Women passengers: ರೈಲ್ವೆ ಸ್ತ್ರಿ ಪ್ರಯಾಣಿಕರ ಸುರಕ್ಷತೆಗೆ ಮೇರಿ ಸಹೇಲಿ


Team Udayavani, Dec 8, 2023, 1:03 PM IST

TDY-9

ಬೆಂಗಳೂರು: ಮಹಿಳಾ ಸುರಕ್ಷತೆಗಾಗಿ ನೈಋತ್ಯ ರೈಲ್ವೇ ಬೆಂಗಳೂರು ವಿಭಾಗದಲ್ಲಿ ಪ್ರಾರಂಭಿಸಲಾದ ಮೇರಿ ಸಹೇಲಿ ಆರ್‌ಪಿಎಫ್ ಅಧಿಕಾರಿಗಳ ತಂಡವು ಮಹಿಳಾ ಪ್ರಯಾಣಿಕರಿಗೆ ರಕ್ಷಾ ಕವಚವಾಗುವುದರ ಜತೆಗೆ ಇತರೆ ಕಾನೂನು ಬಾಹಿರ ಚಟುವಟಿಕೆಯನ್ನು ಸಹ ತಡೆಯುವಲ್ಲಿ ಯಶಸ್ವಿಯಾಗಿದೆ. ರೈಲಿನಲ್ಲಿ ಪ್ರಯಾಣ ಬೆಳೆಸುವ ಮಹಿಳೆಯರ ಸುರಕ್ಷತೆಗೆ “ಆರ್‌ಪಿಎಫ್‌’ ಮಹಿಳಾ ಅಧಿಕಾರಿಗಳನ್ನು ಒಳಗೊಂಡ ತಂಡ ನಿಯೋಜಿಸಿದೆ.

ಇದು ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ 3 ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಇದುವರೆಗೆ 7,492 ವಿವಿಧ ಪ್ರಕರಣಗಳಲ್ಲಿ ಕೇವಲ ಮಹಿಳಾ ಸುರಕ್ಷತೆಗೆ ಮಾತ್ರವಲ್ಲದೇ ಅಪಹರಣ, ಬಾಲಕಾರ್ಮಿಕರು, ಮಕ್ಕಳ ಕಳ್ಳಸಾಗಣೆ ತಡೆಯುವಲ್ಲಿ ಸಫ‌ಲವಾಗಿದೆ. ಮೇರಿ ಸಹೇಲಿ ತಂಡ ರೈಲುಗಳು ನಿಲ್ದಾಣ ಬಿಡುವುದಕ್ಕೂ ಮುಂಚೆ ಆರ್‌ಪಿಎಫ್‌ ಮಹಿಳಾ ಸಿಬ್ಬಂದಿ ರೈಲಿನಲ್ಲಿ ಪ್ರವೇಶಿಸಿ ಅಲ್ಲಿ ಕುಳಿತ ಮಹಿಳಾ ಪ್ರಯಾಣಿಕರ ಜತೆ ಸಂವಾದ ನಡೆಸುತ್ತಾರೆ. ಈ ವೇಳೆ ಸೀಟಿನ ಸಂಖ್ಯೆ, ಮೊಬೈಲ್‌ ನಂಬರ್‌ ಪಡೆಯುತ್ತಾರೆ. ಸುರಕ್ಷತೆ ದೃಷ್ಟಿಯಿಂದ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಹಾಗೂ ತುರ್ತು ಸಂದರ್ಭದಲ್ಲಿ ಭದ್ರತಾ ಸಹಾಯವಾಣಿ ಸಂಖ್ಯೆ 182 ಸಂಪರ್ಕಿಸುವಂತೆ ಸಲಹೆ ನೀಡುತ್ತಾರೆ.

