ಬೆಂಗಳೂರಿಗೆ ಇಂದು ಮನಮೋಹನ ಸಿಂಗ್
Team Udayavani, Oct 4, 2017, 11:43 AM IST
ಬೆಂಗಳೂರು: ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮಾದರಿಯಲ್ಲಿ ಬೆಂಗಳೂರಿನಲ್ಲಿ ಸ್ಥಾಪಿಸಿರುವ ಡಾ.ಬಿ. ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ನ ಶೈಕ್ಷಣಿಕ ಪ್ರಾರಂಭೋತ್ಸವಕ್ಕೆ ಅ.4 ರಂದು ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಚಾಲನೆ ನೀಡಲಿದ್ದಾರೆ.
ಸಂಜೆ 4 ಗಂಟೆಗೆ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್‌ಬಿಐ ನಿವೃತ್ತ ಗವರ್ನರ್ ಡಾ.ಸಿ.ರಂಗರಾಜನ್, ಲೋಕಸಭೆ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಭಾಗವಹಿಸಲಿದ್ದಾರೆ.
ಸ್ವಾಯತ್ತ ಸಂಸ್ಥೆಯಾಗಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 300 ಕೋಟಿ ರೂ. ವೆಚ್ಚದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ನ ರಚನೆ ಮಾಡಿದೆ. 2017-18ನೇ ಸಾಲಿನಲ್ಲಿ 50 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭಿಸಿದ್ದಾರೆ.
ಇಲ್ಲಿ ಕರ್ನಾಟಕದ ಶೇ.60ರಷ್ಟು ಹಾಗೂ ಬೇರೆ ರಾಜ್ಯದ ಶೇ.40ರಷ್ಟು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳಿಗೆ ಶೇ.30ರಷ್ಟು ಮೀಸಲಾತಿಯ ಜತೆಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.