ಮಹದೇವಪುರ: ಸುಳ್ಳು ರಸ್ತೆ ತೋರಿಸಿ ಫ್ಲ್ಯಾಟ್‌ ಮಾರಿದ ಬಿಲ್ಡರ್‌ಗಳು

Team Udayavani, Jan 2, 2017, 11:29 AM IST

30mhpura1.jpg

ಮಹದೇವಪುರ: ನಗರ ಯೋಜನಾ ನಕ್ಷೆ ಮಂಜೂರಾತಿ ಅಧಿಕಾರಿಗಳ ನಿರ್ಲಕ್ಷÂ ಹಾಗೂ ಬಿಲ್ಡರ್‌ಗಳ ದುರಾಸೆಗೆ ಸಾವಿರಾರು ಜನರು ರಸ್ತೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ದೊಡ್ಡನಕ್ಕುಂದಿ ವಾರ್ಡ್‌ನ ತೂಬರಹಳ್ಳಿ ಸಮೀಪ ಮೂರು ವರ್ಷಗಳ ಹಿಂದೆ ಬಹು ಮಹಡಿಗಳು ತಲೆ ಎತ್ತಿದ್ದು, ಸಾವಿರಾರು ಗ್ರಾಹಕರು ಮನೆಗಳನ್ನು ಖರೀದಿಸಿ ವಾಸಿಸುತ್ತಿದ್ದಾರೆ.

ಆದರೆ, ಅಪಾರ್ಟ್‌ಮೆಂಟ್‌ಗೆ ತೆರಳುವ ರಸ್ತೆ ತೂಬರಹಳ್ಳಿ ಗ್ರಾಮದ ಕೃಷ್ಣಾರೆಡ್ಡಿ ಎಂಬುವವರ ಜಮೀನು ಪಕ್ಕದಲ್ಲೇ ಹಾದು ಹೋಗುತ್ತಿದ್ದು, ಗ್ರಾಮ ನಕ್ಷೆಯಲ್ಲಿ ಆ ರಸ್ತೆಯನ್ನು ಸುಮಾರು 8 ಅಡಿಯೆಂದು ನಮೂದಿಸಿದೆ. ಆದರೆ, ಅಪಾರ್ಟ್‌ಮೆಂಟ್‌ಗಳ ನಿರ್ಮಾಣ ಮಾಡಿರುವ ಬಿಲ್ಡರ್‌ಗಳು 40 ಅಡಿ ರಸ್ತೆ ಇರುವುದಾಗಿ ನಕಲಿ ನಕ್ಷೆ ತೋರಿಸಿ ವಂಚಿಸಿದ್ದಾರೆಂದು ಗ್ರಾಹಕರ ಆರೋಪಿಸಿದ್ದಾರೆ.

ನಗರ ಯೋಜನಾ ನಕ್ಷೆ ಮಂಜೂರಾತಿ ಅಧಿಕಾರಿಗಳು ದಾಖಲಾತಿಗಳನ್ನು ಸಮರ್ಪಕವಾಗಿ ಪರಿಶೀಲಿಸದೆ ನಕ್ಷೆ ಮಂಜೂರಾತಿ ನೀಡಿದ್ದಾರೆ. ಇದ್ದರಿಂದ ಜನ ಜೀವನ ದುಸ್ತರವಾಗಿದೆ ಎಂದು ಬಹುಮಹಡಿ ಕಟ್ಟಡದ ವಾಸಿಗಳು ದೂರಿದರು. ಫ್ಲ್ಯಾಟ್‌ ಮಾರುವುದಕ್ಕೆ ಬಿಲ್ಡರ್‌ಗಳು ರಸ್ತೆ ನಿರ್ಮಾಣ ಮಾಡಿದ್ದರು. ರಸ್ತೆ ಪಕ್ಕದಲ್ಲಿರುವ ಭೂ ಮಾಲೀಕರು ರಸ್ತೆ ಹಾದು ಹೋಗಿರುವ ಜಮೀನು ತಮ್ಮಗೆ ಸೇರಿದ್ದೆಂದು 8 ಅಡಿ ಇದ್ದ ರಸ್ತೆಯನ್ನು 6 ಅಡಿಗೆ ಮೊಟಕುಗೊಳಿಸಿ ರಸ್ತೆಯಲ್ಲಿ ತಂತಿಬೇಲಿ ಅಳವಡಿಸಿ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.

ಇದರಿಂದ ಆಂಬ್ಯುಲೆನ್ಸ್‌, ಶಾಲಾ ವಾಹನ, ನೀರಿನ ಟ್ಯಾಂಕರ್‌ ಹಾಗೂ ವಾಹನಗಳು ಸಂಚರಿಸಲು ಸಾಧ್ಯವಾಗದೆ ಅಪಾರ್ಟ್‌ಮೆಂಟ್‌ ನಿವಾಸಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಸ್ಥಳೀಯರು ಪಾಲಿಕೆ ಸದಸ್ಯೆ ಶ್ವೇತಾ ವಿಜಯ್‌ಕುಮಾರ್‌ ಬಳಿ ಅಳಲು ತೋಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಬಿಬಿಎಂಪಿ ಜಂಟಿ ಆಯುಕ್ತ ವೆಂಕಟಾಚಲಪತಿ ಮತ್ತು ತಹಶೀಲ್ದಾರ್‌ ತೇಜಸ್‌ಕುಮಾರ್‌ ಜತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜಮೀನು ಮಾಲೀಕರ ಬಳಿ ಸಾರ್ವಜನಿಕರ ಹಿತಾಸಕ್ತಿಯ ಮೇರೆಗೆ ರಸ್ತೆಗೆ ಅಳವಡಿಸಿರುವ ಬೇಲಿಯನು ತೆರವು ಮಾಡುವಂತೆ ಮನವಿ ಮಾಡಿಕೊಂಡರು.

ಇದಕ್ಕೆ ಒಪ್ಪದ ಭೂ ಮಾಲೀಕರು ತೆರವುಗೊಳಿಸಲು ಅನುವು ಮಾಡಿಕೊಡಲಿಲ್ಲ. ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲನ್ನು ಆಲಿಸಿ ನಕ್ಷೆಯಲ್ಲಿರುವಂತೆ ರಸ್ತೆಯನ್ನು ಅಭಿವೃದ್ಧಿಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು. ಬಹು ಮಹಡಿ ಕಟ್ಟಡ ನಿವಾಸಿಗಳು ಯಾವುದೇ ಕಾರಣಕ್ಕೂ ಧೃತಿಗೆಡಬಾ ರದು ಕೂಡಲೇ ರಸ್ತೆಯನ್ನು ಅಭಿವೃದ್ಧಿಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸುವು ದಾಗಿ ಭರವಸೆ ನೀಡಿದರು. 

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.