ಮಣಿಪಾಲ ಆಸ್ಪತ್ರೆಯಿಂದ ಕಿಡ್ನಿ ಜಾಗೃತಿ ಅಭಿಯಾನ


Team Udayavani, Mar 8, 2017, 12:37 PM IST

anipal].jpg

ಬೆಂಗಳೂರು: ವಿಶ್ವ ಮೂತ್ರಪಿಂಡ ದಿನಾಚರಣೆಯನ್ನು ಮಣಿಪಾಲ್‌ ಆಸ್ಪತ್ರೆಯು “ಅರೋಗ್ಯವಂತ ಜೀವನಶೈಲಿಗಾಗಿ ಅರೋಗ್ಯಯುತ ಮೂತ್ರಪಿಂಡಗಳು’ ಎಂಬ ಧ್ಯೇಯದೊಂದಿಗೆ ವಿಶೇಷ ಅಭಿಯಾನ ರೂಪದಲ್ಲಿ ಮಂಗಳವಾರ ಆಚರಿಸಿತು. 

ಅಭಿಯಾನದ ಅಂಗವಾಗಿ ಶೇ.30ಕ್ಕಿಂತಲೂ ಹೆಚ್ಚಿನ “ಭೌತಿಕ ದ್ರವ್ಯರಾಶಿ ಸೂಚಿ’ (ಬಾಡಿ ಮಾಸ್‌ ಇಂಡೆಕ್ಸ್‌) ಹೊಂದಿರುವ ಮೂತ್ರಪಿಂಡ ರೋಗಿಗಳಿಗೆ ನೂರು ಉಚಿತ ಸಲಹಾ ಸೇವೆಗಳು ಮತ್ತು ಉಚಿತ ತಪಾಸಣೆ ನಡೆಸಲಾಯಿತು. ತನ್ನ ಈ ಸೇವೆಯನ್ನು ಆಸ್ಪತ್ರೆಯು ಪೊಲೀಸ್‌ ಸಿಬ್ಬಂದಿಗೆ ಮೀಸಲಿಟ್ಟಿತು. ಜೊತೆಗೆ ಮೂತ್ರಪಿಂಡ ರೋಗಿಗಳ ಅನುಕೂಲಕ್ಕಾಗಿ ಹಲವು ಪ್ಯಾಕೇಜ್‌ಗಳನ್ನೂ ಇದೇ ವೇಳೆ ಪ್ರಕಟಿಸಿತು. 

ಹೆಚ್ಚುವರಿ ಪೊಲೀಸ್‌ ಆಯುಕ್ತರಾದ ಮಾಲಿನಿ ಕೃಷ್ಣಮೂರ್ತಿ, ಬಾಲಿವುಡ್‌ ನಟಿ ಕೊಂಕಣ ಸೆನ್‌, ಮಣಿಪಾಲ್‌ ಆಸ್ಪತ್ರೆಯ ಅಧ್ಯಕ್ಷ ಡಾ. ಸುದರ್ಶನ್‌ ಬಲ್ಲಾಳ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮೂತ್ರಪಿಂಡ ಕಾಯಿಲೆಗೆ ತುತ್ತಾದವರು ಮತ್ತು ಗುಣಮುಖರಾದವರು ಹಾಗೂ ಮೂತ್ರಪಿಂಡ ಕಸಿ ಮಾಡಿಸಿಕೊಂಡವರು ತಮ್ಮ ಅನುಭವಗಳನ್ನು ಈ ವೇಳೆ ಹಂಚಿಕೊಂಡರು. 

ಮಾಲಿನಿ ಕೃಷ್ಣಮೂರ್ತಿ ಮಾತನಾಡಿ, “ದೈಹಿಕ ದೃಢತೆ ಹೊಂದಿರುವುದು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಪೌಷ್ಟಿಕ ಆಹಾರ ಸೇವನೆ ಮತ್ತು ನಿಗದಿತ ವ್ಯಾಯಾಮವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮಹತ್ವ ಅರಿಯಬೇಕು. ಆ ಮೂಲಕ ರೋಗಗಳನ್ನು ದೂರವಿಡಬಹುದು. ಈ ಸಂದೇಶವನ್ನು ವ್ಯಾಪಕವಾಗಿ ಪ್ರಸಾರ ಮಾಡುತ್ತಿರುವ ಮಣಿಪಾಲ್‌ ಆಸ್ಪತ್ರೆಯೊಂದಿಗೆ ಸಹಯೋಗ ಹೊಂದುವುದು ಗೌರವದ ಸಂಗತಿ,”ಎಂದರು.
 
ಬಾಲಿವುಡ್‌ ನಟಿ ಕೊಂಕಣ ಸೆನ್‌ ಮಾತನಾಡಿ, “ಸಾಮಾಜಿಕ ಕಳಕಳಿಯಿಂದ ಸೇವೆ ಮಾಡುತ್ತಿರುವ ಮಣಿಪಾಲ್‌ ಆಸ್ಪತ್ರೆಗೆ ಪೂರ್ಣವಾಗಿ ಬೆಂಬಲ ನೀಡುತ್ತೇನೆ,” ಎಂದರು. ಮಣಿಪಾಲ್‌ ಆಸ್ಪತ್ರೆಯ ಅಧ್ಯಕ್ಷ ಡಾ. ಸುದರ್ಶನ್‌ ಬಲ್ಲಾಳ್‌ ಮಾತನಾಡಿ, “ಬೊಜ್ಜುಮೈ ಮೂತ್ರಪಿಂಡ ಕಾಯಿಲೆಯನ್ನು ದೀರ್ಘ‌ಕಾಲದ ರೋಗವನ್ನಾಗಿ ಪರಿವರ್ತಿಸುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ 2025ರ ವೇಳೆಗೆ ವಿಶ್ವವ್ಯಾಪಿ ಶೇ. 18ರಷ್ಟು ಪುರುಷರು, ಶೇ.21ಕ್ಕಿಂತಲೂ ಹೆಚ್ಚು ಮಹಿಳೆಯರಿಗೆ ಬೊಜ್ಜು ಮೈ ತೊಂದರೆ ಕಾಡಲಿದೆ.

ಅಲ್ಲದೆ ತೀವ್ರ ರೀತಿಯ ಬೊಜ್ಜು ಮೈ ತೊಂದರೆ ಜಗತ್ತಿನ ಶೇ.6ರಷ್ಟು ಪುರುಷರು ಮತ್ತು ಶೇ.9ರಷ್ಟು ಮಹಿಳೆಯರನ್ನು ಕಾಡಲಿದೆ. ಇದು ಒಟ್ಟಾರೆ ಕಳಪೆ ಆರೋಗ್ಯ ಮತ್ತು ಉನ್ನತ ವಾರ್ಷಿಕ ವೈದ್ಯಕೀಯ ವೆಚ್ಚಗಳ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತಿದೆ. ಹಾಗಾಗಿ ಈ ವಿಚಾರದಲ್ಲಿ ಕಾಳಜಿ ಅಗತ್ಯ,” ಎಂದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.