ಗಾಂಜಾ ಮಾರಾಟ: ಬಿಬಿಎಂ ವಿದ್ಯಾರ್ಥಿ ಬಂಧನ
Team Udayavani, Oct 29, 2018, 12:05 PM IST
ಬೆಂಗಳೂರು: ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬಿಬಿಎಂ ವಿದ್ಯಾರ್ಥಿ ಹಾಗೂ ಆತನ ಸ್ನೇಹಿತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಅತ್ರೇಯ (21) ಹಾಗೂ ಕೆ.ಎಸ್ ರಾಹುಲ್ ಬಂಧಿತರು.
ಆರೋಪಿಗಳಿಂದ 1.10 ಲಕ್ಷ ರೂ. ಮೌಲ್ಯದ 1.ಕೆ.ಜಿ ಗಾಂಜಾ, 16 ಎಲ್ಎಸ್ಡಿ ಪೇಪರ್ಸ್ ಹೆಸರಿನ ಮಾದಕ ವಸ್ತುವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಆರೋಪಿಗಳಿಬ್ಬರು ಕತ್ರಿಗುಪ್ಪೆ ಬಳಿಯ ಕಾಮಾಕ್ಯ ಚಿತ್ರಮಂದಿರ ಸಿಗ್ನಲ್ ಬಳಿಯ ಬ್ರ್ಯಾಂಡ್ ಫ್ಯಾಕ್ಟರಿ ಸಮೀಪ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ದರ್ಶನ್ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎಂ ವ್ಯಾಸಂಗ ಮಾಡುತ್ತಿದ್ದಾನೆ. ಸ್ನೇಹಿತರ ಜತೆಗೂಡಿ ಗಾಂಜಾ ಸೇವನೆ ಚಟ ಹತ್ತಿಸಿಕೊಂಡಿದ್ದ ದರ್ಶನ್ ಕ್ರಮೇಣ ತಾನೇ, ಮಾರಾಟ ಜಾಲದಲ್ಲಿ ತೊಡಗಿಸಿಕೊಂಡಿದ್ದ.
ತನಗೆ ಪರಿಚಯವಿರುವ ಮಾದಕ ವಸ್ತು ಸರಬರಾಜುದಾರರಿಂದ ಕಡಿಮೆ ಮೊತ್ತಕ್ಕೆ ಖರೀದಿಸಿ ತನ್ನ ಗೆಳೆಯರು ಹಾಗೂ ಕೆಲವು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಆತನ ಜತೆ ರಾಹುಲ್ ಕೂಡ ಸೇರಿಕೊಂಡು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.