ಮಾ.26ಕ್ಕೆ ಮೌಲ್ಯಮಾಪನ ಬಹಿಷ್ಕಾರ ತೀರ್ಮಾನ?
Team Udayavani, Mar 19, 2017, 11:36 AM IST
ಬೆಂಗಳೂರು: ಮೌಲ್ಯಮಾಪನಕ್ಕೆ ಗೈರು ಹಾಜರಾದರೆ 6 ತಿಂಗಳು ಜೈಲುಶಿಕ್ಷೆ ಅಥವಾ 1 ಲಕ್ಷ ರೂ. ದಂಡ ವಿಧಿಸುವ ಕರ್ನಾಟಕ ಶಿಕ್ಷಣ ತಿದ್ದುಪಡಿ ಕಾಯ್ದೆ ಸಾಧಕ-ಬಾಧಕ ಹಾಗೂ ಪಿಯುಸಿ ಮೌಲ್ಯಮಾಪನ ಬಹಿಷ್ಕಾರ ಕುರಿತು ಚರ್ಚಿಸಲು ಮಾರ್ಚ್ 26 ರಂದು ಸಭೆ ನಿಗದಿಯಾಗಿದೆ.
ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಬೇಡಿಕೆ ಈಡೇರಿಕೆ ಸಂಬಂಧ ಸರ್ಕಾರದ ಮೇಲೆ ಒತ್ತಡ ಹೇರಲು ಮಾರ್ಚ್ 26 ರಂದು ಸಭೆ ನಿಗದಿಪಡಿಸಲಾಗಿದ್ದು, ಅಲ್ಲಿ ಮೌಲ್ಯಮಾಪನ ಬಹಿಷ್ಕಾರ ಹಾಗೂ ಕರ್ನಾಟಕ ಶಿಕ್ಷಣ ತಿದ್ದುಪಡಿ ಕಾಯ್ದೆ ಕುರಿತು ಚರ್ಚಿಸಲಾಗುವುದು ಎಂದು ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರೆಲ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಉಪನ್ಯಾಸಕರಿಗೆ ವೇತನದ ವ್ಯತ್ಯಾಸ ಸರಿಪಡಿಸಿಕೊಳ್ಳಲು 2 ಹೆಚ್ಚುವರಿ ಬಡ್ತಿ ನೀಡುವಂತೆ 2010ರಿಂದ ಸರ್ಕಾರಕ್ಕೆ ಮನವಿ ಮಾಡುತ್ತಲೇ ಬಂದಿದ್ದೇವೆ. ಕಳೆದ ವರ್ಷ ಹೆಚ್ಚುವರಿ ಬಡ್ತಿ ನೀಡುತ್ತೇವೆ ಎಂದು ಮುಖ್ಯಮಂತ್ರಿ ಆಶ್ವಾಸನೆ ನೀಡಿದ ನಂತರ ಮುಷ್ಕರ ಕೈಬಿಟ್ಟಿದ್ದೆವು. ಆದರೆ, ಕೇವಲ 1 ಬಡ್ತಿ ಮಾತ್ರ ನೀಡಿದ್ದು, ಸರ್ಕಾರ ಮಾತಿಗೆ ತಪ್ಪಿದೆ ಎಂದು ದೂರಿದರು.
ಮೌಲ್ಯಮಾಪನ ಬಹಿಷ್ಕರಿಸುವ ಉಪನ್ಯಾಸಕರನ್ನು ಜೈಲಿಗೆ ಕಳುಹಿಸುವ ವಿಧೇಯಕ ಮೂಲಕ ಹೋರಾಟ ಹತ್ತಿಕ್ಕಲು ಸರ್ಕಾರ
ಮುಂದಾಗಿದೆ. ಇದಕ್ಕೆ ಹೆದರುವ ಪ್ರಶ್ನೆಯೇ ಇಲ್ಲ . ಈಗಾಗಲೇ ಕಳೆದ ಡಿಸೆಂಬರ್‌ನಲ್ಲಿಯೇ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 5 ಹಂತದಲ್ಲಿ ಹೋರಾಟ ಹಮ್ಮಿಕೊಂಡಿದ್ದೆವು.
