ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಸೇರಲು ಕಾತರ: ಬಿಎಸ್‌ವೈ
Team Udayavani, Aug 28, 2017, 11:25 AM IST
ಬೆಂಗಳೂರು: ಮುಂದಿನ ದಿನಗಳಲ್ಲಿ ಎಲ್ಲರೂ ಅಚ್ಚರಿಪಡುವ ರೀತಿಯಲ್ಲಿ ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ರವಿವಾರ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವರಪ್ರಸಾದ ರೆಡ್ಡಿ ಹಾಗೂ ಅವರ ಬೆಂಬಲಿಗರು, ನಿವೃತ್ತ ಪೊಲೀಸ್ ಉಪ ಆಯುಕ್ತ ಧರ್ಮಯ್ಯ ಮತ್ತು ನಿವೃತ್ತ ಹಣಕಾಸು ಅಧಿಕಾರಿ ಎಂ.ಪಿ. ನಾರಾಯಣಸ್ವಾಮಿ ಮತ್ತಿರರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಅವರು ಮಾತನಾಡಿದರು.
ರಾಜ್ಯದಲ್ಲಿ ಅಧಿಕಾರದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರಕಾರದಿಂದ ಬೇಸತ್ತು ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಸಾಧನೆಗಳನ್ನು ಗಮನಿಸಿ ದೇಶಕ್ಕೆ ಬಿಜೆಪಿಯೇ ಅನಿವಾರ್ಯ ಎಂದು ಭಾವಿಸಿ ಪಕ್ಷಕ್ಕೆ ಸೇರಲು ಮುಖಂಡರ ದೊಡ್ಡ ಸಾಲೇ ನಿಂತಿದೆ. ಮುಂದಿನ ದಿನಗಳಲ್ಲಿ ಎಲ್ಲರಿಗೂ ಅಚ್ಚರಿಯಾಗುವ ರೀತಿಯಲ್ಲಿ ಅನೇಕ ಹಿರಿಯ ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದು ಹೇಳಿದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನಗಳನ್ನು ಗೆಲ್ಲಿಸಿಕೊಡುವ ಮೂಲಕ ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೂಗೆಯಲು ಎಲ್ಲರೂ ಸಹಕರಿಸಬೇಕು. ಆ ನಿಟ್ಟಿನಲ್ಲಿ ಪಕ್ಷಕ್ಕೆ ಬರುವವರಿಗೆ ಸ್ವಾಗತವಿದೆ. ಚುನಾವಣೆ ವೇಳೆ ಕ್ಷೇತ್ರದಲ್ಲಿ ಯಾರ ಪರ ಜನರ ಒಲವಿದೆಯೋ ಅಂಥವರಿಗೆ ಪಕ್ಷದ ಟಿಕೆಟ್ ನೀಡಲಾಗುತ್ತದೆ. ಆದ್ದರಿಂದ ಪಕ್ಷಕ್ಕೆ ಹೊಸದಾಗಿ ಸೇರಿದವರು ಟಿಕೆಟ್‌ಗೆ ಆಸೆ ಪಡದೆ ಯಾರು ಕಣಕ್ಕಿಳಿಯುತ್ತಾರೋ ಅವರನ್ನು ಗೆಲ್ಲಿಸಲು ಪ್ರಯತ್ನ ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.