ಮೆಜೆಸ್ಟಿಕ್ ಅಂಡರ್‌ಪಾಸ್ ಮೇಲ್ದರ್ಜೆಗೆ
Team Udayavani, Feb 21, 2018, 12:44 PM IST
ಬೆಂಗಳೂರು: ಕೆಎಸ್‌ಆರ್‌ಟಿಸಿ ಮತ್ತು ರೈಲ್ವೆ ನಿಲ್ದಾಣದ ನಡುವಿನ ಅಂಡರ್‌ಪಾಸ್ ಮೇಲ್ದರ್ಜೆಗೇರಿಸಲು ಉದ್ದೇಶಿಸಿದ್ದು, ಇದರ ಸಂಪೂರ್ಣ ಜವಾಬ್ದಾರಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ)ಕ್ಕೆ ವಹಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ನಗರದ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗವನ್ನು ಮಂಗಳವಾರ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಕೆಎಸ್‌ಆರ್‌ಟಿಸಿ-ರೈಲು ನಿಲ್ದಾಣ ನಡುವಿನ ಸುರಂಗ ಮಾರ್ಗವು ತುಂಬಾ ಹಳೆಯದಾಗಿದ್ದು, ಸ್ವತ್ಛತೆ ಕೊರತೆ ಇದೆ. ಅಲ್ಲದೇ, ಮಾರ್ಗದಲ್ಲಿ ವ್ಯಾಪಾರಿಗಳಿಂದ ಪ್ರಯಾಣಿಕರಿಗೂ ಕಿರಿಕಿರಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ “ಮೆಟ್ರೋ ಸಬ್ ವೇ’ ಮಾದರಿಯಲ್ಲೇ ಸಂಪೂರ್ಣ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಉದ್ದೇಶಿತ ಸುರಂಗಮಾರ್ಗವನ್ನು ಬಿಎಂಆರ್‌ಸಿಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದರು.
ಈ ಕುರಿತು ಶೀಘ್ರ ಬಿಎಂಆರ್‌ಸಿ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್, ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಜತೆ ಮಾತುಕತೆ ನಡೆಸಲಾಗುವುದು. ಇದರಿಂದ ಅಲ್ಲಿಯೂ ಸಿಸಿಟಿವಿ, ಉಸಿರಾಟದ ತೊಂದರೆ ಆಗದಂತೆ ವೆಂಟಿಲೇಟರ್ ಸಿಸ್ಟ್‌ಂ, ವಿದ್ಯುದ್ದೀಪ ಸೇರಿದಂತೆ ಪಾದಚಾರಿಗಳಿಗೆ ಪೂರಕ ಸೌಲಭ್ಯ ಕಲ್ಪಿಸಲಾಗುವುದು ಎಂದೂ ತಿಳಿಸಿದರು.
ಇದಕ್ಕೂ ಮುನ್ನ ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ನಡುವೆ ನೇರ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗ (ಸಬ್ ವೇ)ವನ್ನು ಸಚಿವ ಕೆ.ಜೆ. ಜಾರ್ಜ್ ಸೇವೆಗೆ ಮುಕ್ತಗೊಳಿಸಿದರು.
ರೈಲು ನಿಲ್ದಾಣಕ್ಕೆ ನೇರ ಸಂಪರ್ಕ: ಈ ಮೊದಲು ಪ್ರಯಾಣಿಕರು ಮೆಟ್ರೋ ನಿಲ್ದಾಣದಿಂದ ಶ್ಯಾಮಲಾ ಸಿಲ್ಕ್ ವೃತ್ತದಿಂದ ರೈಲು ನಿಲ್ದಾಣ ತಲುಪಬೇಕಿತ್ತು. ಲಗೇಜು ಹೊತ್ತುಕೊಂಡು “ಪೀಕ್ ಅವರ್’ನಲ್ಲಿ ರಸ್ತೆ ದಾಟುವುದು ಪ್ರಯಾಣಿಕರಿಗೆ ಕಿರಿಕಿರಿಯಾಗಿತ್ತು. ಈಗ ಮೆಟ್ರೋ ನಿಲ್ದಾಣದ ಟಿಕೆಟ್ ಕೌಂಟರ್‌ನಿಂದಲೇ ನೇರವಾಗಿ ರೈಲು ನಿಲ್ದಾಣಕ್ಕೆ ತೆರಳಬಹುದು.
ಅಲ್ಲದೆ, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಗೂ ಇದು ಸಂಪರ್ಕ ಕಲ್ಪಿಸುತ್ತದೆ. ಈ ಸೌಲಭ್ಯದಿಂದ ಪ್ರಯಾಣಿಕರಿಗೆ ಕನಿಷ್ಠ ಅರ್ಧ ಕಿ.ಮೀ.ನಷ್ಟು ಸಂಚಾರ ಕಡಿಮೆ ಆಗಲಿದೆ. ಒಂದು ಕೋಟಿ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ ಎಂದು ಕೆ.ಜೆ. ಜಾರ್ಜ್ ತಿಳಿಸಿದರು.
