ಮೇಕೆದಾಟು: ಆಕ್ಷೇಪ ಪರಿಗಣಿಸದಿದ್ದರೆ ಪ್ರತಿಭಟನೆ
Team Udayavani, Dec 26, 2018, 7:46 AM IST
ಬೆಂಗಳೂರು/ಪುದುಚೇರಿ: ಮೇಕೆದಾಟುವಿನಲ್ಲಿ ಕರ್ನಾಟಕ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟಿಗೆ ವಿರುದ್ಧವಾಗಿ ಪುದುಚೇರಿ ಹಾಗೂ ತಮಿಳುನಾಡು ಸರ್ಕಾರಗಳು ಸಲ್ಲಿಸಿರುವ ಆಕ್ಷೇಪಗಳಿಗೆ ಕೇಂದ್ರ ಸರ್ಕಾರ ಗಮನ ಹರಿಸದಿದ್ದರೆ ಈ ರಾಜ್ಯಗಳ ರೈತರಿಂದ ದೊಡ್ಡ ಮಟ್ಟದ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಅಣೆಕಟ್ಟು ವಿಚಾರದಲ್ಲಿ ಕಾವೇರಿ ನದಿ ನೀರಿಗೆ ಸಂಬಂಧಪಟ್ಟ ರಾಜ್ಯಗಳಿಗೆ ಅನ್ಯಾಯವಾಗುತ್ತದೆಂಬ ವಿಚಾರವನ್ನು ಕೇಂದ್ರ ಸರ್ಕಾರ ಹಾಗೂ ಕರ್ನಾಟಕ ಸರ್ಕಾರ ಕಡೆಗಣಿಸುತ್ತಿವೆ. ಮೇಕೆದಾಟು ಯೋಜನಾ ವರದಿ ಸಲ್ಲಿಸುವಂತೆ ಕೇಂದ್ರ ಜಲ ಆಯೋಗ ಕರ್ನಾಟಕಕ್ಕೆ ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಪಟ್ಟ ಎಲ್ಲಾ ರಾಜ್ಯಗಳ ಲೋಕೋಪಯೋಗಿ ಇಲಾಖೆಗಳು ಹಾಗೂ ಕೃಷಿ ಇಲಾಖೆಗಳ ಕಾರ್ಯದರ್ಶಿ ಮಟ್ಟದ ಸಭೆಯೊಂದನ್ನು ನಡೆಸುವಂತೆ ಕೇಂದ್ರ ಜಲ ಆಯೋಗಕ್ಕೆ (ಸಿಡಬ್ಲೂಸಿ) ಆಗ್ರಹಿಸಿದ್ದಾರೆ. ಈ ನಡುವೆ, ಕೊಯಮತ್ತೂರಿನಲ್ಲಿ ಮಾತನಾಡಿದ ತಮಿಳುನಾಡು ಬಿಜೆಪಿ ಅಧ್ಯಕ್ಷೆ ತಮಿಳ್‌ಸಾಯ್ ಸೌಂದರರಾಜನ್, “”ಮೇಕೆದಾಟು ಯೋಜನೆಯ ಬಗ್ಗೆ ಡಿಎಂಕೆಯ ನಿಲುವೇನು? ಮೇಕೆದಾಟು ವಿವಾದವನ್ನು ಡಿಎಂಕೆ ಕಾರ್ಯಾಧ್ಯಕ್ಷ ಸ್ಟಾಲಿನ್ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಲ್ಲಿ
ಚರ್ಚಿಸಿದ್ದಾರೆಯೇ? ಹಾಗೊಮ್ಮೆ ಚರ್ಚಿಸಿದ್ದರೆ ಚರ್ಚೆಯ ಫಲಶ್ರುತಿಯೇನು? ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷರು ಕರ್ನಾಟಕದ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಯೋಜನೆಯ ವಿವಾದದ ಬಗ್ಗೆ ಚರ್ಚಿಸಿದ್ದಾರೆಯೇ?” ಎಂಬ ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಜತೆಗೆ, ಯೋಜನೆಯ ಬಗೆಗಿನ ತಮ್ಮ ನಿಲುವಿನ ಬಗ್ಗೆ ಡಿಎಂಕೆ ನಾಯಕ ಸ್ಟಾಲಿನ್ ಸ್ಟಷ್ಟನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು
Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್; ವಶಕ್ಕೆ ಪಡೆದುಕೊಂಡ ಪೊಲೀಸರು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.