ಮಂಗಳೂರು ಸ್ಮಾರ್ಟ್ಸಿಟಿ: ಸೆಂಟ್ರಲ್ ಕಮಾಂಡ್ ಸೆಂಟರ್ಗೆ ಒಪ್ಪಿಗೆ
Team Udayavani, Mar 3, 2018, 6:15 AM IST
ಬೆಂಗಳೂರು: ಕೇಂದ್ರ-ರಾಜ್ಯ ಸರಕಾರದ ಅನುದಾನದಿಂದ ಅನುಷ್ಠಾನವಾಗಲಿರುವ ಮಂಗಳೂರು ಸ್ಮಾರ್ಟ್ಸಿಟಿ ಯೋಜನೆಗೆ ಪ್ರತಿಷ್ಠಿತ ಯೋಜನೆಯಾದ ಬಹುನಿರೀಕ್ಷಿತ “ಸೆಂಟ್ರಲ್ ಕಮಾಂಡ್ ಸೆಂಟರ್’ ನಿರ್ಮಾಣಕ್ಕೆ ಶುಕ್ರವಾರ ಅಂಗೀಕಾರ ದೊರೆತಿದೆ. ಸ್ಮಾರ್ಟ್ಸಿಟಿ ಸಂಬಂಧ ಇಲ್ಲಿ ಆಯೋಜಿಸಲಾದ ಎಸ್ಪಿವಿ ಉನ್ನತ ಮಟ್ಟದ ಸಭೆಯಲ್ಲಿ ಈ ಅಂಗೀಕಾರ ದೊರಕಿದ್ದು, ಶೀಘ್ರದಲ್ಲಿ ಇದರ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ.
ಎ.ಬಿ. ಶೆಟ್ಟಿ ವೃತ್ತದಿಂದ ಕ್ಲಾಕ್ ಟವರ್ ವರೆಗಿನ ರಸ್ತೆಯನ್ನು ಈಗಾಗಲೇ ಸ್ಮಾರ್ಟ್ ಸಿಟಿ ರಸ್ತೆಯನ್ನಾಗಿ ರೂಪಿಸಲು ಒಪ್ಪಿಗೆ ದೊರಕಿದ್ದು, ಇದಕ್ಕೆ ಪೂರಕವಾಗಿ ಪುರಭವನದ ಮುಂಭಾಗದಿಂದ ರೈಲ್ವೇ ನಿಲ್ದಾಣ ರಸ್ತೆಗೆ ಪ್ರವೇಶ ಪಡೆಯಲು ಅತ್ಯಾಕರ್ಷಕ ಅಂಡರ್ಪಾಸ್ ನಿರ್ಮಾಣಕ್ಕೆ ಕಾನ್ಸೆಪ್ಟ್ ಪ್ಲಾನ್ ರೂಪಿಸಲಾಗಿದ್ದು, ಇದಕ್ಕೆ ಸಭೆಯಲ್ಲಿ ಒಪ್ಪಿಗೆ ದೊರಕಿದೆ. ಜತೆಗೆ ಪಂಪ್ವೆಲ್ ಬಸ್ ನಿಲ್ದಾಣವನ್ನು ಪಿಪಿಪಿ ಮಾದರಿಯಲ್ಲಿ ಐಟಿಡಿಟಿ ಅವರಿಂದ ವರದಿ ತರಿಸಿಕೊಳ್ಳಲು ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಹಂಪನಕಟ್ಟೆಯಲ್ಲಿ ಈಗಾಗಲೇ ಆರಂಭಿಸಿರುವ ಕ್ಲಾಕ್ ಟವರ್ ಯೋಜನೆಗೆ ಸ್ಮಾರ್ಟ್ಸಿಟಿ ಅನುದಾನದಲ್ಲಿಯೇ ಹಣ ಮೀಸಲಿಡಲು ನಿರ್ಧರಿಸಲಾಯಿತು. ಇದಕ್ಕಾಗಿ 90 ಲಕ್ಷ ರೂ. ವೆಚ್ಚಕ್ಕೆ ಅನುಮೋದನೆ ದೊರಕಿದೆ. ಎಸ್ಪಿವಿ ಉನ್ನತ ಮಟ್ಟದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹೇಮಲತಾ, ಪ್ರಮುಖ ಅಧಿಕಾರಿಗಳಾದ ವಿಶಾಲ್, ಎ.ಬಿ. ಇಬ್ರಾಹಿಂ, ಮಂಗಳೂರು ಮೇಯರ್ ಕವಿತಾ ಸನಿಲ್, ಸದಸ್ಯರಾದ ಶಶಿಧರ ಹೆಗ್ಡೆ, ಪ್ರೇಮಾನಂದ ಶೆಟ್ಟಿ, ಆಯುಕ್ತ ಮೊಹಮ್ಮದ್ ನಝೀರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.