ನಾಳೆಯಿಂದ ಆನ್ಲೈನ್ಲ್ಲೇ ನಕ್ಷೆ
Team Udayavani, Apr 1, 2018, 12:55 PM IST
ಬೆಂಗಳೂರು: ನಗರದ ಜನರಿಗೆ ಸುಲಭ ಹಾಗೂ ಶೀಘ್ರವಾಗಿ ಕಟ್ಟಡ ನಕ್ಷೆ ಮಂಜೂರು ಮಾಡಲು ಬಿಬಿಎಂಪಿ ಜಾರಿಗೊಳಿಸಿರುವ “ಆನ್ಲೈನ್ ಕಟ್ಟಡ ನಕ್ಷೆ ಮಂಜೂರಾತಿ ವ್ಯವಸ್ಥೆ’ ಏಪ್ರಿಲ್ 2ರಿಂದ ಸಾರ್ವಜನಿಕರಿಗೆ ಲಭ್ಯವಾಗಲಿದೆ.
ನಕ್ಷೆ ಹಾಗೂ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರು ಪಾಲಿಕೆ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಹಾಗೂ ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಪಾಲಿಕೆ ಈ ವ್ಯವಸ್ಥೆ ಜಾರಿಗೊಳಿಸಿದ್ದು, ಮಾ.19ರಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹೊಸ ವ್ಯವಸ್ಥೆಗೆ ಚಾಲನೆ ನೀಡಿದ್ದರು.
ಅದರಂತೆ ಇನ್ನು ಮುಂದೆ ನಾಗರಿಕರು ಮನೆಯಲ್ಲಿ ಕುಳಿತೇ ಕಟ್ಟಡ ನಕ್ಷೆ, ಆರಂಭಿಕ ಪ್ರಮಾಣಪತ್ರ (ಸಿಸಿ), ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯಬಹುದಾಗಿದೆ. ಅಧಿಕಾರಿಗಳಿಗೂ ಅರ್ಜಿಗಳ ವಿಲೇವಾರಿ ಮಾಡಲು ನಿಗದಿತ ಕಾಲಮಿತಿ ನೀಡಲಾಗಿದೆ. ಜತೆಗೆ ಹೆಚ್ಚುವರಿ ದಾಖಲೆಗಳನ್ನು ಸಹ ನಾಗರಿಕರು ಆನ್ಲೈನ್ ಮೂಲಕವೇ ಸಲ್ಲಿಸಬಹುದು. ಇದರಿಂದಾಗಿ ನಾಗರಿಕರಿಗೆ ನಕ್ಷೆ ಬೇಗ ದೊರೆಯಲಿದೆ.
ಅರ್ಜಿ ಸಲ್ಲಿಸುವುದು ಹೇಗೆ?: ಬಿಬಿಎಂಪಿ ವೆಬ್ಸೈಟ್ www.bbmp.govi.in ಗೆ ಭೇಟಿ ನೀಡಿ ನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸಬೇಕು. ಈ ವೇಳೆ ನಕ್ಷೆಗೆ ಸಂಬಂಧಿಸಿದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ನಂತರ ಪ್ರಾರಂಭಿಕ ಪರಿಶೀಲನಾ ಶುಲ್ಕವನ್ನು ಆನ್ಲೈನ್ನಲ್ಲೇ ಪಾವತಿಸಬೇಕು. ಇದಾದ ಬಳಿಕ ಅಧಿಕಾರಿಗಳು ಸ್ಥಳ ಪರಿಶೀಲಿಸಿ ವರದಿಯನ್ನು ಅಪ್ಲೋಡ್ ಮಾಡಲಿದ್ದು, ಕೂಡಲೇ ಅರ್ಜಿದಾರರಿಗೆ ನಕ್ಷೆ ದೊರೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.