ಮಂಗಳೂರು ಏರ್‌ಪೋರ್ಟ್ ರನ್‌ವೇ ವಿಸ್ತರಣೆ
Team Udayavani, Feb 15, 2017, 12:21 PM IST
ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ. ನಗರದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಮೇಕ್ ಇನ್ ಇಂಡಿಯಾ ಸಮ್ಮೇಳನದ ಸಮಾರೋಪ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
“ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಯೋಜನೆಗೆ ಚಾಲನೆ ನೀಡುವ ಬಗ್ಗೆ ಮಂಗಳವಾರ ನಾಗರಿಕ ವಿಮಾನಯಾನ ಸಚಿವ ಗಜಪತಿ ರಾಜು ಅವರೊಂದಿಗೆ ಸುಧೀರ್ಘ ಮಾತುಕತೆ ನಡೆಸಲಾಗಿದೆ. ರನ್‌ವೇ ವಿಸ್ತರಣೆಗೆ ಬೇಕಾಗುವ ಸುಮಾರು 190 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಸಿದ್ಧವಿದ್ದು, ತ್ವರಿತ ಗತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು,” ಎಂದು ತಿಳಿಸಿದರು.
“ಈ ಹಿನ್ನೆಲೆಯಲ್ಲಿ ರನ್‌ವೇ ವಿಸ್ತರಣೆ ಕಾಮಗಾರಿ ಚಾಲನೆಗೆ ಅಗತ್ಯ ಮಂಜೂರಾತಿ ನೀಡುವಂತೆ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಮನವಿ ಮಾಡಲಾಗುವುದು. ನಿಲ್ದಾಣದ ರನ್‌ವೇ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ವಿಮಾನಯಾನ ಸಚಿವರು ಕೂಡ ಭರಸವೆ ನೀಡಿದ್ದಾರೆ,” ಎಂದು ತಿಳಿಸಿದರು.
“ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ಮಾಣದ ಕಾಮಗಾರಿ ಕೂಡ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ವಿಮಾನಗಳ ಹಾರಾಟ ಪ್ರಾರಂಭಿಸುವ ಭರವಸೆ ನೀಡಿದ್ದಾರೆ. ಆದರೆ, ಈ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಪ್ರಾರಂಭಿಸುವುದಕ್ಕೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಕೆಲವೊಂದು ತಾಂತ್ರಿಕ ಅನಮತಿ ನೀಡುವುದು ಬಾಕಿಯಿದೆ. ಈ ಬಗ್ಗೆಯೂ ವಿಮಾನಯಾನ ಸಚಿವರ ಜತೆಗೆ ಮಾತುಕತೆ ನಡೆಸಿದ್ದು, ಅನುಮತಿ ಲಭಿಸಿದ ತಕ್ಷಣ ಹುಬ್ಬಳ್ಳಿ ನಿಲ್ದಾಣದಿಂದಲೂ ವಿಮಾನಗಳ ಹಾರಾಟ ಪ್ರಾರಂಭವಾಗಲಿದೆ,” ಎಂದು ಭರಸವೆ ನೀಡಿದರು.
“ಹುಬ್ಬಳ್ಳಿ, ಗುಲ್ಬರ್ಗ ಹೊರತಾಗಿ ಕೊಡಗು, ಬಳ್ಳಾರಿ, ಚಿಕ್ಕಮಗಳೂರಿನಂಥಹ ನಗರಗಳಲ್ಲಿಯೂ ವಿಮಾನಯಾನ ಸೇವೆ ಪ್ರಾರಂಭಿಸುವುದಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಗಮನಹರಿಸುತ್ತಿದೆ. ಈ ಹಿನ್ನೆಲೆಯಲ್ಲಿ ತೋರಣಗಲ್‌ನಲ್ಲಿ ಖಾಸಗಿ ವಿಮಾನ ನಿಲ್ದಾಣ ಬಳಸಿಕೊಂಡು ವಿಮಾನಯಾನ ಸೇವೆ ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ತೋರಣಗಲ್‌ನ ಜೆಎಸ್‌ಡಬ್ಲ್ಯು ಖಾಸಗಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವುದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆಯೂ ವಿಮಾನಯಾನ ಸಚಿವರ ಜತೆಗೆ ಚರ್ಚಿಸಲಾಗಿದೆ. ಅಲ್ಲದೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2ನೇ ರನ್‌ವೇ ನಿರ್ಮಿಸುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ,” ಎಂದು ಹೇಳಿದರು.
ನಗರದಲ್ಲಿ ನಡೆದ ಎರಡು ದಿನಗಳ “ಮೇಕ್ ಇನ್ ಇಂಡಿಯಾ’ ಉದ್ದಿಮೆದಾರರ ಸಮ್ಮೇಳನಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಏರೋಸ್ಪೇಸ್, ಮೆಷಿನ್ ಟೂಲ್ಸ್, ಜವಳಿ, ರಕ್ಷಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ಹಲವು ಕಂಪನಿಗಳು ಮುಂದೆ ಬಂದಿವೆ. ಈ ಸಮ್ಮೇಳನದಲ್ಲಿ ವಿವಿಧ ಆದ್ಯತಾ ವಲಯಗಳ ಬಗ್ಗೆ ಸುಮಾರು 500ಕ್ಕೂ ಹೆಚ್ಚು ಬಿ2ಬಿ ಸಭೆಗಳನ್ನು ನಡೆಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.