ಮಾರುಕಟ್ಟೆಗೆ ಆಗಬೇಕು ಮೇಜರ್‌ ಸರ್ಜರಿ!

ಮಾರುಕಟ್ಟೆಗೆಂದು ಕಾಯಕಲ್ಪ?

Team Udayavani, Jun 12, 2019, 3:09 AM IST

marukatte

ಬೆಂಗಳೂರು: ಒಂದು ಕಾಲದಲ್ಲಿ ನಗರದ ಪ್ರತಿಷ್ಠೆಯ ಪ್ರತಿಬಿಂಬಗಳಾಗಿದ್ದ ಮಾರುಕಟ್ಟೆಗಳೇ ಇಂದು ಶೋಚನೀಯ ಸ್ಥಿತಿಗೆ ಸ್ವತಃ ಕನ್ನಡಿ ಹಿಡಿಯುತ್ತಿವೆ. ನಿತ್ಯ ಸಾವಿರಾರು ಜನ ಬಂದು-ಹೋಗುವ ಮಾರುಕಟ್ಟೆಗಳು ಸಮಸ್ಯೆ ಕೂಪಗಳಾಗಿವೆ. ಆಳುವವರು ಮನಸ್ಸು ಮಾಡಿದರೆ, ಇವು ಮತ್ತೆ ತಮ್ಮ ವೈಭವಕ್ಕೆ ಮರುಳುತ್ತವೆ. ಅಷ್ಟೇ ಅಲ್ಲ, ಪ್ರಮುಖ ಆದಾಯದ ಮೂಲಗಳನ್ನಾಗಿಯೂ ಪರಿವರ್ತಿಸಬಹುದು. ಆದರೆ, ಇದಕ್ಕೆ ಮನಸ್ಸು ಮಾಡಬೇಕಾಗಿದೆ.

ಮಾರುಕಟ್ಟೆ ಮತ್ತು ಸಮಸ್ಯೆಗಳು ಒಂದೇ ನಾಣ್ಯದ ಎರಡು ಮುಖಗಳು ಎನ್ನುವಷ್ಟರಮಟ್ಟಿಗೆ ಮಾರುಕಟ್ಟೆಗಳ ಸ್ಥಿತಿ ತಲುಪಿದೆ. ಒತ್ತುವರಿ, ಉಪಗುತ್ತಿಗೆ, ಕಸ ವಿಲೇವಾರಿ, ಪ್ಲಾಸ್ಟಿಕ್‌ ಬಳಕೆ, ಹದಗೆಟ್ಟ ರಸ್ತೆ ಹೀಗೆ ಹಲವಾರು ಸಮಸ್ಯೆಗಳಿಂದ ನಲುಗುತ್ತಿವೆ. ಇದಕ್ಕಾಗಿ ಬಿಬಿಎಂಪಿ ಮೇಜರ್‌ ಸರ್ಜರಿ ಮಾಡಬೇಕಾದ ಅವಶ್ಯಕತೆ ಇದೆ ಎನ್ನುತ್ತಾರೆ ತಜ್ಞರು.

ಬಿಬಿಎಂಪಿ 2018-19ರ ಬಜೆಟ್‌ನಲ್ಲಿ ವಾಣಿಜ್ಯ ಕಟ್ಟಡಗಳು ಸೇರಿದಂತೆ ನಗರದ ಮಾರುಕಟ್ಟೆಗಳಿಂದ 90 ಕೋಟಿ ರೂ. ಆದಾಯ ಸಂಗ್ರಹಿಸುವ ಗುರಿ ಹಾಕಿಕೊಂಡಿತ್ತು. ಆದರೆ, ಸಂಗ್ರಹವಾಗಿರುವುದು 35 ಕೋಟಿ ರೂ. ಮಾತ್ರ! ಬಿಬಿಎಂಪಿ ಮಳಿಗೆಗಳಿಂದ ಎಷ್ಟು ಸರ್ಮಪಕವಾಗಿ ಹಣ ಸಂಗ್ರಹಣೆ ಮಾಡುತ್ತಿದೆ ಎನ್ನುವುದಕ್ಕೆ ಇದೊಂದು ಉದಾಹರಣೆಯಷ್ಟೇ. ಓಬೀರಾಯನ ಕಾಲದ ಪದ್ಧತಿ ಅಳವಡಿಸಿಕೊಂಡಿದ್ದು, ಪ್ರಸ್ತುತ ಬಾಡಿಗೆ ದರಕ್ಕೆ ಸಂಬಂಧಪಟ್ಟಂತೆ ಅದನ್ನು ಪರಿಷ್ಕರಿಸಿಲ್ಲ. ವಸೂಲಿಯೂ ಸರಿಯಾಗಿ ಆಗುತ್ತಿಲ್ಲ. ಹೀಗಾಗಿ, ಬಿಬಿಎಂಪಿಗೆ ಪ್ರತಿ ವರ್ಷ ಕೋಟ್ಯಂತರ ರೂ. ಆದಾಯ ಕೈತಪ್ಪುತ್ತಿದೆ.

