ಕಾಲುವೆಗೆ ತ್ಯಾಜ್ಯ ಹರಿಸುವ ಹೋಟೆಲ್‌ ಬಂದ್‌ ಮಾಡಿಸಿ


Team Udayavani, Jun 17, 2017, 12:42 PM IST

george.jpg

ಬೆಂಗಳೂರು: ರಾಜಕಾಲುವೆಗಳಿಗೆ ತ್ಯಾಜ್ಯ ಹರಿಸುವ ಹೋಟೆಲ್‌ಗ‌ಳಿಗೆ ನೋಟಿಸ್‌ ಜಾರಿಗೊಳಿಸುವಂತೆ, ಆನಂತರವೂ ತ್ಯಾಜ್ಯ ನೀರನ್ನು ಕಾಲುವೆಗಳಿಗೆ ಹರಿಸುವ ಹೋಟೆಲ್‌ಗ‌ಳನ್ನು ಶಾಶ್ವತವಾಗಿ ಬಂದ್‌ ಮಾಡುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಆದೇಶಿಸಿದ್ದಾರೆ. 

ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶುಕ್ರವಾರ ಪರಿಶೀಲಿಸುತ್ತಿದ್ದ ವೇಳೆ, ರಾಜಕಾಲುವೆಗೆ ಹೋಟೆಲ್‌ ತ್ಯಾಜ್ಯವನ್ನು ಹರಿಸುತ್ತಿರುವುದನ್ನು ಕಂಡ ಅವರು, ಕೂಡಲೇ ಎಲ್ಲ ಹೋಟೆಲ್‌ ಮಾಲೀಕರಿಗೆ ನೋಟಿಸ್‌ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನೋಟಿಸ್‌ ನೀಡಿದ ನಂತರವೂ ತ್ಯಾಜ್ಯ ಹರಿಸಿದರೆ ಹೋಟೆಲ್‌ಗ‌ಳನ್ನು ಶಾಶ್ವತವಾಗಿ ಬಂದ್‌ ಮಾಡಿಸಿ ಎಂದರು. 

ಶಿವಾಜಿನಗರ ಕ್ಷೇತ್ರದಲ್ಲಿ ಆಸ್ಪತ್ರೆ, ಶಾಲೆ, ಸಮುದಾಯ ಭವನ ನಿರ್ಮಾಣಕ್ಕೆ 29 ಕೋಟಿ ರೂ. ಅನುದಾನ ನೀಡಲಾಗಿದೆ. ಈ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಆರಂಭಿಸಲಾಗುವುದು. ಭಾರತಿನಗರದಲ್ಲಿ 700 ಮಕ್ಕಳು ಓದುತ್ತಿರುವ ಶಾಲಾ ಕಟ್ಟಡ ಶಿಥಿಲಗೊಂಡಿರುವುದರಿಂದರಿಂದ ಮಕ್ಕಳು ಶಾಲೆ ತೊರೆದಿದ್ದಾರೆ. ಅದರ ಹಿನ್ನೆಲೆಯಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ ಎಂದರು. 

ಇದರೊಂದಿಗೆ ತಿಮ್ಮಯ್ಯ ರಸ್ತೆಯಲ್ಲಿರುವ ಹೆರಿಗೆ ಆಸ್ಪತ್ರೆ ಮತ್ತು ಸಮುದಾಯ ಭವನವನ್ನು ನವೀಕರಿಸಲಾಗುತ್ತಿದ್ದು, ಕಮರ್ಷಿಯಲ್‌ ಸ್ಟ್ರೀಟ್‌ಗೆ ನಿತ್ಯ ಸಾವಿರಾರು ಜನರು ಬಂದು ಹೋಗುವ ಹಿನ್ನೆಲೆಯಲ್ಲಿ ಈ ರಸ್ತೆಯನ್ನು ಟೆಂಡರ್‌ಶ್ಯೂರ್‌ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಜಾರ್ಜ್‌ ಭರವಸೆ ನೀಡಿದರು.

ಜಾಹೀರಾತು ಕಂಡು ಕೆಂಡವಾದ ಜಾರ್ಜ್‌!: ಶಿವಾಜಿನಗರದಲ್ಲಿ ಪರಿಶೀಲನಾ ಕಾರ್ಯ ನಡೆಸುವ ವೇಳೆ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ ಅಳವಡಿಸಲಾಗಿರುವ ಅನಧಿಕೃತ ಜಾಹಿರಾತು ಫ‌ಲಕಗಳನ್ನು ಕೆಂಡವಾದರು. ಕೂಡಲೇ ಅವುಗಳನ್ನು ತೆರವುಗೊಳಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ ಅವರು, ಅನಧಿಕೃತ ಜಾಹೀರಾತು ಫ‌ಲಕಗಳನ್ನು ತೆರವುಗೊಳಿಸಿ ವರದಿ ಸಲ್ಲಿಸಬೇಕು ಎಂದು ತಿಳಿಸಿದರು. 

ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿರುವ ಅನಧಿಕೃತ ಜಾಹೀರಾತು ಫ‌ಲಕಗಳನ್ನು ಅಂಗಡಿಯವರೇ ತೆರವುಗೊಳಿಸಬೇಕು. ಇಲ್ಲದಿದ್ದರೆ ಪಾಲಿಕೆಯಿಂದ ನೋಟಿಸ್‌ ಜಾರಿಗೊಳಿಸಿ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುವುದು. 
– ಎನ್‌. ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-water-price

Water Price Hike: ಬಸ್‌ ದರ ಏರಿಕೆ ಬೆನ್ನಲ್ಲೇ ನೀರಿನ ಬೆಲೆ ಹೆಚ್ಚಳ ಬಿಸಿ?

19-bng

Cyber ಕೈಚಳಕ: 2.47 ಕೋಟಿ ರೂ. ವಂಚನೆ

18-bng

Bengaluru: ಪೊಲೀಸ್‌ ಮೇಲೆ ಹಲ್ಲೆ ನಡೆಸಿದ್ದ ವಿದೇಶಿ ಪ್ರಜೆ ಸೆರೆ

17-bng

Bengaluru: ಅನಧಿಕೃತ ಕಾಲ್‌ಸೆಂಟರ್‌ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

16-bng

Bengaluru: ಪ್ರೀತಿಸಿದವಳು ದೂರಾಗಿದ್ದಕ್ಕೆ ಯುವಕ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.