“…ಮಂಜುಳಗಾನ’ ಶ್ರೇಷ್ಠ ಕಾರ್ಯಕ್ರಮ

Team Udayavani, Jun 19, 2017, 12:32 PM IST

maheshjoshi08b.jpg

ಬೆಂಗಳೂರು: “ಕ್ಯಾಮೆರಾ ಎದುರಿಸದ, ಮೈಕ್‌ ಹಿಡಿಯದ ಅನಕ್ಷರಸ್ಥರು, ದುರ್ಬಲವರ್ಗದವರು, ಮಂಗಳಮುಖೀಯರು, ವೇಶ್ಯೆಯರು ಸೇರಿದಂತೆ ಎಲೆಮರೆಕಾಯಿಯಂತಿದ್ದ ಪ್ರತಿಭೆಗಳಿಗೆ “ಮಧುರ ಮಧುರವೀ ಮಂಜುಳಗಾನ…’ ಮೂಲಕ ವೇದಿಕೆ ಕಲ್ಪಿಸಿದ್ದು ನನ್ನ ಜೀವನದ ಪ್ರಮುಖ ಘಟ್ಟ’ ಎಂದು ದೂರರ್ಶನ ದಕ್ಷಿಣ ಭಾಗದ ಹೆಚ್ಚವರಿ ನಿರ್ದೇಶಕ ನಾಡೋಜ ಡಾ. ಮಹೇಶ್‌ ಜೋಶಿ ಹೇಳಿದರು. 

ಭಾನುವಾರ ದಯಾನಂದಸಾಗರ ಕಾಲೇಜಿನಲ್ಲಿ  ಮಹೇಶ್‌ ಜೋಶಿ ಅಭಿಮಾನಿ ಬಳಗ ಆಯೋಜಿಸಿದ್ದ” ಷಷ್ಠ್ಯಭ್ಧಿ ಅಭಿನಂದನಾ’ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಚಂದನ ವಾಹಿನಿಯಲ್ಲಿ ನಾನು ರೂಪಿಸಿದ ಮಧುರ ಮಧುರವೀ ಮಂಜುಳಗಾನ ನನ್ನ ಜೀವನದ ಪ್ರಮುಖ ಘಟ್ಟ. ಅದು ಬೆಂಗಳೂರಿಗೆ ಸೀಮಿತವಾಗದೇ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ಗಳಿಸಿದ್ದು ಅವಿಸ್ಮರಣೀಯ,’ ಎಂದರು. 

“ಏರುಪೇರಿನಿಂದ ಕೂಡಿದ ಬಾಳಪಯಣ ಬದುಕಿಗೆ ಜೀವಂತಿಕೆ, ಪ್ರಬುದ್ಧತೆ ತಂದುಕೊಟ್ಟಿದೆ. ಜೀವನದ ಪಯಣವೇ ಕುರುಕ್ಷೇತ್ರದಂತೆ ಸಾಗುತ್ತಿದ್ದಾಗ ಬೆನ್ನೆಲುಬಾಗಿ ಸಹಕರಿಸಿದ ಅಭಾರಿಯಾಗಿರುವೆ. ಜೂನ್‌ 30ರಂದು ಸೇವೆಯಿಂದ ನಿವೃತ್ತನಾದರೂ ಕನ್ನಡ, ಕನ್ನಡಿಗರ ಸೇವೆ ಮುಂದುವರಿಸುತ್ತೇನೆ. ಅದಕ್ಕೆ ಎಲ್ಲರ ಸಹಕಾರ ಬೇಕು,’ ಎಂದು ಕೋರಿದರು. 

ಸುಪ್ರೀಂಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ವೆಂಕಟಾಚಲಯ್ಯ ಮಾತನಾಡಿ, “ಸದಾ ಕ್ರೀಯಾಶೀಲವಾಗಿ, ಪ್ರಾಮಾಣಿಕ ಹಾಗೂ ಬದ್ಧತೆಯಿಂದ ಮಹೇಶ್‌ ಜೋಶಿ ಕೆಲಸ ಮಾಡುತ್ತಾರೆ. ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅನೇಕ ಕಾರ್ಯಕ್ರಮಗಳನ್ನು ಜೋಶಿ ಕೊಟ್ಟಿದ್ದಾರೆ. ಅವರ ಈ ಸೇವೆ ಮತ್ತಷ್ಟು ಮುಂದುವರಿಯಲಿ,’ ಎಂದು ಹಾರೈಸಿದರು. 
ಮಾಜಿ ಸಚಿವ ಪಿ.ಜಿ ಆರ್‌ ಸಿಂಧ್ಯಾ ಮಾತನಾಡಿ, ” ಕನ್ನಡ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ದೆಹಲಿಗೆ ತಲುಪಿಸಿದ ಸಾಧಕ ಜೋಶಿ. ಅರವತ್ತರ ಪ್ರಾಯದಲ್ಲೂ 20ರ ತರುಣರ ಉತ್ಸಾಹದಲ್ಲಿ ಅವರು ಜವಾಬ್ದಾರಿ ನಿರ್ವಹಿಸುತ್ತಾರೆ’ ಎಂದರು. 

ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲಸ್ವಾಮೀಜಿ, ಚನ್ನಗಿರಿ ಮಠದ ಬಸವಲಿಂಗಸ್ವಾಮೀಜಿ, ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್‌ ವೆಂಕಟಾಚಲಯ್ಯ, ನ್ಯಾ. ವಿ ಗೋಪಾಲಗೌಡ, ಶಿವರಾಜ್‌ ಪಾಟೀಲ್‌, ಹೈಕೋರ್ಟ್‌ನ ನ್ಯಾಯಮೂರ್ತಿ ರವಿ ಮಳೀಮಠ,  ನಿವೃತ್ತ ರಾಜ್ಯಪಾಲ ರಾಮಜೋಯಿಸ್‌, ಡಿಜಿಪಿ ಆರ್‌.ಕೆ ದತ್ತಾ, ಮಾಜಿ ಸಚಿವೆಯರಾದ ಬಿ.ಟಿ ಲಲಿತಾನಾಯಕ್‌, ಲೀಲಾವತಿ ಪ್ರಸಾದ್‌ರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. 

ಪ್ರಧಾನಿ ಮೋದಿಯಿಂದ ಅಭಿನಂದನೆ: ಷಷ್ಠ್ಯಭ್ಧಿಯ ಸಂಭ್ರಮದಲ್ಲಿರುವ ಜೋಶಿಯವರಿಗೆ ಪ್ರಧಾನಿ ನರೇಂದ್ರಮೋದಿ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ, ಸಿಎಂ ಸಿದ್ದರಾಮಯ್ಯ,  ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರೀ ದೇಶಿಕೇಂದ್ರ ಸ್ವಾಮೀಜಿ, ನಿರ್ಮಲಾನಂದ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಪತ್ರದ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.