ಮ್ಯಾಜಿಸ್ಟ್ರೇಟ್ ಕೋರ್ಟ್‌ಗಳಿಗೆ ಹೈ ಮಾರ್ಗಸೂಚಿ
Team Udayavani, Oct 19, 2021, 1:48 PM IST
ಬೆಂಗಳೂರು: ಖಾಸಗಿ ದೂರುಗಳನ್ನು ವಿಚಾರಣೆಗೆಅಂಗೀಕರಿಸುವಾಗ ಮ್ಯಾಜಿಸ್ಟ್ರೇಟ್ ಕೋರ್ಟ್‌ಅನುಸರಿಸಬೇಕಾದ ಕ್ರಮಗಳ ಕುರಿತು ಹೈಕೋರ್ಟ್‌ಮಾರ್ಗಸೂಚಿಗಳನ್ನು ತಿಳಿಸಿದೆ.
ಜಮೀನು ವ್ಯಾಜ್ಯ ಸಂಬಂಧ ತನ್ನ ವಿರುದ್ಧದ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಶ್ರೀಸತ್ಯಸಾಯಿ ಸೆಂಟ್ರಲ್ ಟ್ರಸ್ಟ್ ಸಲ್ಲಿಸಿದ್ದ ಅರ್ಜಿವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸ್ ಹರೀಶ್‌ಕುಮಾರ್ ಅವರು ಈ 7 ಮಾರ್ಗಸೂಚಿಗಳನ್ನು ರಚಿಸಿದ್ದಾರೆ.
ಭೂ ಮಾಲೀಕರು ಎನ್ನಲಾದ ಚಿಕ್ಕಬಳ್ಳಾಪುರದಸತ್ಯ ಸಾಯಿ ಗ್ರಾಮದ ನಿವಾಸಿ ಬಿ.ಎನ್. ನರಸಿಂಹಮೂರ್ತಿ ಅವರು ಶ್ರೀ ಸತ್ಯಸಾಯಿ ಸೆಂಟ್ರಲ್ ಟ್ರಸ್ಟ್‌ವಿರುದ್ಧ ದಾಖಲಿಸಿದ್ದ ಖಾಸಗಿ ದೂರನ್ನು ತನಿಖೆನಡೆಸುವಂತೆ ನಂದಿಗಿರಿಗ್ರಾಮದ ಠಾಣಾಪೊಲೀಸರಿಗೆ ಸ್ಥಳೀಯ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶಿಸಿತ್ತು.
ಆದರೆ, ಪ್ರಕರಣದಲ್ಲಿ ಅಪರಾಧ ಕೃತ್ಯನಡೆದಿರುವುದನ್ನು ಸಾಬೀತುಪಡಿಸಲು ಯಾವುದೇದಾಖಲೆ ಮತ್ತು ಸಾಕ್ಷ್ಯ ಲಭ್ಯವಿಲ್ಲದಿದ್ದರೂ ತನಿಖೆಗೆಆದೇಶಿಸಿರುವುದನ್ನು ಗಂಭೀರವಾಗಿ ಪರಿಗಣಿಸಿದಹೈಕೋರ್ಟ್, ಮ್ಯಾಜಿಸ್ಟ್ರೇಟ್ ಕೊರ್ಟ್‌ಕಡ್ಡಾಯವಾಗಿ ಅನುಸರಿಸಬೇಕಾದ ಈ ಏಳು ಮಾರ್ಗಸೂಚಿಗಳನ್ನು ರಚಿಸಿದೆ. ಇದೇ ವೇಳೆ ಟ್ರಸ್ಟ್‌ವಿರುದ್ಧ ಎಫ್ಐಆರ್ ಮತ್ತುದೋಷಾರೋಪ ಪಟ್ಟಿಯನ್ನುರದ್ದುಪಡಿಸಿದೆ.
ಹೈಕೋರ್ಟ್ ರಚಿಸಿದಮಾರ್ಗಸೂಚಿಗಳು:
ಖಾಸಗಿ ದೂರು ಸಲ್ಲಿಕೆಯಾದಾಗ ಅದನ್ನುಮ್ಯಾಜಿಸ್ಟ್ರೇಟ್ ಕೋರ್ಟ್ ಕಡ್ಡಾಯವಾಗಿ ಓದಬೇಕು.ದೂರಿನಲ್ಲಿ ಅಪರಾಧ ಕೃತ್ಯ ನಡೆದಿರುವ ಬಗ್ಗೆಯಾವುದೇ ಮಾಹಿತಿ ಇಲ್ಲವಾದರೆ ದೂರನ್ನುವಜಾಗೊಳಿಸಬಹುದು. ಆದರೆ, ದೂರುದಾರ ಸೂಕ್ತರೀತಿಯಲ್ಲಿ ದೂರು ಸಿದ್ಧಪಡಿಸಿಲ್ಲ ಎಂಬ ಅಂಶಕಂಡುಬಂದರೆ ಅಥವಾ ಬಹಳ ಚಾಣಾಕ್ಷತೆ ಯಿಂದದೂರು ಸಿದ್ಧಪಡಿಸಿದ್ದರೆ ಸಂದರ್ಭದಲ್ಲಿ ದೂರುದಾರಮತ್ತು ಸಾಕ್ಷಿಗಳನ್ನು ಪರಿಶೀಲಿಸಬಹುದು.
