21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ
Team Udayavani, Mar 19, 2019, 12:30 AM IST
ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಮಾ.21ರಿಂದ ಆರಂಭವಾಗಿದ್ದು, 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 2847 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ರಾಜ್ಯದ 5,202 ಸರ್ಕಾರಿ ಪ್ರೌಢಶಾಲೆ, 3,244 ಅನುದಾನಿತ, 6004 ಅನುದಾನ ರಹಿತ ಸೇರಿ 14,450 ಪ್ರೌಢಶಾಲೆಗಳ 8,41,666 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸರ್ಕಾರಿ 1140 ಮತ್ತು ಅನುದಾನಿತ 1124,ಖಾಸಗಿ 583 ಕೇಂದ್ರಗಳು ಹಾಗೂ 46 ಸೂಕ್ಷ್ಮ, 7 ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರ ಸಹಿತವಾಗಿ 2,847 ಕೇಂದ್ರಗಳಿಗೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪರೀಕ್ಷೆಗೆ ಬೇಕಾದ ಎಲ್ಲ ರೀತಿಯ ಭದ್ರತಾ ಕ್ರಮವನ್ನು ಜಿಲ್ಲಾಡಳಿತ ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಮೂಲಕ ತೆಗೆದುಕೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಸಿ.ಜಾಫರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಮಂಡಳಿ ಅಧ್ಯಕ್ಷೆ ವಿ. ಸುಮಂಗಳಾ ಮಾತನಾಡಿ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಹಾಗೂ ಕೆಎಸ್ ಆರ್‌ಟಿಸಿ ವತಿಯಿಂದ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಪತ್ರ ತೋರಿಸಿ ಪ್ರಯಾಣ ಮಾಡಬಹುದು. ಏ.10ರಿಂದ ರಾಜ್ಯದ 230 ಕೇಂದ್ರಗಳಲ್ಲಿ ಮೌಲ್ಯಮಾಪನ ಆರಂಭವಾಗಲಿದೆ. 77,754 ಮೌಲ್ಯಮಾಪಕರು ಆನ್‌ಲೈನ್ ಪೋರ್ಟಿಂಗ್ ಮೂಲಕ ಅಂಕಗಳನ್ನು ನಮೂದಿಸಲಿದ್ದಾರೆ ಎಂದು ಹೇಳಿದರು.
ಪರೀಕ್ಷೆ ಸುಗಮ: ಪರೀಕ್ಷಾ ಸಿದ್ಧತೆಯ ಅಂಗವಾಗಿ ಪ್ರಶ್ನೆ ಪತ್ರಿಕೆ ಶೇಖರಿಸಿಡುವ ಎಲ್ಲ ಖಜಾನೆಗಳಲ್ಲಿ ಭದ್ರತಾ ಕೊಠಡಿಗಳು, ಜಿಲ್ಲಾ ಖಜಾನೆಗಳನ್ನು ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳ ಲೈವ್ ವಿಡಿಯೋಗಳನ್ನು ಮಂಡಳಿಯ ಕಂಟ್ರೋಲ್ ರೂಂನಿಂದ ವೀಕ್ಷಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಅಕ್ರಮಗಳ ತಡೆಗಟ್ಟಲು ಅಧಿಕಾರಿ ಮತ್ತು ಸಿಬ್ಬಂದಿಗೆ ಗುರುತಿನ ಚೀಟಿ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ವಾಚ್‌ಗೆ ನಿಷೇಧಿಸಲಾಗಿದ್ದು, ಅನಲಾಗ್(ಸಾಮಾನ್ಯ) ಕೈ ಗಡಿಯಾರ ಕಟ್ಟಿಕೊಂಡು ಪರೀಕ್ಷೆ ಬರೆಯಲು ಅವಕಾಶ ಇದೆ.
ಪರೀಕ್ಷೆಗೆ 10 ಸಾವಿರ
ವಿದ್ಯಾರ್ಥಿಗಳು ಅನರ್ಹ?
ವರ್ಷಪೂರ್ತಿ ಸರಿಯಾಗಿ ತರಗತಿಗಳಿಗೆ ಹೋಗದೇ ಹಾಜರಾತಿ ಕೊರತೆ ಎದುರಿಸುತ್ತಿರುವ 10 ಸಾವಿರ ವಿದ್ಯಾರ್ಥಿಗಳು ಮಾ.21ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅನರ್ಹರಾಗಿದ್ದಾರೆ. ವರ್ಷದ ಒಟ್ಟು ಹಾಜರಾತಿಯಲ್ಲಿ ಕನಿಷ್ಠ ಶೇ.75ರಷ್ಟು ಹಾಜರಾತಿ ಹೊಂದಿರಬೇಕು. ನಿರ್ದಿಷ್ಟ ಪ್ರಮಾಣಕ್ಕಿಂತ ಕಡಿಮೆ ಹಾಜರಾತಿ ಇರುವ 10,572 ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಿಂದ ವಂಚಿತರಾಗಿದ್ದಾರೆ.
ವಿಶಿಷ್ಟಚೇತನರು ಹಾಜರಿ
4651 ವಿಶಿಷ್ಟಚೇತನ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 1,451 ವಿದ್ಯಾರ್ಥಿಗಳಿಗೆ ಭಾಷಾ ವಿನಾಯಿತಿ ನೀಡಲಾಗಿದೆ. 480 ಅರ್ಹರಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ಬದಲಾಗಿ ಪರ್ಯಾಯ ವಿಷಯಗಳನ್ನು ಬರೆಯಲು ಅವಕಾಶ ಕಲ್ಪಿಸಲಾಗಿದೆ. ಮಾನ್ಯತೆ ನವೀಕರಿಸದ ಖಾಸಗಿ ಶಾಲೆಗಳ 20 ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳಿಗೆ ವರ್ಗಾವಣೆ
ಮಾಡಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ. ಸುಮಂಗಳಾ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.