ಮಾರ್ಚ್ 6 ರಿಂದ ತೆನೆ ಪಾದಯಾತ್ರೆ
Team Udayavani, Mar 3, 2018, 6:00 AM IST
ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ಪರಸ್ಪರ ವಾಕ್ಸಮರ ಹಾಗೂ ಪಾದಯಾತ್ರೆ “ರಾಜಕಾರಣ’ದಲ್ಲಿ ಮುಳುಗಿದ್ದರೆ ಜೆಡಿಎಸ್ ಎರಡೂ ಪಕ್ಷಗಳ ವಿರುದ್ಧ ಹೋರಾಟ ಪ್ರಾರಂಭಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬಿಜೆಪಿ ಕೈಗೊಂಡಿರುವ ಪಾದಯಾತ್ರೆ, ಕಾಂಗ್ರೆಸ್‌ನ ಟೀಕಾಪ್ರಹಾರಕ್ಕೆ ಪ್ರತಿಯಾಗಿ ಮಾರ್ಚ್ 6 ರಿಂದ ಜೆಡಿಎಸ್ ಸಹ ಒಂದು ತಿಂಗಳ ಕಾಲ ಪಾದಯಾತ್ರೆ ಹಮ್ಮಿಕೊಂಡಿದೆ.
ಬಿಬಿಎಂಪಿ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದ ಹಗರಣ, ನಂತರ ಕಾಂಗ್ರೆಸ್ ಅಧಿಕಾರದಲ್ಲಿ ನಡೆದಿರುವ ಭ್ರಷ್ಟಾಚಾರ, ವೈಫಲ್ಯಗಳ ಬಗ್ಗೆ ಕರಪತ್ರ ಹಂಚುವ ಮೂಲಕ ಜನಜಾಗೃತಿ ಮೂಡಿಸಲು ಮುಂದಾಗಿದೆ.
ಮಾರ್ಚ್ 6 ರಂದು ಬಸವನಗುಡಿಯ ದೊಡ್ಡಗಣೇಶ ದೇವಾಲಯದಿಂದ ಪಾದಯಾತ್ರೆ ಆರಂಭವಾಗಲಿದ್ದು 17 ರವರೆಗೂ ಮುಂದುವರಿಯಲಿದೆ. ನಂತರ ಯುಗಾದಿ ಹಬ್ಬದ ಪ್ರಯುಕ್ತ ಎರಡು ದಿನ ಬಿಡುವು ನೀಡಿ ಮತ್ತೆ ಪ್ರಾರಂಭವಾಗಲಿದೆ ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ತಿಳಿಸಿದ್ದಾರೆ.
ಬಿಜೆಪಿ ಅವಧಿಯಲ್ಲಿ ಬಿಬಿಎಂಪಿಯಲ್ಲಿ ನಡೆದ ನೈಟ್ ಟೆಂಡರ್, ಕಡತಗಳಿಗೆ ಬೆಂಕಿ ಬಿದ್ದ ಪ್ರಕರಣ, ಡಿ ನೋಟಿಫಿಕೇಷನ್, ಕಾಂಗ್ರೆಸ್ ಅವಧಿಯಲ್ಲಿನ ಭ್ರಷ್ಟಾಚಾರ ಎಲ್ಲವನ್ನೂ ಜನರ ಮುಂದಿಡಲಿದ್ದೇವೆ. ಬೆಂಗಳೂರು ನಗರದ ಅಭಿವೃದ್ಧಿಗಾಗಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಮಾಡಿರುವ ಕೆಲಸಗಳನ್ನು ತಿಳಿಸಲಿದ್ದೇವೆ ಎಂದು ಹೇಳಿದ್ದಾರೆ.
ವಾಗ್ಧಾಳಿ
ಮತ್ತೂಂದೆಡೆ ಕೆ.ಆರ್.ಪೇಟೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಬೆಂಗಳೂರು ಸೇರಿದಂತೆ ರಾಜ್ಯವನ್ನು ಹತ್ತು ವರ್ಷಗಳಲ್ಲಿ ಲೂಟಿ ಮಾಡಿವೆ. ಮತ್ತೆ ಆ ಪಕ್ಷಗಳಿಗೆ ಮಣೆ ಹಾಕಬೇಡಿ ಎಂದು ತಿಳಿಸಿದ್ದಾರೆ.
ರಾಜ್ಯದ ಹಿತಾಸಕ್ತಿ ಕಾಪಾಡಲು ಜೆಡಿಎಸ್‌ನಿಂದ ಮಾತ್ರ ಸಾಧ್ಯ. ಕಾವೇರಿ, ಮಹದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆ ಗುದ್ದಾಡಿ ನ್ಯಾಯ ತಂದುಕೊಡಲು ತಾಕತ್ತು ಜೆಡಿಎಸ್‌ಗೆ ಮಾತ್ರ ಇದೆ ಎಂದು ಹೇಳಿದ್ದಾರೆ.
ಮತ್ತೂಂದೆಡೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು, ಹಾಸನ, ಚಿಕ್ಕಮಗಳೂರು, ತುಮಕೂರು ಭಾಗಗಳಲ್ಲಿ ಪ್ರವಾಸ ಕೈಗೊಂಡು ಜೆಡಿಎಸ್ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.
ವಿಧಾನಸಭೆ ಕ್ಷೇತ್ರಾವಾರು ಸಭೆ ನಡೆಸಿ ಸ್ಥಳೀಯ ಮುಖಂಡರಲ್ಲಿನ ಸಣ್ಣಪುಟ್ಟ ಅಸಮಾಧಾನ, ಗೊಂದಲ ನಿವಾರಿಸಿ ಗೆಲ್ಲುವುದೊಂದೇ ಗುರಿಯಾಗಬೇಕು. ಪಕ್ಷ ಉಳಿದರೆ ನೀವು, ನಾವೆಲ್ಲಾ. ಈ ಬಾರಿ ಅಧಿಕಾರಕ್ಕೆ ತರುವವರೆಗೂ ಯಾರೂ ವಿಶ್ರಮಿಸಬಾರದು ಎಂದು ಕಾರ್ಯಕರ್ತರು-ಮುಖಂಡರಲ್ಲಿ ಉತ್ಸಾಹ ತುಂಬಿ ಹೋರಾಟಕ್ಕೆ ಅಣಿಯಾಗಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
MUST WATCH
ಹೊಸ ಸೇರ್ಪಡೆ
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.