ಸಿಆರ್‌ಪಿಸಿ ಸೆಕ್ಷನ್ -200ರ ಅನ್ವಯ ದೂರನ್ನುಓದಿದ ನಂತರ (ಸಾಕ್ಷಿಗಳು ಹಾಜರಿದ್ದರೆ ಮತ್ತುಅವರನ್ನು ವಿಚಾರಿಸುವುದು ಅಗತ್ಯ ವಾದರೆ)ಪ್ರಕರಣದಲ್ಲಿ ಮುಂದು ವರಿಯಲುಸೂಕ್ತ ಅಂಶಗಳಿವೆ ಎಂಬ ತೀರ್ಮಾನಕ್ಕೆ ಬಂದರೆ, ಮ್ಯಾಜಿಸ್ಟ್ರೇಟ್‌ಕೋರ್ಟ್ ಕಾಗ್ನಿಜೆನ್ಸ್ ತೆಗೆದುಕೊಂಡು ಆರೋಪಿಗೆ ನೋಟಿಸ್‌ಜಾರಿಗೊಳಿಸಬಹುದು.
ಸಿಆರ್‌ಪಿಸಿ ಸೆಕ್ಷನ್ 200ರಅನ್ವಯ ಎಲ್ಲ ಪ್ರಕ್ರಿಯೆ ಅನುಸರಿಸಿದ ಬಳಿಕವೂಪ್ರಕರಣದಲ್ಲಿ ಕಾಗ್ನಿಜೆನ್ಸ್ ತೆಗೆದುಕೊಳ್ಳಲುಸಮರ್ಪಕ ಅಂಶಗಳು ಇಲ್ಲ ಎಂದು ಕಂಡು ಬಂದರೆಆ ಬಗ್ಗೆ ಮ್ಯಾಜಿಸ್ಟ್ರೇರ್ಟ್ ಖುದ್ದು ವಿಚಾರಣೆನಡೆಸಬಹುದು ಅಥವಾ ಸಿಆರ್‌ಪಿಸಿ ಸೆಕ್ಷನ್202ರಡಿ ನೇರ ತನಿಖೆಗೆ ನಿರ್ದೇಶಿಸಬಹುದು.
ಒಂದು ವೇಳೆ ದೂರುದಾರರು ಹಾಗೂಸಾಕ್ಷಿಗಳನ್ನು ಪರೀಕ್ಷೆಗೊಳಪಡಿಸಿದ ನಂತರವೂಅಪರಾಧ ಕೃತ್ಯವನ್ನು ಸಾಬೀತು ಪಡಿಸುವಂತಹಅಂಶಗಳು ಲಭ್ಯವಾಗದಿದ್ದರೆ ಸಿಆರ್‌ಪಿಸಿ ಸೆಕ್ಷನ್203ರ ಅನ್ವಯ ದೂರನ್ನು ರದ್ದುಪಡಿಸಬಹುದು.
ಸೆಕ್ಷನ್ 202ರ ಅನ್ವಯ ಕ್ರಮ ಕೈಗೊಳ್ಳುವುದುಎಲ್ಲ ಸಂದರ್ಭಗಳಲ್ಲೂ ಕಡ್ಡಾಯವಲ್ಲ. ಸೆಕ್ಷನ್202ರಲ್ಲಿ ವಿವರಿಸಲಾಗಿರುವ ಸಂದರ್ಭಕ್ಕೆಅನುಗುಣವಾಗಿದ್ದರೆ ಮಾತ್ರ ದೂರನ್ನು ವಿಚಾರಣೆಗೆಆದೇಶಿಸಬಹುದು. ಅಂದರೆ ಸೆಕ್ಷನ್ 200ರ ಹಂತದನಂತರವೂ ದೂರನ್ನು ಕಾಗ್ನಿಜೆನ್ಸ್‌ತೆಗೆದುಕೊಳ್ಳುವುದು ಅಥವಾ ವಜಾಗೊಳಿಸುವುದುಆಯಾ ಸಂದರ್ಭವನ್ನು ಆಧರಿಸುತ್ತದೆ.
ಕಾಗ್ನಿಜೆನ್ಸ್ ತೆಗೆದುಕೊಂಡ ಬಗ್ಗೆ ಆದೇಶದ ಪ್ರತಿಯಲ್ಲಿ ಕಡ್ಡಾಯವಾಗಿ ಹಿಂಬರಹ ನೀಡುವುದುಅಗತ್ಯವಿಲ್ಲ. ಆದರೆ, ಕಾಗ್ನಿಜೆನ್ಸ್ ತೆಗೆದುಕೊಳ್ಳುದಕ್ಕೆವಿವೇಚನೆ ಬಳಸಬೇಕು. ಕಾಗಿಜೆನ್ಸ್ ತೆಗೆದುಕೊಂಡಿರುವ ಬಗ್ಗೆ ಆದೇಶದಲ್ಲಿ ಸಂಕ್ಷಿಪ್ತವಾಗಿ ವಿವರಿಸಬೇಕು.ಆರೋಪಿಗೆ ನೋಟಿಸ್ ಜಾರಿಗೆ ಕೈಗೊಂಡ ನಿರ್ಧಾರವೇ ಕಾಗ್ನಿಜೆನ್ಸ್ ತೆಗೆದುಕೊಳ್ಳಲಾಗಿದೆ ಎಂಬುದನ್ನುಸೂಚಿಸುತ್ತದೆ.
ತನಿಖಾ ಪೊಲೀಸ್ ಅಧಿಕಾರಿ ಬಿ ರಿಪೋರ್ಟ್‌ಸಲ್ಲಿಸಿದ ಸಂದರ್ಭದಲ್ಲಿ ಅದನ್ನು ದೂರುದಾರಪ್ರಶ್ನಿಸಿದರೆ ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಮೇಲೆಹೇಳಿದ ಕ್ರಮಗಳನ್ನು ಅನುಸರಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.