ಇನ್ನು ಪ್ಲಾಸ್ಟಿಕ್‌ ತ್ಯಾಜ್ಯ ಬೃಹತ್‌ ಪ್ರಮಾಣದಲ್ಲಿ ಮೈದಳೆಯುವಲ್ಲಿ ಸಾರ್ವಜನಿಕರ ಪಾತ್ರವೂ ದೊಡ್ಡದಿದೆ. ಒಮ್ಮೆ ಮಾರುಕಟ್ಟೆಗೆ ಹೋದರೂ ಮನೆಗೆ ಬರುವಾಗ ಹತ್ತಾರು ಪ್ಲಾಸ್ಟಿಕ್‌ ಚೀಲಗಳು ಜತೆಗೆ ಬರುತ್ತವೆ. ಬಳಸಿದ ಪ್ಲಾಸ್ಟಿಕ್‌ ಚೀಲಗಳಲ್ಲಿ ಕೆಲವು ಮಾರುಕಟ್ಟೆಯ ಅಂಗಳದಲ್ಲೇ ಅನಾಥವಾಗುತ್ತವೆ. ಸಾರ್ವಜನಿಕರು ಪ್ಲಾಸ್ಟಿಕ್‌ ಸಮಸ್ಯೆಗೆ ತಾವೇ ಕಡಿವಾಣ ಹಾಕಿಕೊಳ್ಳಬೇಕು. ಇದರಿಂದ ನಗರದ ಮಾರುಕಟ್ಟೆಗಳಲ್ಲಿ ಬಳಸಲಾಗುತ್ತಿರುವ ಪ್ಲಾಸ್ಟಿಕ್‌ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಲಿದೆ.

ಉಪಗುತ್ತಿಗೆ ಹಾವಳಿ?: ಬಿಬಿಎಂಪಿ ಮಾರುಕಟ್ಟೆಯ ಮಳಿಗೆಗಳನ್ನು ಕೆಲವು ವ್ಯಾಪಾರಿಗಳು ಉಪಗುತ್ತಿಗೆ ನೀಡಿ ಹೆಚ್ಚಿನ ಹಣ ಸಂಪಾದಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪವೂ ಇದೆ. ಬಿಬಿಎಂಪಿ ಮಳಿಗೆಗಳನ್ನು ಹಲವು ವರ್ಷಗಳವರೆಗೆ ಭೋಗ್ಯಕ್ಕೆ ನೀಡಲಾಗಿದೆ. ವ್ಯಾಪಾರಿಗಳು ಈ ಮಳಿಗೆಗಳನ್ನು ಉಪಗುತ್ತಿಗೆ ನೀಡಿ ತಮ್ಮ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಬಿಬಿಎಂಪಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ವರದಿ ನೀಡುವುದಷ್ಟೇ ಕೆಲಸ: ಮಾರುಕಟ್ಟೆಗಳಲ್ಲಿ ಅವಘಡಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲು ತೆಗೆದುಕೊಳ್ಳಬೇಕಾದ ಕ್ರಮಗಳಬಗ್ಗೆ ತಿಳಿಸುವಂತೆ ಹೈಕೋರ್ಟ್‌ ಆದೇಶದ ಮೇಲೆ ಅಗ್ನಿಶಾಮಕದಳ ಮಾರುಕಟ್ಟೆಗಳಲ್ಲಿ ಅಗ್ನಿಶಮನ ಸಾಧನ, ಆಂಬ್ಯುಲನ್ಸ್‌, ಅಗ್ನಿಶಾಮಕ ವಾಹನಗಳಿಗೆ ಜಾಗ ಸೇರಿದಂತೆ 19 ಅಂಶಗಳ ಮಾರ್ಗಸೂಚಿಯನ್ನು ಅಳವಡಿಸಿಕೊಳ್ಳಬೇಕಿದೆ ಎಂದು ವರದಿ ನೀಡಿತ್ತು.

ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಹೈಕೋರ್ಟ್‌ ಆದೇಶಿಸಿದೆ. ಆದರೆ, ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲ. ಪರಿಶೀಲಿಸಿ ಮಾರ್ಗಸೂಚಿಗಳನ್ನು ನೀಡುವುದಕಷ್ಟೇ ಅಗ್ನಿಶಾಮಕ ಇಲಾಖೆಗೆ ಅಧಿಕಾರವಿದೆ. ಇದನ್ನು ಪಾಲಿಸುವುದು ಬಿಬಿಎಂಪಿಯ ಕೆಲಸ. ಮಾರುಕಟ್ಟೆಗಳು ಬಿಬಿಎಂಪಿ ಅಧೀನದಲ್ಲಿ ಇರುವುದರಿಂದ ಅವರೇ ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎನ್ನುತ್ತಾರೆ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು.

ವ್ಯಾಪಾರಿಗಳೂ ಬದ್ಧತೆ ಪ್ರದರ್ಶಿಸಲಿ: ಮಾರುಕಟ್ಟೆ ಸ್ವಚ್ಛತೆಗೆ ಸಂಬಂಧಿಸಿದಂತೆ ಸಾರ್ವಜನಿಕರು, ಬಿಬಿಎಂಪಿ ಅಧಿಕಾರಿಗಳಷ್ಟೇ ಜವಾಬ್ದಾರಿಯು ವ್ಯಾಪಾರಿಗಳ ಮೇಲೂ ಇದೆ. ತಾವಿರುವ ಸುತ್ತಲಿನ ಪ್ರದೇಶ ಸ್ವಚ್ಛವಾಗಿ ಮತ್ತು ನಾವು ಪ್ಲಾಸ್ಟಿಕ್‌ ಕೈಚೀಲಗಳನ್ನು ಬಳಸುವುದಿಲ್ಲ ಎಂದು ಪಣ ತೊಡಬೇಕಿದೆ.

ಸ್ಥಳ ನೀಡಿ “ಸ್ಮಾರ್ಟ್‌’ ಕೆಲಸ ಆರಂಭಿಸಿ: ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೃಷ್ಣರಾಜೇಂದ್ರ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಆದರೆ, ಕಾಮಗಾರಿ ನಡೆಯುವಾಗ ವ್ಯಾಪಾರಿಗಳನ್ನು ಎಲ್ಲಿ ಸ್ಥಳಾಂತರಿಸಬೇಕು ಎನ್ನುವುದರ ಬಗ್ಗೆ ಇನ್ನೂ ಯೋಚಿಸಿಲ್ಲ. “ಹಂತ-ಹಂತವಾಗಿ ಸ್ಮಾರ್ಟ್‌ಸಿಟಿ ಕಾಮಗಾರಿ ನಡೆಸಲಾಗುವುದು.

ಏಕಕಾಲಕ್ಕೆ ಕಾಮಗಾರಿ ನಡೆಸುವುದಿಲ್ಲ. ಕಾಮಗಾರಿ ನಡೆಯುವ ಪ್ರದೇಶದಲ್ಲಿ ಇರುವ ವ್ಯಾಪಾರಿಗಳನ್ನು ಮಾರುಕಟ್ಟೆಯ ಇನ್ನೊಂದು ಜಾಗಕ್ಕೆ ಸ್ಥಳಾಂತರಿಸಲಾಗುವುದು’ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ರೀತಿ ಮಾಡಿದರೆ ಮಾದರಿ ಯೋಜನೆಯೂ ಸಮಸ್ಯೆಯಾಗಿ ಬದಲಾಗುವುದರಲ್ಲಿ ಸಂಶಯವಿಲ್ಲ. ಹೀಗಾಗಿ, ಕಾಮಗಾರಿ ಪ್ರಾರಂಭಿಸುವ ಮೊದಲು ಇಲ್ಲಿನ ವ್ಯಾಪಾರಿಗಳಿಗೆ ಜಾಗ ನೀಡಿ ಯೋಜನೆ ಪ್ರಾರಂಭಿಸಬೇಕಿದೆ.

ಮೇಯರ್‌ ಏನಂತಾರೆ?: ನಗರದ ಪಾರಂಪರಿಕ ಮಾರುಕಟ್ಟೆಗಳನ್ನು ಉಳಿಸಿಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಮಾರುಕಟ್ಟೆಯಲ್ಲಿನ ವ್ಯಾಪಾರಿಗಳು ಮತ್ತು ಗ್ರಾಹಕರೂ ಬಿಬಿಎಂಪಿಯೊಂದಿಗೆ ಸಹಕಾರ ನೀಡಬೇಕು ಎನ್ನುತ್ತಾರೆ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌.
ಕೆ.ಆರ್‌.ಮಾರುಕಟ್ಟೆ ಮತ್ತು ರಸೆಲ್‌ ಮಾರುಕಟ್ಟೆಗಳನ್ನು ಸ್ಮಾರ್ಟ್‌ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು.

