ಮಾರುತಿ ಸುಜುಕಿ ಸೂಪರ್ ಕ್ಯಾರಿ ವರ್ಷದ ಎಸ್ಯುವಿ
Team Udayavani, Feb 24, 2018, 12:47 PM IST
ಬೆಂಗಳೂರು: ದೇಶದ ಮುಂಚೂಣಿ ವಾಹನ ತಯಾರಿಕಾ ಕಂಪನಿಯಾಗಿರುವ ಮಾರುತಿ ಸುಜುಕಿಯ ಸೂಪರ್ ಕ್ಯಾರಿ (ಮಿನಿ ಟ್ರಕ್) ವಾಹನವು ಪ್ರತಿಷ್ಠಿತ 2017ನೇ ಸಾಲಿನ ಸಿವಿ ವಾರ್ಷಿಕ ಪ್ರಶಸ್ತಿಗೆ ಭಾಜನವಾಗಿದೆ.
ಇತ್ತೀಚೆಗಷ್ಟೇ ಪೂರ್ಣಗೊಂಡ ಸ್ಪರ್ಧೆಯಲ್ಲಿ ಕಂಪನಿಯ ಸೂಪರ್ ಕ್ಯಾರಿ ವಾಹನವು ಎಸ್ಯುವಿ ಆಫ್ ದ ಇಯರ್ 2017 ಹಾಗೂ ವರ್ಷದ ವಾಣಿಜ್ಯ ಕಾರು ಎಂಬ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕಂಪನಿಯ ಉಪಾಧ್ಯಕ್ಷ (ಎಂಎಸ್ ಚಾನಲ್) ರಾಮ್ ಸುರೇಶ್ ಅಕೆಲ್ಲಾ ಹಾಗೂ ಪ್ರಧಾನ ವ್ಯವಸ್ಥಾಪಕ (ವಾಣಿಜ್ಯ ಮತ್ತು ಗ್ರಾಮೀಣ ಮಾರುಕಟ್ಟೆ ವಿಭಾಗ) ಅರುಣ್ ಅರೋರ ಅವರು ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಮ್ ಸುರೇಶ್ ಅಕೆಲ್ಲಾ, ವಾಹನ ಉದ್ಯಮದ ಪ್ರತಿಷ್ಠಿತ ಪ್ರಶಸ್ತಿಯನ್ನು ಕಂಪನಿಯ ಹೊಸ ಮಾದರಿಯ ಕಾರು ಪಡೆದಿರುವುದು ನಮಗೆ ಸಂತಸ ತಂದಿದೆ. ಇದರಿಂದ ಭಾರತೀಯ ಗ್ರಾಹಕರಿಗೆ ಬೇಕಾದ ವಿನ್ಯಾಸದ ವಾಹನ ರೂಪಿಸಲು ನಮಗೆ ಉತ್ತೇಜನ ದೊರೆತಿದೆ ಎಂದು ಹೇಳಿದರು.
ಸೂಪರ್ ಕ್ಯಾರಿ ವಾಹನವನ್ನು ಸಾಕಷ್ಟು ಪರೀಕ್ಷೆಗಳಿಗೆ ಒಳಪಡಿಸಿದ್ದರಿಂದ ಗ್ರಾಹಕರ ಬಯಕೆಗೆ ಅನುಕೂಲವಾಗುವ ರೀತಿ ವಿನ್ಯಾಸಗೊಳಿಸಲು ಸಾಧ್ಯವಾಗಿದೆ. ಮುಂದೆಯೂ ಕಂಪನಿ, ಗ್ರಾಹಕರಿಗೆ ಅಗತ್ಯವಾದ ವಾಹನ ಶ್ರೇಣಿಗಳ ತಯಾರಿಕೆಗೆ ಆದ್ಯತೆ ನೀಡುವ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಗುಣಮಟ್ಟದ ಉಪಕರಣಗಳನ್ನು ಅಳವಡಿಸಲು ಒತ್ತು ನೀಡಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.