ಮಾಸ್ಕ್, ಸಾಮಾಜಿಕ ಅಂತರ; ಒಂದು ಕೋಟಿ ದಂಡ ಸಂಗ್ರಹ
Team Udayavani, Jul 12, 2020, 9:28 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಹಾಗೂ ಮಾಸ್ಕ್ ಧರಿಸದವರ ಸಂಖ್ಯೆಯಲ್ಲಿ ಇನ್ನು ಇಳಿಕೆಯಾಗಿಲ್ಲ. ಈ ರೀತಿ ನಿಯಮ ಉಲ್ಲಂಘನೆ ಮಾಡುವವರಿಂದ ಕಳೆದ 32 ದಿನಗಳಲ್ಲಿ ಬರೋಬ್ಬರಿ 1.01 ಕೋಟಿ ರೂ.ದಂಡ ಸಂಗ್ರಹಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ ಮತ್ತು ಸಾಮಾಜಿಕ ಅಂತರ ಕಾಪಾಡದವರಿಂದ ತಲಾ 200ರೂ.ನಂತೆ ಮಾರ್ಷಲ್‌ಗಳು ದಂಡ ಸಂಗ್ರಹಿಸಲಾಗುತ್ತಿದ್ದು, ಇದಕ್ಕೆ ಪೊಲೀಸರು ಸಹ ಸಹಕಾರ ನೀಡಿದ್ದಾರೆ. ನಗರದಲ್ಲಿ ಪ್ರತಿದಿನ ಕನಿಷ್ಟ 200 ರಿಂದ 2 ಸಾವಿರ ಜನರು ನಿಯಮ ಉಲ್ಲಂಘನೆ ಮಾಡುತ್ತಿರುವುದು ವರದಿಯಾಗಿದೆ. ನಗರದಲ್ಲಿ ಬಿಬಿಎಂಪಿ ಮಾರ್ಷಲ್‌ಗಳು ಮತ್ತು ಪೊಲೀಸ್ ಸಿಬ್ಬಂದಿ ಜಂಟಿಯಾಗಿ ದಂಡ ವಿಧಿಸುವ ಕಾರ್ಯಾಚರಣೆ ನಡೆಸುತ್ತಿದ್ದು, ಜೂ.9 ರಿಂದ ಜು.10ರ ವರೆಗೆ (32 ದಿನ) 50,706 ಜನ ನಿಯಮ ಉಲ್ಲಂಘನೆ ಮಾಡಿದ್ದು, ಇವರಿಂದ 1,01,37,558 ರೂ. ದಂಡ ಸಂಗ್ರಹಿಸಲಾಗಿದೆ.
ಇದರಲ್ಲಿ ಸಾಮಾಜಿಕ ಅಂತರ ಕಾಪಾಡದ 3,747 ಜನರಿಂದ 7,51,013 ರೂ ಹಾಗೂ ಮಾಸ್ಕ್ ಧರಿಸದ 49,959 ಜನರಿಂದ 93,86,545 ರೂ. ದಂಡ ಸಂಗ್ರಹಿಸಲಾಗಿದೆ. ಇನ್ನು ಸಾಮಾಜಿಕ ಅಂತರ ಪಾಲಿಸದೆ ನಿರ್ಲಕ್ಷ್ಯ ವಹಿಸಿದ 149 ವಾಣಿಜ್ಯ ಮಳಿಗೆಗಳನ್ನು ತಾತ್ಕಾಲಿಕವಾಗಿ ಮುಚ್ಚಿಸಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.