ಮೊದಲ ಹಂತದಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದೆವು. ನಂತರ ಪ್ರಥಮ ಪಿಯುಸಿ ಪರೀಕ್ಷೆಗಳಲ್ಲಿ ಕಪ್ಪುಪಟ್ಟಿ ಧರಿಸಿ ಉಪನ್ಯಾಸಕರು ಪರೀಕ್ಷೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿದ್ದರು. ಮೂರನೇ ಹಂತವಾಗಿ ಮಾ.4ರಂದು ಆನಂದರಾವ್ ವೃತ್ತ ಸಮೀಪದ ಗಾಂಧಿ ಪ್ರತಿಮೆ ಎದುರು ಒಂದು ದಿನ ಸಾಂಕೇತಿಕ ಧರಣಿ ನಡೆಸಲಾಗಿತ್ತು.
4ನೇ ಹಂತದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬಹಿಷ್ಕರಿಸಬೇಕೆಂಬುದಾಗಿ ಉಪನ್ಯಾಸಕರೆಲ್ಲರೂ ನಿರ್ಧಾರ ಕೈಗೊಂಡಿದ್ದರು. ಆದರೆ, ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆನ್ನುವ ಕಾರಣಕ್ಕೆ ಪ್ರಸ್ತುತ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಕಪ್ಪುಪಟ್ಟಿ ಧರಿಸಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಮಾ.26ರಂದು ಬೆಳಗ್ಗೆ 11ಕ್ಕೆ ಶಾಸಕರ ಭವನದಲ್ಲಿ ಉಪನ್ಯಾಸಕರ ಸಭೆ ಕರೆಯಲಾಗಿದೆ. ಅಲ್ಲಿ ಮೌಲ್ಯಮಾಪನ ಬಹಿಷ್ಕಾರ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಕರ್ನಾಟಕ ಶಿಕ್ಷಣ ತಿದ್ದುಪಡಿ ಕಾಯ್ದೆಯಲ್ಲಿ ಉಪನ್ಯಾಸಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಕವಾಗಿರುವ ನಿಯಮದ ಬಗ್ಗೆಯೂ
ಚರ್ಚಿಸಲಿದ್ದು, ಮುಂದೆ ಏನು ಮಾಡಬೇಕು ಎಂಬುದರ ರೂಪುರೇಷೆ ಸಿದ್ಧಪಡಿಸಲಾಗುವುದು. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಕ್ಷೇಪ
ಈ ಮಧ್ಯೆ, ಉತ್ತರ ಪತ್ರಿಕೆ ಮೌಲ್ಯ ಮಾಪನ ಬಹಿಷ್ಕರಿಸುವ ಶಿಕ್ಷಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಅಖೀಲ ಭಾರತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ನಗರದಲ್ಲಿ ಶನಿವಾರ ನಡೆದ 65ನೇ ರಾಷ್ಟ್ರೀಯ ಶೈಕ್ಷಣಿಕ ಸಮಾವೇಶದಲ್ಲಿ ಮಾತನಾಡಿದ ಒಕ್ಕೂಟದ ವಿಭಾಗೀಯ ಜಂಟಿ ಕಾರ್ಯದರ್ಶಿ ಎಚ್.ಕೆ.ಮಂಜುನಾಥ್ , ಮೌಲ್ಯಮಾಪನ ಬಹಿಷ್ಕರಿಸುವ ಶಿಕ್ಷಕರ ವಿರುದ್ಧ ಕ್ರಮಕೈಗೊಳ್ಳುವ ಬದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೇಡಿಕೆ ಆಲಿಸಿ ಸಮಸ್ಯೆ ಪರಿಹರಿಸಬೇಕೇ ಹೊರತು ಕಾನೂನು ಕ್ರಮ ಸರಿಯಲ್ಲ. ಏಕರೂಪ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ, ವೇತನ ತಾರತಮ್ಯ ನಿವಾರಣೆ ಹಾಗೂ ಪಠ್ಯಪುಸ್ತಕ ರಾಷ್ಟ್ರೀಕರಣಗೊಳಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.