವ ಸಾಧ್ಯತೆ ಇದೆ. ಪ್ರಮುಖವಾಗಿ ಬಿಜೆಪಿ ನಡೆಸುತ್ತಿರುವ ಅಪಪ್ರಚಾರ ಹಾಗೂ ಪ್ರಚೋದನಾತ್ಮಕ ಹೇಳಿಕೆಗಳ ಬಗ್ಗೆ ಎಚ್ಚರದಿಂದ ಇರುವಂತೆ ಮತ್ತು ಪ್ರಚೋದನಾತ್ಮಕ ಹೇಳಿಕೆ ನೀಡಿ ಅನಗತ್ಯ ವಿವಾದಗಳಲ್ಲಿ ಸಿಲುಕಿಕೊಳ್ಳದಂತೆ ಸಭೆಯಲ್ಲಿ ಕಿವಿ ಮಾತು ಹೇಳುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.