ಮಡಿಲು ಕಿಟ್ ಯೋಜನೆ ರದ್ದು
Team Udayavani, Jul 5, 2017, 3:10 AM IST
ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬದ ಗರ್ಭಿಣಿಯರು ಸರಕಾರಿ ಅಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡಾಗ ವಿತರಿಸುವ ಮಡಿಲು ಕಿಟ್ ಯೋಜನೆ ಅನುದಾನದ ಕೊರತೆಯಿಂದ ರದ್ದಾಗಿದೆ. ಮಡಿಲು ಯೋಜನೆಯಡಿ ಈ ವರ್ಷ ಕಿಟ್ ನೀಡಲು ಸಾಧ್ಯವಿಲ್ಲ. ರಾಜ್ಯ ಸರಕಾರ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿಲ್ಲ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ನಿಂದಲೂ ಅನುದಾನ ಬಂದಿಲ್ಲ. ಹೀಗಾಗಿ ಯೋಜನೆ ಮುಂದುವರಿಸಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.
2007ರಿಂದ 2013ರ ವರೆಗೆ ಮಡಿಲು ಯೋಜನೆಯ ಕಿಟ್‌ಗೆ ರಾಜ್ಯ ಸರಕಾರ ಅನುದಾನ ನೀಡಿದೆ. 2013ರಿಂದ 2016ರವರೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ ಅನುದಾನ ಬಿಡುಗಡೆ ಮಾಡಿತ್ತು. ಈ ವರ್ಷ ರಾಜ್ಯ ಸರಕಾರ, ರಾಷ್ಟ್ರೀಯ ಆರೋಗ್ಯ ಮಿಷನ್ ಅನುದಾನ ಬಿಡುಗಡೆ ಮಾಡದೇ ಇರುವುದರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಯೋಜನೆ ಸಲ್ಲಿಸಬೇಕಾದ ಪರಿಸ್ಥಿತಿ ಬಂದಿದೆ ಎಂದಿದ್ದಾರೆ. 2017ರ ಮಾರ್ಚ್ ತನಕ ಮಡಿಲು ಕಿಟ್ ವಿತರಣೆ ಮಾಡಲಾಗಿದೆ. ಮಾರ್ಚ್ ಅನಂತರ 4 ಲಕ್ಷ ಕಿಟ್‌ನ ಆವಶ್ಯಕತೆ ಇದೆ ಎಂದು ಆರೋಗ್ಯ ಇಲಾಖೆಯಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ, ಸರಕಾರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಹೇಳಲಾಗಿದೆ.
2017ರ ಬಜೆಟ್‌ನಲ್ಲಿ ಮಡಿಲು ಯೋಜನೆಗೆ ರಾಜ್ಯ ಸರಕಾರ ಹಣ ಮೀಸಲಿಟ್ಟಿಲ್ಲ. ರಾಷ್ಟ್ರೀಯ ಆರೋಗ್ಯ ಮಿಷನ್ ಕೂಡ ಅನುದಾನ ನೀಡಿರಲಿಲ್ಲ. ಹೀಗಾಗಿ, ರಾಜ್ಯ ಸರಕಾರ ಯೋಜನೆ ಸ್ಥಗಿತಗೊಳಿಸಲು ತೀರ್ಮಾನಿಸಿತ್ತು. ಮಡಿಲು ಕಿಟ್‌ನಲ್ಲಿ ಬಾಣಂತಿ ಮತ್ತು ಮಗುವಿನ ಆರೈಕೆಗೆ ಬೇಕಾಗುವ ಫ್ಲೋರ್ ಮ್ಯಾಟ್, ಬೆಡ್‌ಶೀಟ್, ಟವೆಲ್, ಹೊಟ್ಟೆಗೆ ಸುತ್ತುವ ಬೆಲ್ಟ್, ಕಾಟನ್ ಡೈಪರ್, ಸ್ಯಾನಿಟರಿ ನ್ಯಾಪ್‌ಕಿನ್ಸ್, ಎಣ್ಣೆ, ಸೋಪ್ ಸಹಿತ ಸುಮಾರು 18 ಉತ್ಪನ್ನಗಳು ಸೇರಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.