ಇದೇ ವೇಳೆ ಕೆಂಪೇಗೌಡ ಮೆಟ್ರೋ ನಿಲ್ದಾಣದ ಮತ್ತೂಂದು ಪ್ರವೇಶ ದ್ವಾರ ಚಿಕ್ಕಲಾಲ್‌ಬಾಗ್‌ನಿಂದ ಮಿನರ್ವ್ ಮಿಲ್ಸ್ ಬಳಿ ರಸ್ತೆ ದಾಟಲು ಮತ್ತೂಂದು ಸುರಂಗಮಾರ್ಗವನ್ನೂ ಲೋಕಾರ್ಪಣೆ ಮಾಡಲಾಯಿತು. ಇದು ರೈಲ್ವೆ ಕಾಲೊನಿಯಿಂದ ಗೋಪಾಲಪುರ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುತ್ತದೆ.
ಇದರ ಉದ್ದ ಸುಮಾರು 60 ಮೀಟರ್ ಹಾಗೂ ಅಗಲ 4.5 ಮೀ. ಇದೆ. ನಾಲ್ಕೂವರೆ ಕೋಟಿ ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ ಎಂದು ವಿವರಿಸಿದರು.
ಸಂಸದ ಪಿ.ಸಿ.ಮೋಹನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಶಾಸಕ ದಿನೇಶ್ ಗುಂಡೂರಾವ್, ಬಿಎಂಆರ್‌ಸಿ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್ ಮತ್ತಿತರರು ಇದ್ದರು.
ಕೆರೆ ಪುನರುಜ್ಜೀವನ: ಬಿಎಂಆರ್‌ಸಿ, ಟೈಟಾನ್ ಕಂಪನಿ ಹಾಗೂ ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಆನೇಕಲ್‌ನ ವೀರಸಂಸ್ರ ಕೆರೆ ಮತ್ತು ಕೆಂಗೇರಿ ಕೆರೆಗಳ ಪುನರುಜ್ಜೀವಗೊಳಿಸಲು ಮುಂದಾಗಿದೆ. ಈ ಸಂಬಂಧ ಮಂಗಳವಾರ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಈಗಾಗಲೇ ಉದ್ದೇಶಿತ ಎರಡೂ ಕೆರೆಗಳ ಅಭಿವೃದ್ಧಿಗೆ “ಸಮಗ್ರ ಯೋಜನಾ ವರದಿ’ (ಡಿಪಿಆರ್) ಸಿದ್ಧಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕೆರೆಗಳ ಒತ್ತುವರಿ ತೆರವು, ಒಳಚರಂಡಿ ನೀರು ಸೇರದಂತೆ ತಡೆಗೋಡೆ ನಿರ್ಮಾಣ ಸೇರಿದಂತೆ ಹಲವು ಕ್ರಮ ಕೈಗೊಳ್ಳಲಾಗುವುದು.
ಅಪಾರ್ಟ್‌ಮೆಂಟ್‌ಗೆ ಅನುಕೂಲ?: ಚಿಕ್ಕಲಾಲ್‌ಬಾಗ್‌ನಿಂದ ಗೋಪಾಲಪುರಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಸುರಂಗಮಾರ್ಗದಿಂದ ಅಣತಿ ದೂರದಲ್ಲೇ ಇರುವ ಅಪಾರ್ಟ್‌ಮೆಂಟ್‌ಗೂ ಅನುಕೂಲ ಆಗಲಿದೆ. ಸುರಂಗ ಮಾರ್ಗ ನಿರ್ಮಾಣದ ಹಿಂದಿನ ಉದ್ದೇಶ ಈ ಅಪಾರ್ಟ್‌ಮೆಂಟ್‌ನ ನಿವಾಸಿಗಳಿಗೆ ಮುಂದಿನ ದಿನಗಳಿಗೆ ಅನುಕೂಲ ಮಾಡಿಕೊಡುವುದೂ ಆಗಿದೆ ಎಂದು ಹೇಳಲಾಗುತ್ತಿದೆ. ಗೋಪಾಲಪುರದ ಎದುರಿಗೇ ಇಂದ್ರಪ್ರಸ್ಥ ಅಪಾರ್ಟ್‌ಮೆಂಟ್ ಇದೆ. ನಡುವಿನ ರಸ್ತೆ ದಾಟಿದರೆ ಸಾಕು, ಸುರಂಗಮಾರ್ಗದ ಪ್ರವೇಶ ದ್ವಾರಕ್ಕೆ ಬಂದು ನಿಲ್ಲಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.