ಎರಡೂ ಮಾರುಕಟ್ಟೆಗಳಿಗೆ ಯಾವುದೇ ಧಕ್ಕೆಯಾಗದ ರೀತಿಯಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿಗಳು ನಡೆಯಲಿವೆ. ಕೆ.ಆರ್‌.ಮಾರುಕಟ್ಟೆಯ ಕೆಲವು ಭಾಗಗಳು ತುಂಬಾ ಶಿಥಿಲಗೊಂಡಿದ್ದು, ಅವುಗಳನ್ನು ನೆಲಸಮಗೊಳಿಸಿ, ಮರುನಿರ್ಮಾಣ ಮಾಡಬೇಕಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದರು. ಮಾರುಕಟ್ಟೆ ಒತ್ತುವರಿ ತೆರವು ಮತ್ತು ಸ್ವಚ್ಛತೆ ಕಾಪಾಡಿಕೊಳ್ಳುವುದು ಸವಾಲಿನ ಕೆಲಸ.

ಪ್ರತಿ ಬಾರಿ ಮಾರುಕಟ್ಟೆ ಪ್ರದೇಶಗಳಿಗೆ ಭೇಟಿ ನೀಡಿದ ದಿನ ಮಾತ್ರ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಸ್ವಚ್ಛತೆ ಕಾಪಾಡಿಕೊಳ್ಳುತ್ತಿದ್ದಾರೆ. ಅದರ ಮರುದಿನ ಮಾರುಕಟ್ಟೆ ಯಥಾಸ್ಥಿತಿ ತಲುಪುತ್ತಿದೆ. ಇದನ್ನು ನಿಭಾಯಿಸುವುದಕ್ಕೆ ದಂಡ ವಿಧಿಸುವುದೊಂದೇ ಉಪಾಯ ಎನ್ನುವ ಸಲಹೆಗಳು ಬರುತ್ತಿವೆ. ಆದರೆ, ವ್ಯಾಪಾರಿಗಳ ಹಿತದೃಷ್ಟಿಯಿಂದ ಈ ಕ್ರಮ ಕಷ್ಟ. ದಂಡ ಪ್ರಯೋಗವೇ ಕೊನೆಯ ಅಸ್ತ್ರ ಎನ್ನುವಂತಾಗಬಾರದು ಎಂದು ಅಭಿಪ್ರಾಯಪಟ್ಟರು.

ಕಸದ ಡಬ್ಬಿ ನೀಡುವುದಕ್ಕೆ ಚಿಂತನೆ: ಮಾರುಕಟ್ಟೆಗಳಲ್ಲಿ ವ್ಯಾಪಾರಿಗಳು ಕಸವನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಪ್ಪಿಸುವ ಉದ್ದೇಶದಿಂದ ಅವರಿಗೆ ಕಸದ ಡಬ್ಬಿಗಳನ್ನು ನೀಡಲು ಚಿಂತಿಸಲಾಗುತ್ತಿದೆ. ಇದಕ್ಕೆ ಯಾವುದಾದರು ಕಂಪನಿಗಳು ತಮ್ಮ ಸಾಮಾಜಿಕ ಜವಾಬ್ದಾರಿ ಯೋಜನೆಯ ಮೂಲಕ ನೆರವು ನೀಡಿದರೆ ಈ ಯೋಜನೆಯನ್ನು ಜಾರಿ ಮಾಡಬಹುದು ಎಂದು ಮೇಯರ್‌ ಹೇಳಿದರು.

“ಉದಯವಾಣಿ’ ಅಭಿಯಾನಕ್ಕೆ ಮೆಚ್ಚುಗೆ: “ಉದಯವಾಣಿ’ ನಡೆಸಿದ “ಮಾರುಕಟ್ಟೆಗೆಂದು ಕಾಯಕಲ್ಪ’ ಅಭಿಯಾನಕ್ಕೆ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಗರದ ಪಾರಂಪರಿಕ ಮಾರುಕಟ್ಟೆಗಳ ಬಗ್ಗೆ ತಿಳಿಸುವುದರ ಜತೆಗೆ ಅಲ್ಲಿನ ಸಮಸ್ಯೆಗಳನ್ನು “ಉದಯವಾಣಿ’ ಹೊರಗೆಳೆದಿದೆ. ಈ ಸಮಸ್ಯೆಗಳಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

* ಹಿತೇಶ್‌ ವೈ

ಟಾಪ್ ನ್ಯೂಸ್

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

13-

Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ

12-bng

Bengaluru: ಬೈಕ್‌ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು

11-fir

Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್‌ ದಾಖಲು

10-darshan

Renukaswamy case: ದರ್ಶನ್‌ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

13-

Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ

12-bng

Bengaluru: ಬೈಕ್‌ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು

11-fir

Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.