ಬಳಿಕ ಪ್ರಯಾಣದುದ್ದಕ್ಕೂ ಆರ್‌ಪಿಎಫ್ ಸಿಬ್ಬಂದಿ ಅವರೊಂದಿಗೆ ಸಂಪರ್ಕದಲ್ಲಿ ಇರುತ್ತಾರೆ. ಜತೆಗೆ ಪ್ರಯಾಣದ ನಡುವೆ ಬರುವ ನಿಲ್ದಾಣಗಳಲ್ಲಿನ ಆರ್‌ಪಿಎಫ್‌ ಸಿಬ್ಬಂದಿ ಕೂಡ ಸಂಬಂಧಪಟ್ಟ ಬೋಗಿಗಳ ಮೇಲೆ ನಿಗಾ ಇಡುತ್ತಾರೆ. 23 ಸಾವಿರ ರೈಲಿಗೆ ಭೇಟಿ: ಮಹಿಳಾ ಆರ್‌ಪಿಎಫ್‌ ತಂಡ ಅಧಿಕಾರಿಗಳು ಎಸ್‌ಬಿಸಿ (ಮೆಜೆಸ್ಟಿಕ್‌), ವೈಪಿಆರ್‌ (ಯಶವಂತಪುರ) ಬಿವೈಪಿಎಲ್‌ (ಬೈಯ್ಯಪ್ಪನಹಳ್ಳಿ)ನಲ್ಲಿ ಇದುವರೆಗೆ ಒಟ್ಟು 23 ಸಾವಿರ ರೈಲುಗಳಿಗೆ ಭೇಟಿ ನೀಡಿ, 8.62 ಲಕ್ಷ ಮಹಿಳಾ ಪ್ರಯಾಣಿಕರ ಜತೆಗೆ ಮಾತುಕತೆ ನಡೆಸಿ ಸಮಸ್ಯೆಗಳಿದ್ದರೆ ಸ್ಥಳದಲ್ಲಿ ಪರಿಹರಿಸಿದ್ದಾರೆ. ವಿಶೇಷವೆಂದರೆ ತುಂಬು ಗರ್ಭಿಣಿಗೆ ನೋವು ಕಾಣಿಸಿಕೊಂಡ ವೇಳೆ ಆರ್‌ ಪಿಎಫ್ ತಂಡವು ಅಗತ್ಯವಿರುವ ನೆರವು ಒದಗಿಸಿ, ಸುಖಕರ ಹೆರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಇದರ ಹೊರತಾಗಿಯೂ ಅನುಮಾನಾಸ್ಪದವಾಗಿ ರೈಲುಗಳಲ್ಲಿ ಪ್ರಯಾಣಿಸುತ್ತಿದ್ದ 33 ಮಕ್ಕಳನ್ನು ರಕ್ಷಿಸಿದ್ದಾರೆ. ಅದರಲ್ಲಿ 26 ಗಂಡು ಹಾಗೂ 7 ಹೆಣ್ಣು ಮಕ್ಕಳ ಇದ್ದಾರೆ. ಇವರ ಆಧಾರ ಕಾರ್ಡ್‌ ಮಾಹಿತಿ ಪರಿಶೀಲನೆಗೊಳಿಸಿ ಮನೆಗೆ ಸೇರಿಸುವ ಮಹತ್ವದ ಕೆಲಸವನ್ನು ಮಾಡಿದ್ದಾರೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಯಾಣ ಭಯ: ಸಾಮಾನ್ಯವಾಗಿ ಹೆಣ್ಣುಮಕ್ಕಳು ಹಾಗೂ ಒಂಟಿ ಮಹಿಳೆಯರು ರೈಲಿನಲ್ಲಿ ದೂರ ಪ್ರಯಾಣ ಮಾಡಲು ಹಿಂದೇಟು ಹಾಕುತ್ತಾರೆ. ಇದಕ್ಕೆ ಮುಖ್ಯ ಕಾರಣ ಪ್ರಯಾಣಿಸುವ ವೇಳೆಯಲ್ಲಿ ಆಗುವ ಕಹಿ ಘಟನೆಗಳು ಕಾರಣ. ಧರಿಸಿದ ಚಿನ್ನಾಭರಣ, ಪರ್ಸ್‌, ಮೊಬೈಲ್‌ ಕಳ್ಳತನ ಸೇರಿದಂತೆ ಅಸಭ್ಯ ವರ್ತನೆ, ಸಹ ಪ್ರಯಾಣಿಕರ ಅತಿರೇಕದ ವರ್ತನೆಗೆ ಹೆದರಿ ರೈಲು ಪ್ರಯಾಣದಿಂದ ದೂರ ಉಳಿಯುತ್ತಾರೆ.

ಮೇರಿ ಸಹೇಲಿ ಆರ್‌ಪಿಎಫ್ ಅಧಿಕಾರಿಗಳ ತಂಡ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಕಾರ್ಯಾಚರಿಸುತ್ತಿದೆ. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಹಿಳಾ ಪ್ರಯಾಣಿಕರ ಸುರಕ್ಷತೆ ಸೇರಿದಂತೆ ಮಾನವ ಕಳ್ಳ ಸಾಗಣೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆ ತಡೆಯುವಲ್ಲಿ ಯಶಸ್ವಿಯಾಗಿದೆ. – ಕುಸುಮಾ ಹರಿಪ್ರಸಾದ್‌, ಹೆಚ್ಚುವರಿ ವ್ಯವಸ್ಥಾಪಕಿ, ನೈಋತ್ಯ ರೈಲ್ವೇ ಬೆಂಗಳೂರು ವಿಭಾಗ

 

ಟಾಪ್ ನ್ಯೂಸ್

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.